Featured

ದೇಶದಲ್ಲಿ ಹಕ್ಕಿ ಜ್ವರ ಗೆ ಮೊದಲ ಬಲಿ -Vishwanews24

ದೇಶದಲ್ಲಿ ಹಕ್ಕಿ ಜ್ವರ ಎಚ್​5ಎನ್​1 ಗೆ ಮೊದಲ ಬಲಿ -Vishwanews24

ನವದೆಹಲಿ : ದೇಶದಲ್ಲಿ ಇನ್‍ಫ್ಲುಯೆನ್ಝಾ ವೈರಸ್ ಸೋಂಕಿಗೆ ಮೊದಲ ಬಲಿಯಾಗಿದೆ. ಸಾಮಾನ್ಯವಾಗಿ ಹಕ್ಕಿಗಳಲ್ಲಿ ಕಂಡುಬರುವ ವೈರಸ್ ಇದಾಗಿದ್ದು ಎಚ್​5ಎನ್​1 ಎಂದೂ ಕರೆಯುತ್ತಾರೆ,ಹಕ್ಕಿ ಜ್ವರ ಮನುಷ್ಯನಿಗೆ ತಗುಲುವುದು ತೀರ ಅಪರೂಪವಾಗಿದ್ದು ಆದರೆ ಎಚ್ಚರ ಅತ್ಯಗತ್ಯವಾಗಿದೆ.

ಹರ್ಯಾಣದ ಮೂಲದ 12 ವರ್ಷದ ಬಾಲಕನಲ್ಲಿ ಜುಲೈ 2ರಂದು ಎಐಐಎಂಎಸ್‍ಗೆ( ಏಮ್ಸ್) ದಾಖಲಾಗಿದ್ದ. ಮೊದಲಿಗೆ ಬಾಲಕನಿಗೆ ಕೋವಿಡ್-19 ಸೋಂಕು ತಗುಲಿರಬೇಕು ವೈದ್ಯರು ಸಂಶಯಪಟ್ಟಿದ್ದು ಪರೀಕ್ಷೆ ನಡೆಸಿದಾಗ ನೆಗೆಟಿವ್ ವರದಿ ಬಂದಿತ್ತು. ಆದರೆ ಆಳವಾದ ಸಂಶೋಧನೆ ಕೈಗೊಂಡಾಗ ಹಕ್ಕಿಜ್ವರಕ್ಕೆ ಕಾರಣವಾಗುವ ಇನ್‍ಫ್ಲುಯೆಂಜಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಜು.20ರ ಮಂಗಳವಾರ ಸಾವನ್ನಪ್ಪಿದ್ದಾನೆ.

ಹಕ್ಕಿ ಜ್ವರ ಸಾಂಕ್ರಾಮಿಕ ಆಗಿರುವ ಕಾರಣಕ್ಕೆ ಬಾಲಕನ ಸಂಪರ್ಕಕ್ಕೆ ಬಂದ ದೆಹಲಿ ಏಮ್ಸ್​​ನ ಎಲ್ಲ ಸಿಬ್ಬಂದಿಯೂ ಐಸೋಲೇಟ್​ಗೆ ಒಳಗಾಗಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡಿದ ಏಮ್ಸ್​ ವೈದ್ಯರೊಬ್ಬರು, ಈ ಬಾಲಕನಿಗೆ ಲ್ಯುಕೋಮಿಯಾ ಮತ್ತು ನ್ಯುಮೋನಿಯಾ ಕೂಡ ಇತ್ತು. ಆತನಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡ ಬಳಿಕ ಐಸಿಯುಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು ಬಾಲಕನ ಸಂಪರ್ಕಕ್ಕೆ ಬಂದ ವೈದ್ಯರು, ದಾದಿಯರು ಸೇರಿ ಎಲ್ಲರೂ ತಮ್ಮನ್ನು ತಾವು ಐಸೋಲೇಟ್​ಗೆ ಒಳಪಡಿಸಿಕೊಂಡಿದ್ದಾರೆ. ಇನ್ನೇನಾದರೂ ಅವರಲ್ಲಿ ಹಕ್ಕಿಜ್ವರದ ಯಾವುದಾದರೂ ಲಕ್ಷಣ ಕಾಣಿಸಿಕೊಂಡರೆ ಕೂಡಲೇ ಅವರಿಗೂ ಚಿಕಿತ್ಸೆ ನೀಡಲಾಗುತ್ತದೆ ಎಂದು ಹೇಳಿದ್ದಾರೆ.

ಈ ವರ್ಷದ ಪ್ರಾರಂಭದಲ್ಲಿ ದೇಶಾದ್ಯಂತ ಹಲವು ಕಡೆಗಳಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡಿತ್ತು. ದೆಹಲಿ, ಕೇರಳ, ರಾಜಸ್ಥಾನ, ಮಧ್ಯಪ್ರದೇಶ, ಹಿಮಾಚಲ ಪ್ರದೇಶ, ಗುಜರಾತ್​, ಮಹಾರಾಷ್ಟ್ರ, ಹರ್ಯಾಣಗಳಲ್ಲಿ ಹಕ್ಕಿ ಜ್ವರದಿಂದ ಅನೇಕ ಪಕ್ಷಿಗಳು ಸಾವನ್ನಪ್ಪಿದ್ದವು. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಎಚ್ಚರಿಕೆಯನ್ನೂ ನೀಡಿತ್ತು. ಆದರೆ ಇದು ಮನುಷ್ಯನಲ್ಲಿ ಕಾಣಿಸಿಕೊಂಡ ಮೊದಲ ಪ್ರಕರಣವಾಗಿದೆ.

Vishwa News 24

Recent Posts

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

6 hours ago

ಮಂಗಳೂರು ವಿಮಾನ ನಿಲ್ದಾಣದಲ್ಲಿ ‘ಉಬರ್’ ಸೇವೆ ಆರಂಭ -vishwanews24

ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…

10 hours ago

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ -vishwanews24

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…

12 hours ago

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

13 hours ago

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ -vishwanews24

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…

14 hours ago

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ -vishwanews24

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…

14 hours ago