ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ತಾವು ಪ್ರಚಾರ ನಡೆಸುವುದಾಗಿ ಪ್ರಿಯಾಂಕಾ ಗಾಂಧಿಯ ಪತಿ, ಉದ್ಯಮಿ ರಾಬರ್ಟ್ ವಾದ್ರಾ ಭಾನುವಾರ ಹೇಳಿದ್ದಾರೆ.
‘ಅತ್ತೆ ಸೋನಿಯಾ ಗಾಂಧಿ ಹಾಗೂ ಬಾವ ರಾಹುಲ್ ಗಾಂಧಿ ಅವರು ನಾಮಪತ್ರ ಸಲ್ಲಿಸುವಾಗ ನಾನು ಅವರ ಜೊತೆಗೆ ಇರುತ್ತೇನೆ. ಇದಾದ ನಂತರ ರಾಯ್‌ಬರೇಲಿ ಮತ್ತು ಅಮೇಠಿ ಮಾತ್ರವಲ್ಲದೆ ದೇಶದಾದ್ಯಂತ ಸಂಚರಿಸಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ಮಾಡುತ್ತೇನೆ’ ಎಂದು ವಾದ್ರಾ ಹೆಳಿದ್ದಾರೆ.
ರಾಹುಲ್ ಗಾಂಧಿ ಅವರು ಏಪ್ರಿಲ್ 10ರಂದು ಅಮೇಠಿ ಲೋಕಸಭಾ ಕ್ಷೇತ್ರಕ್ಕೆ ಮತ್ತು ಮರುದಿನ (ಏ.11) ಸೋನಿಯಾ ಗಾಂಧಿ ಅವರು ರಾಯ್‌ಬರೇಲಿ ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಸುವ ನಿರೀಕ್ಷೆ ಇದೆ.
ಕಾಂಗ್ರೆಸ್ ಅಭ್ಯರ್ಥಿಗಳ ಪರ ರಾಬರ್ಟ್ ವಾದ್ರಾ ಪ್ರಚಾರ ಕಾರ್ಯ ನಡೆಸಲು ಮುಂದಾಗಿರುವುದಕ್ಕೆ ವ್ಯಂಗ್ಯವಾಡಿರುವ ಸಚಿವೆ ಸ್ಮೃತಿ ಇರಾನಿ, ಅವರು ಎಲ್ಲಿ ಬೇಕಾದರೂ ಪ್ರಚಾರ ನಡೆಸಲಿ. ಆದರೆ ಈ ಸಂದರ್ಭದಲ್ಲಿ ಅಲ್ಲಿನ ಸುತ್ತಲಿರುವ ತಮ್ಮ ಜಮೀನುಗಳ ಬಗ್ಗೆ ಜನರು ನಿಗಾ ವಹಿಸಲಿ ಎಂದಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…