ನವದೆಹಲಿ: ದೇಶದಾದ್ಯಂತ 100 ಕೋಟಿ ಡೋಸ್ ಕೋವಿಡ್-19 ಲಸಿಕೆ ವಿತರಿಸಿರುವುದು ʼಐತಿಹಾಸಿಕ ಮತ್ತು ಹೆಮ್ಮೆಯ ಕ್ಷಣʼ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸಂತಸ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಸರಣಿ ಟ್ವೀಟ್‌ಗಳನ್ನು ಮಾಡಿರುವ ಶಾ, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ದೂರದೃಷ್ಟಿಯ ನಾಯಕತ್ವ ಮತ್ತು ನಿರಂತರ ಪ್ರೋತ್ಸಾಹದಿಂದಾಗಿ ನೂರು ಕೋಟಿ ಡೋಸ್ ಕೋವಿಡ್-19 ಲಸಿಕೆ ವಿತರಣೆಯ ಗುರಿ ಸಾಧಿಸಿದ್ದೇವೆ. ಆ ಮೂಲಕ ದಾಖಲೆ ಬರೆದಿರುವುದು ಐತಿಹಾಸಿಕ ಮತ್ತು ಹೆಮ್ಮೆಯ ಕ್ಷಣವಾಗಿದೆ. ಇದು ಅಸಾಧಾರಣ ಸಾಮರ್ಥ್ಯದೊಂದಿಗೆ ನವ ಭಾರತವನ್ನು ಜಗತ್ತಿಗೆ ಮತ್ತೊಮ್ಮೆ ಪರಿಚಯಿಸಿದೆ ಎಂದು ತಿಳಿಸಿದ್ದಾರೆ.
ಈ ಮೈಲುಗಲ್ಲು ಮುಟ್ಟಲು ನೆರವಾದ ದೇಶದ ಎಲ್ಲ ವಿಜ್ಞಾನಿಗಳು, ಸಂಶೋದಕರು ಮತ್ತು ಆರೋಗ್ಯ ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.
ʼಈ ಐತಿಹಾಸಿಕ ಕ್ಷಣದಲ್ಲಿ ಇಡೀ ದೇಶವನ್ನು ಅಭಿನಂದಿಸುತ್ತೇನೆ. ಹಲವು ಸವಾಲುಗಳನ್ನು ಮೀರಿ ದೊಡ್ಡ ಕಾರ್ಯ ಸಾಧಿಸಲು ಕೊಡುಗೆ ನೀಡಿದ್ದಕ್ಕಾಗಿ ಎಲ್ಲ ವಿಜ್ಞಾನಿಗಳು, ಸಂಶೋದಕರು ಮತ್ತು ಆರೋಗ್ಯ ಕಾರ್ಯಕರ್ತರಿಗೆ ಧನ್ಯವಾದ ತಿಳಿಸುತ್ತೇನೆ. ಪ್ರತಿಯೊಬ್ಬ ವ್ಯಕ್ತಿಯ ಆರೋಗ್ಯ ಮತ್ತು ಸುರಕ್ಷತೆ ಕಡೆಗಿನ ಪ್ರಧಾನಿ ಮೋದಿ ಅವರ ಬದ್ದತೆಯನ್ನು ಅಭಿನಂದಿಸುತ್ತೇನೆʼ ಎಂದು ಹೇಳಿದ್ದಾರೆ.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…