ದೇಶದಾದ್ಯಂತ ಸಂಚರಿಸಿ ಕಾಂಗ್ರೆಸ್‌ ಅಭ್ಯರ್ಥಿಗಳ ಪರ ಪ್ರಚಾರ ಮಾಡುತ್ತೇನೆ : ರಾಬರ್ಟ್‌ ವಾದ್ರಾ -Vishwanews24

Featured, ವಿಶೇಷ ಲೇಖನಗಳು

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಕಾಂಗ್ರೆಸ್‌ ಅಭ್ಯರ್ಥಿಗಳ ಪರವಾಗಿ ತಾವು ಪ್ರಚಾರ ನಡೆಸುವುದಾಗಿ ಪ್ರಿಯಾಂಕಾ ಗಾಂಧಿಯ ಪತಿ, ಉದ್ಯಮಿ ರಾಬರ್ಟ್‌ ವಾದ್ರಾ ಭಾನುವಾರ ಹೇಳಿದ್ದಾರೆ.

‘ಅತ್ತೆ ಸೋನಿಯಾ ಗಾಂಧಿ ಹಾಗೂ ಬಾವ ರಾಹುಲ್‌ ಗಾಂಧಿ ಅವರು ನಾಮಪತ್ರ ಸಲ್ಲಿಸುವಾಗ ನಾನು ಅವರ ಜೊತೆಗೆ ಇರುತ್ತೇನೆ. ಇದಾದ ನಂತರ ರಾಯ್‌ಬರೇಲಿ ಮತ್ತು ಅಮೇಠಿ ಮಾತ್ರವಲ್ಲದೆ ದೇಶದಾದ್ಯಂತ ಸಂಚರಿಸಿ ಕಾಂಗ್ರೆಸ್‌ ಅಭ್ಯರ್ಥಿಗಳ ಪರ ಪ್ರಚಾರ ಮಾಡುತ್ತೇನೆ’ ಎಂದು ವಾದ್ರಾ ಹೆಳಿದ್ದಾರೆ.

ರಾಹುಲ್‌ ಗಾಂಧಿ ಅವರು ಏಪ್ರಿಲ್‌ 10ರಂದು ಅಮೇಠಿ ಲೋಕಸಭಾ ಕ್ಷೇತ್ರಕ್ಕೆ ಮತ್ತು ಮರುದಿನ (ಏ.11) ಸೋನಿಯಾ ಗಾಂಧಿ ಅವರು ರಾಯ್‌ಬರೇಲಿ ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಸುವ ನಿರೀಕ್ಷೆ ಇದೆ.

ಕಾಂಗ್ರೆಸ್ ಅಭ್ಯರ್ಥಿಗಳ ಪರ ರಾಬರ್ಟ್ ವಾದ್ರಾ ಪ್ರಚಾರ ಕಾರ್ಯ ನಡೆಸಲು ಮುಂದಾಗಿರುವುದಕ್ಕೆ ವ್ಯಂಗ್ಯವಾಡಿರುವ ಸಚಿವೆ ಸ್ಮೃತಿ ಇರಾನಿ, ಅವರು ಎಲ್ಲಿ ಬೇಕಾದರೂ ಪ್ರಚಾರ ನಡೆಸಲಿ. ಆದರೆ ಈ ಸಂದರ್ಭದಲ್ಲಿ ಅಲ್ಲಿನ ಸುತ್ತಲಿರುವ ತಮ್ಮ ಜಮೀನುಗಳ ಬಗ್ಗೆ ಜನರು ನಿಗಾ ವಹಿಸಲಿ ಎಂದಿದ್ದಾರೆ.