ಬೆಂಗಳೂರು: ಈ ದೇಶದಲ್ಲಿ ಶಾಂತಿ ಕದಲಿಸಬೇಕು ಎಂದು ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಜಾರಿಗೆ ತರುವ ತೀರ್ಮಾನ ತೆಗೆದುಕೊಂಡಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಾಗ್ದಾಳಿ ನಡೆಸಿದರು.
ಸಿಎಎ ಜಾರಿಗೆ ತಂದಿರುವ ಕುರಿತು ಮಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಕೇಂದ್ರ ಸರ್ಕಾರ ಮೂರುವರೆ ವರ್ಷ ನಿದ್ರೆ ಮಾಡುತ್ತಿತ್ತು. ಈಗ ಎಲೆಕ್ಷನ್ ಬಂದಿದೆ, ಈ ಅಸ್ಸಾಂ ಪಶ್ಚಿಮ ಬಂಗಾಳದಲ್ಲಿ ಜಾತಿ ಹೋರಾಟ ನಡೆಯಿತು. ಈ ದೇಶದಲ್ಲಿ ಶಾಂತಿ ಕದಲಿಸಬೇಕು ಎಂದು ಈ ತೀರ್ಮಾನ ತೆಗೆದುಕೊಂಡಿದ್ದಾರೆ ಎಂದು ಕೇಂದ್ರದ ವಿರುದ್ಧ ಕಿಡಿಕಾರಿದರು.
ಎಲ್ಲಾ ಜಾತಿ ಧರ್ಮ ರಕ್ಷಣೆ ಮಾಡುವುದು ನಮ್ಮ ಪಕ್ಷದ ಕರ್ತವ್ಯ. ಹೀಗಾಗಿ ಸಿಎಎ (CAA) ಜಾರಿಗೆ ತಂದಿರುವ ನಿರ್ಧಾರವನ್ನು ಖಂಡಿಸುವುದಾಗಿ ಡಿಕೆಶಿ ಹೇಳಿದರು.
ಇದೇ ವೇಳೆ ಚುನಾವಣೆಗೆ ಕಾಂಗ್ರೆಸ್ ಲಿಸ್ಟ್ ಬಗ್ಗೆ ಪ್ರತಿಕ್ರಿಯಿಸಿ, ಸ್ಕ್ರೀನಿಂಗ್ ಕಮಿಟಿ ಸಭೆ ಆಗಿದೆ. ಹೆಚ್ಚು ಕಡಿಮೆ ಎಲ್ಲಾ ಚರ್ಚೆ ಆಗಿದೆ. ಎಲ್ಲಾ ಹೆಸರುಗಳನ್ನು ಚರ್ಚೆ ಆಗಿದೆ. ಕೆಲವು ಸಿಂಗಲ್ ನೇಮ್ ಬಗ್ಗೆಯೂ ಸಹ ಚರ್ಚೆ ಆಗಿದೆ. ಸೆಂಟ್ರಲ್ ಎಲೆಕ್ಷನ್ ಕಮಿಟಿ ಯಾವತ್ತಾದರೂ ನಮಗೆ ಕರೆಯಬಹುದು. ದೆಹಲಿಯಲ್ಲಿ ಸಭೆ ನಡೆಯುತ್ತಿದೆ. ನಾವು ಇಲ್ಲಿ ಸಂಪೂರ್ಣ ಚರ್ಚೆ ಮುಗಿಸಿದ್ದೇವೆ. 14, 15 ಕ್ಕೆ ಕರೆಯಬಹುದು, ನಾನು ಹಾಗೂ ಚೀಪ್ ಮಿನಿಸ್ಟರ್ ಹೋಗ್ತೀವಿ. ಫೈನಲ್ ಆಗಿ ಮಾತಾಡಿಕೊಂಡು ಬರುತ್ತೇವೆ ಎಂದರು.
ಈ ಸೀಟ್ ವಿಚಾರದಲ್ಲಿ ನಮ್ಮ ಅಭಿಪ್ರಾಯ ಏನೇ ಇರಬಹುದು. ಆದರೆ ಹೈಕಮಾಂಡೇ ಅಂತಿಮ ತೀರ್ಮಾನ ಮಾಡಲಿದೆ. ಮಲ್ಲಿಕಾರ್ಜುನ ಖರ್ಗೆ ಅವರು ಅಂತಿಮ ತೀರ್ಮಾನ ಮಾಡುತ್ತಾರೆ. ಸಮಿತಿ ಮುಂದೆ ನಾವು ಮಂಡಿಸುತ್ತೇವೆ. 75% ಸಿಂಗಲ್ ನೇಮ್ ಆಗಿದೆ ಎಂದು ಡಿಕೆಶಿ ಹೇಳಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…