Featured

ದೇಶದಾದ್ಯಂತ ವಿದೇಶಿ ವಲಸಿಗರನ್ನು ಹೊರದಬ್ಬಲು ಮೋದಿ ಸರ್ಕಾರದಿಂದ ಮಾಸ್ಟರ್ ಪ್ಲಾನ್

ದೇಶದಾದ್ಯಂತ ರಾಷ್ಟ್ರೀಯ ಪೌರತ್ವ ನೊಂದಣಿ (ಎನ್ ಆರ್ ಸಿ) ನಡೆಸಲು ಕೇಂದ್ರ ಸರಕಾರ ಗಂಭೀರ ಚಿಂತನೆ ನಡೆಸುವ ಮೂಲಕ ಬುದ್ದಿಜೀವಿಗಳಿಗೆ ಶಾಕಿಂಗ್ ಸುದ್ದಿಯೊಂದನ್ನು ನೀಡಿದೆ.

ರಾಷ್ಟ್ರೀಯ ಪೌರತ್ವ ನೊಂದಣಿ (ಎನ್ ಆರ್ ಸಿ) ಬಗ್ಗೆ ದೇಶದಲ್ಲಿ ಚರ್ಚೆ ನಡೆಯುತ್ತಿದ್ದು, ಲೋಕಸಭೆಯಲ್ಲಿ ವಿರೋಧ ಪಕ್ಷಗಳು ಎನ್ ಆರ್ ಸಿ ಪರಿಷ್ಕೃತ ಕರಡು ಪಟ್ಟಿಯಿಂದಾಗಿ ಅಸ್ಸಾಂ ಜನರ ಪ್ರಜಾಪ್ರಭುತ್ವ ಹಕ್ಕುಗಳು ಮತ್ತು ಮಾನವ ಹಕ್ಕುಗಳನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿವೆ. 2013 ರಲ್ಲಿ ಸುಪ್ರೀಂಕೋರ್ಟ್ ನೀಡಿದ ಆದೇಶದಂತೆ ಕೇಂದ್ರ ಸರಕಾರ ಎನ್ ಆರ್ ಸಿ ಪರಿಷ್ಕರಣೆ ಮಾಡಿದೆ. ಆ ಮೂಲಕ 1951ರ ಬಳಿಕ ರಾಷ್ಟ್ರೀಯ ಪೌರತ್ವ ನೋಂದಣಿ ಪರಿಷ್ಕರಣೆಯಾಗುತ್ತಿರುವ ಮೊದಲ ರಾಜ್ಯ ಅಸ್ಸಾಂ ಆಗಿದೆಯಲ್ಲದೇ ಪರಿಷ್ಕರಣೆ ಕರಡು ಪಟ್ಟಿ ಬಿಡುಗಡೆ ರಾಜಕೀಯ ಆರೋಪ ಪ್ರತ್ಯಾರೋಪಗಳಿಗೆ ಕಾರಣವಾಗಿದೆ.

ಆದರೆ 1951ರ ಜನಗಣತಿ ಬಳಿಕ ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ ಆರ್ ಸಿ) ಸಿದ್ಧಪಡಿಸಲಾಗಿದ್ದು, ದೇಶದ ಪ್ರತಿ ವ್ಯಕ್ತಿಯ ಹೆಸರು, ವಯಸ್ಸು, ತಂದೆ/ಗಂಡನ ಹೆಸರು, ಮನೆ ಮುಂತಾದ ಮಾಹಿತಿಗಳು ಎನ್ ಆರ್ ಸಿಯಲ್ಲಿ ಇದೆ. ಮೊದಲು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಇದನ್ನು ಇಡಲಾಗಿತ್ತು, ಆದರೆ 1960ರ ಬಳಿಕ ಪೊಲೀಸ್ ಇಲಾಖೆಗೆ ಹಸ್ತಾಂತರ ಮಾಡಲಾಗಿದೆ. 1971ರ ಮಾರ್ಚ್ 24ಕ್ಕಿಂತ ಹಿಂದಿನಿಂದಲೂ ಅಸ್ಸಾಂನಲ್ಲಿ ನೆಲೆಸಿರುವವರು ಮತ್ತು ಅವರ ಮಕ್ಕಳನ್ನು ಮಾತ್ರ ಭಾರತದ ಪೌರರು ಎಂದು ಪರಿಗಣಿಸಲಾಗುತ್ತದೆ. ಆದರೆ ಎನ್.ಆರ್.ಸಿ ಕರಡಿನ ಹಿಂದೆ ಕೇಂದ್ರ ಸರಕಾರದ ಕೈವಾಡವಿದೆ ಎಂದು ಆಕ್ಷೇಪ ತೆಗೆದು ಸಂಸತ್ ನ ಒಳಗೆ, ಹೊರಗೆ ದನಿ ಎತ್ತರಿಸಿದ್ದ ಕಾಂಗ್ರೆಸ್ ಗೆ ದಿಟ್ಟ ಉತ್ತರವನ್ನೇ ಇದೀಗ ಕೇಂದ್ರ ಸರಕಾರ ನೀಡಿದೆ.

 

“ಅಸ್ಸಾಂನಲ್ಲಿರುವ ಅಕ್ರಮ ವಲಸಿಗರನ್ನು ಗುರುತಿಸುವ ಧೈರ್ಯವನ್ನು ಕಾಂಗ್ರೆಸ್ ಸರಕಾರ ತೋರಲಿಲ್ಲ” ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಇತ್ತೀಚೆಗಷ್ಟೇ ರಾಜ್ಯಸಭೆಯಲ್ಲಿ ಆರೋಪಿಸಿ ರಾಷ್ಟ್ರೀಯ ಪೌರ ನೊಂದಣಿ ಮೇಲಿನ ಚರ್ಚೆ ವೇಳೆ ಮಾತನಾಡಿದ್ದರು. ಈ ವೇಳೆ, ‘ಎನ್‍ಆರ್‍ಸಿಯು 1985ರಲ್ಲಿ ಅಂದಿನ ಪ್ರಧಾನಿ ರಾಜೀವ್ ಗಾಂಧಿ ಅವರು ಸಹಿ ಹಾಕಿದ್ದ ಅಸ್ಸಾಂ ಒಪ್ಪಂದದ ಮುಂದುವರಿದ ರೂಪ. ಸುಪ್ರೀಂ ಕೋರ್ಟ್ ಆದೇಶದಂತೆ ಎನ್ ಆರ್ ಸಿ ಪಟ್ಟಿ ಸಿದ್ಧಪಡಿಸಲಾಗಿದೆ. ಅದರಲ್ಲಿ 40 ಲಕ್ಷ ಜನರ ಹೆಸರು ಒಳಗೊಂಡಿಲ್ಲ.

 

ಅದರಂತೆಯೇ ಇದೀಗ ದೇಶದಾದ್ಯಂತ ರಾಷ್ಟ್ರೀಯ ಪೌರತ್ವ ನೊಂದಣಿ (ಎನ್‍ಆರ್‍ಸಿ) ನಡೆಸಲು ಕೇಂದ್ರ ಸರಕಾರ ಗಂಭೀರ ಚಿಂತನೆ ನಡೆಸಿದೆ.. ಅಧಿಕೃತ ಮತದಾರರ ಚೀಟಿ ಮತ್ತು ಇನ್ನಿತರ ಗುರುತು ಚೀಟಿ ದಾಖಲೆಗಳನ್ನು ಹೊಂದಿದವರೂ ರಾಷ್ಟ್ರೀಯ ಪೌರತ್ವ ಸಾಬೀತುಪಡಿಸಲು ಪೂರಕ ದಾಖಲೆ ಒದಗಿಸಲು ಸಾಧ್ಯವಾಗದೆ ಅಸ್ಸಾಂನಿಂದ ದೊಡ್ಡ ಸಂಖ್ಯೆಯಲ್ಲಿ ವಲಸೆ ಹೋಗಿದ್ದಾರೆ. ಕರ್ನಾಟಕ, ಮಹಾರಾಷ್ಟ್ರ, ಆಂಧ್ರಪ್ರದೇಶ, ದೆಹಲಿಗೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಕಾರ್ಮಿಕರಾಗಿ ವಲಸೆ ಹೋಗಿರುವುದಾಗಿ ಗುಪ್ತ ದಳ ಮಾಹಿತಿ ನೀಡಿದೆ. ಅಸ್ಸಾಂನಲ್ಲಿ ಎನ್ ಆರ್ ಸಿಗೆ ಎದುರಾದಂತೆ ಸಂಕೀರ್ಣ ಮತ್ತು ಸವಾಲುಗಳು ಉಳಿದ ರಾಜ್ಯಗಳಲ್ಲಿ ಎದುರಾಗುವುದಿಲ್ಲ. ಸರಕಾರ ಹೆಚ್ಚು ತೊಂದರೆ ಇಲ್ಲದೆ ಈ ಪ್ರಕ್ರಿಯೆ ನಡೆಸಬಹುದು ಎಂದು ಭದ್ರತಾ ಇಲಾಖೆ ಅಧಿಕಾರಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ಮೂಲಗಳು ಹೇಳಿವೆ.

ಈಗಾಗಲೇ, ಬಾಂಗ್ಲಾದೇಶದಿಂದ ಅಕ್ರಮವಾಗಿ ವಲಸೆ ಬಂದವರ ವಿಷಯವನ್ನು ಈಶಾನ್ಯ ರಾಜ್ಯದ ಮೂಲ ನಿವಾಸಿಗಳು ಭಾವನಾತ್ಮಕವಾಗಿ ನೋಡುತ್ತಿದ್ದು, ಈ ವಲಸಿಗರು ತಮ್ಮ ಸೌಲಭ್ಯಗಳನ್ನು ಕಸಿದುಕೊಳ್ಳುತ್ತಿದ್ದಾರೆಂಬ ಭಾವನೆ ಇರುವುದರಿಂದ ಎನ್ ಆರ್ ಸಿಗೆ ವಿರೋಧ ವ್ಯಕ್ತಪಡಿಸಿದರೆ, 2019ರ ಲೋಕಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ವ್ಯತಿರಿಕ್ತವಾಗಬಹುದೆಂದು ಅಸ್ಸಾಂ ಕಾಂಗ್ರೆಸ್ ಸಮಿತಿ ಹೈಕಮಾಂಡ್ ಗೆ ವರದಿ ನೀಡಿತ್ತು.. ಆದರೆ ಕಾಂಗ್ರೆಸ್ ನ ವೋಟ್ ಬ್ಯಾಂಕನ್ನೇ ಕಿತ್ತೊಗೆಯಲು ಕೇಂದ್ರ ಸರಕಾರವು ಇದೀಗ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳುವ ಮೂಲಕ ದೇಶದಲ್ಲಿ ಶಾಂತಿ ಸುವ್ಯವಸ್ಥೆಯನ್ನು ಸ್ಥಾಪಿಸಲು ಮುಂದಾಗಿದೆ.

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

60 minutes ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

1 hour ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

1 hour ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

2 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

2 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

4 hours ago