Featured

ದೇಶದಲ್ಲಿ ಮೋದಿ ಸುನಾಮಿ, 2019ರ ಬಳಿಕ ಚುನಾವಣೆಯೇ ಅಗತ್ಯವಿಲ್ಲ: ಸಾಕ್ಷಿ ಮಹಾರಾಜ್ – Vishwanews24

ಉನ್ನಾವೋ: ಮೋದಿ ಸುನಾಮಿ ಎಷ್ಟು ತೀವ್ರವಾಗಿದೆ ಎಂದರೆ, 2019ರ ಬಳಿಕ ಚುನಾವಣೆಯ ಅಗತ್ಯವೇ ಇರುವುದಿಲ್ಲ ಎಂದು ಉನ್ನಾವೋದಲ್ಲಿ ನಡೆಸಿದ ಸಾರ್ವಜನಿಕ ಸಮಾವೇಶದಲ್ಲಿ ಸಾಕ್ಷಿ ಮಹಾರಾಜ್‌ ಭವಿಷ್ಯ ನುಡಿದರು.

ಮೋದಿ ನಾಮ್‌ ಕಿ ಸುನಾಮಿ ಹೈ. ದೇಶ್‌ ಮೇ ಜಾಗೃತಿ ಆಯಿ ಹೈ. ಮುಝೆ ಲಗ್ತಾ ಹೈ ಕಿ ಇಸ್‌ ಚುನಾವ್‌ ಹೈ ಇಸ್‌ ದೇಶ ಕೇ ಲಿಯೆ ಪ್ರತ್ಯಾಶಿ ಜಿತ್ವಾನೆ ಕಾ ಕಮ್‌ ಕರೇಂಗೆʼ (ದೇಶದಲ್ಲಿ ಮೋದಿ ಸುನಾಮಿಯೇ ಎದ್ದಿದೆ. ದೇಶಾದ್ಯಂತ ಹೊಸ ಜಾಗೃತಿ ಮೂಡಿದೆ. 2019ರ ಚುನಾವಣೆ ಬಳಿಕ 2024ರಲ್ಲಿ ಮತ್ತೆ ಚುನಾವಣೆಯ ಅಗತ್ಯವೇ ಬಾರದು ಎಂದು ನನ್ನ ಅನಿಸಿಕೆ. ಇದೊಂದೇ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ನಾವು ಶ್ರಮಿಸಿದರೆ ಸಾಕುʼ ಎಂದು ಸಾಕ್ಷಿ ಮಹಾರಾಜ್‌ ಹೇಳಿದ್ದಾಗಿ ಎಎನ್‌ಐ ಸುದ್ದಿಸಂಸ್ಥೆ ವರದಿ ಮಾಡಿದೆ.

17ನೇ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ಮೋದಿ ಎರಡನೇ ಅವಧಿಗೆ ಆಯ್ಕೆ ಬಯಸಿದ್ದು, ಏಪ್ರಿಲ್‌ 11ರಿಂದ ಏಳು ಹಂತಗಳಲ್ಲಿ ಚುನಾವಣೆಗಳು ನಡೆಯಲಿವೆ. ಮೇ 23ರಂದು ಫಲಿತಾಂಶ ಪ್ರಕಟವಾಗಲಿದೆ.

ಕೇಂದ್ರ ಚುನಾವಣಾ ಆಯೋಗ ಮಾರ್ಚ್‌ 10ರಂದು ಚುನಾವಣೆಗಳ ದಿನಾಂಕಗಳನ್ನು ಪ್ರಕಟಿಸಿತ್ತು. ಲೋಕಸಭೆ ಚುನಾವಣೆಗಳ ಜತೆಗೆ ಅರುಣಾಚಲಪ್ರದೇಶ, ಆಂದ್ರಪ್ರದೇಶ, ಒಡಿಶಾ ಮತ್ತು ಸಿಕ್ಕಿಂ ವಿಧಾನಸಭೆಗಳಿಗೂ ಏಕಕಾಲಕ್ಕೆ ಚುನಾವಣೆ ನಡೆಯಲಿದೆ.

ಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿ ತಮಗೆ ಟಿಕೆಟ್‌ ನಿರಾಕರಿಸಿದರೂ ಸ್ವತಂತ್ರವಾಗಿ ಸ್ಪರ್ಧಿಸುವುದು ಖಚಿತ ಎಂದು ಈ ಮೊದಲು ಸಾಕ್ಷಿ ಮಹಾರಾಜ್‌ ಹೇಳಿದ್ದರು. ತಮಗೆ ಪಕ್ಷ ಟಿಕೆಟ್‌ ನಿರಾಕರಿಸುವುದು ಉತ್ತಮ ಆಯ್ಕೆಯಾಗದು ಎಂದು ಸಾಕ್ಷಿ ಮಹಾರಾಜ್‌ ಎಚ್ಚರಿಸಿದ್ದರು.

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

2 days ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

2 days ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

2 days ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

2 days ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

2 days ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

2 days ago