Featured

ದೇಶದಲ್ಲಿ ಮೊದಲ ಬಾರಿಗೆ ನಾಯಿಗಳ ಉದ್ಯಾನವನ ನಿರ್ಮಾಣವಾಗಿದೆ ಇದು ಎಲ್ಲಿದೆ ಗೊತ್ತಾ…? ಓದಿ ಈ ವರದಿ

ಹೈದರಾಬಾದ್‌: ನಾಯಿಗಳಿಗಾಗಿಯೇ ಮೀಸಲಾದ ದೇಶದ ಮೊದಲ ಉದ್ಯಾನವನ ಇಲ್ಲಿನ ಕೊಂಡಾಪುರ್‌ ಪ್ರದೇಶದಲ್ಲಿ ಉದ್ಘಾಟನೆಗೆ ಅಣಿಯಾಗಿದೆ. 1.3 ಎಕರೆ ಪ್ರದೇಶದಲ್ಲಿರುವ ಈ ಕೇಂದ್ರ ನಾಯಿಗಳಿಗೆ ಅನುಕೂಲವಾದ ನಡಿಗೆಪಥ, ವಿಹಾರಕ್ಕೆ ಅನುಕೂಲವಾದ ಜಾಗ, ಕ್ಲಿನಿಕ್‌ ಸಹ ಒಳಗೊಂಡಿದೆ.

‘ನಾಯಿಗಳಿಗೆ ತರಬೇತಿ ಮತ್ತು ವ್ಯಾಯಾಮಕ್ಕೆ ಅನುಕೂಲವಾದ ಉಪಕರಣ, ಈಜುಕೊಳ, ಎರಡು ಹುಲ್ಲುಗಾವಲು ಪ್ರದೇಶ, ವರ್ತುಲ ಕ್ರೀಡಾಂಗಣ, ಆಟೋಟ ಕೇಂದ್ರಗಳು ಇದರಲ್ಲಿವೆ. ದೊಡ್ಡ ಮತ್ತು ಚಿಕ್ಕದಾದ ನಾಯಿಗಳಿಗೆ ಪ್ರತ್ಯೇಕವಾದ ವ್ಯವಸ್ಥೆ ಮಾಡಲಾಗಿದೆ’ ಎಂದು ಜಿಎಚ್‌ಎಂಸಿಯ ಅಧಿಕಾರಿಯೊಬ್ಬರು ತಿಳಿಸಿದರು.

ಕಳೆದ ಒಂದು ವರ್ಷದಿಂದ ಈ ಉದ್ಯಾನ ನಿರ್ಮಾಣವಾಗುತ್ತಿದ್ದು, ವಾಸ್ತುಶಿಲ್ಪ ಹಾಗೂ ಶ್ವಾನಪ್ರೇಮಿಗಳ ಸಲಹೆ ಮೇರೆಗೆ ಆಧುನಿಕ ಉಪಕರಣ ಹಾಗೂ ಕೇಂದ್ರದ ವಿನ್ಯಾಸ ಮಾಡಲಾಗಿದೆ.

ಹತ್ತು ದಿನದಲ್ಲಿ ಉದ್ಘಾಟನೆ: ಮುಂದಿನ ಹತ್ತು ದಿನಗಳಲ್ಲಿ ತೆಲಂಗಾಣ ನಗರಾಭಿವೃದ್ಧಿ ಸಚಿವ ಕೆ.ಟಿ.ರಾಮರಾವ್‌ ಉದ್ಘಾಟಿಸಲಿದ್ದಾರೆ. ಇದರ ಯಶಸ್ಸನ್ನು ಆಧರಿಸಿ, ನಗರದ ಪೂರ್ವಭಾಗದಲ್ಲಿ ಮತ್ತೊಂದು ಉದ್ಯಾನವನ ನಿರ್ಮಿಸುವ ಬಗ್ಗೆ ಯೋಜನೆ ರೂಪಿಸಲು ಜಿಎಚ್‌ಎಂಸಿ ನಿರ್ಧರಿಸಿದೆ.

ನಗರದಲ್ಲಿ 2.5 ಲಕ್ಷ ನಾಯಿ:ಜಿಎಚ್‌ಎಂಸಿ ನಡೆಸಿದ ಸಮೀಕ್ಷೆ ಪ್ರಕಾರ, ಪಶ್ಚಿಮ ವಲಯ ಮತ್ತು ಕೇಂದ್ರ ವಲಯದಲ್ಲಿ 2.5 ಲಕ್ಷ ಮಂದಿ ನಾಯಿಗಳನ್ನು ಸಾಕುತ್ತಿದ್ದಾರೆ. ನಗರದ ಕೇಂದ್ರಭಾಗದಲ್ಲಿ ಉದ್ಯಾನ ಇರುವ ಕಾರಣ ಇಲ್ಲಿಗೆ ನಾಯಿಗಳನ್ನು ಕರೆತರುವುದು ಸುಲಭ. ಉಳಿದಂತೆ ಮಾಮೂಲಿ ಉದ್ಯಾನದಲ್ಲಿ ನಾಯಿಗಳ ಓಡಾಟವನ್ನು ನಿಷೇಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ

Vishwa News 24

Recent Posts

ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ – vishwanews24

ಕೌಟುಂಬಿಕ ಕಲಹ : ಕೊಲೆಯಲ್ಲಿ  ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…

57 minutes ago

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ – vishwanews24

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್‌ನಲ್ಲಿ4.1 ತೀವ್ರತೆಯ ಭೂಕಂಪ  ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…

2 hours ago

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ – vishwanews24

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…

2 hours ago

ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆ ವಧು ಕರೆತರಲು  ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು – vishwanews24

ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆ ವಧು ಕರೆತರಲು  ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು ಹಾಸನ: ಕೆಲವೇ…

2 hours ago

ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ – vishwanews24

ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ ಪುತ್ತೂರು: ಉಪ್ಪಿನಂಗಡಿಯ ಬಜತ್ತೂರು ಗ್ರಾಮದ ನೀರಕಟ್ಟೆ…

2 hours ago

ಸುದೀಪ್‌ ಶೆಟ್ಟಿ ಆತ್ಮಹತ್ಯೆ ಪ್ರಕರಣ : ಪತ್ನಿ ಸೌಮ್ಯ ಶೆಟ್ಟಿಗೆ ಜಾಮೀನು ನಿರಾಕರಣೆ – vishwanews24

ಸುದೀಪ್‌ ಶೆಟ್ಟಿ ಆತ್ಮಹತ್ಯೆ ಪ್ರಕರಣ : ಪತ್ನಿ ಸೌಮ್ಯ ಶೆಟ್ಟಿಗೆ ಜಾಮೀನು ನಿರಾಕರಣೆ ಉಡುಪಿ : ಸುದೀಪ್‌ ಶೆಟ್ಟಿ ಆತ್ಮಹತ್ಯೆ…

2 hours ago