ನವದೆಹಲಿ,: ನರೇಂದ್ರ ಮೋದಿ ನೇತೃತ್ವದ ಭಾರತೀಯ ಜನತಾ ಪಕ್ಷ ಸ್ಪಷ್ಟ ಬಹುಮತದೊಂದಿಗೆ ಕೇಂದ್ರದಲ್ಲಿ ಅಧಿಕಾರಕ್ಕೆ ಬರಲು ಸಜ್ಜಾಗುತ್ತಿದೆ. ದೇಶದೆಲ್ಲೆಡೆ ಬಿಜೆಪಿ ಕಾರ್ಯಕರ್ತರು ಸಡಗರ ಸಂಭ್ರಮದಿಂದ ವಿಜಯೋತ್ಸವ ಆಚರಿಸುತ್ತಿದ್ದಾರೆ.
ಚುನಾವಣಾ ಮತ ಎಣಿಕೆ ಕಾರ್ಯ ಆರಂಭವಾಗಿ ಬಿಜೆಪಿ ಮುನ್ನಡೆ ಸಾಧಿಸಿದ ಆರಂಭಿಕ ಫಲಿತಾಂಶದಿಂದ ಉತ್ಸಾಹಗೊಂಡ ಕಾರ್ಯಕರ್ತರು ಎಲ್ಲೆಡೆ ಸಂಭ್ರಮದಿಂದ ಗೆಲುವಿನ ಸವಿಯನ್ನು ಆಚರಿಸಿದರು. ಪರಸ್ಪರ ಸಿಹಿ ವಿತರಿಸಿದ ಅಸಂಖ್ಯಾತ ಕಾರ್ಯಕರ್ತರು ನೃತ್ಯ ಮಾಡುತ್ತಾ ವಿಜಯೋತ್ಸವ ಆಚರಿಸುತ್ತಿದ್ದಾರೆ.
ನರೇಂದ್ರ ಮೋದಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಮತ್ತು ಪಕ್ಷದ ಹಿರಿಯ ನಾಯಕರ ಭಾವಚಿತ್ರಗಳನ್ನು ಹಿಡಿದಿದ್ದ ಕಾರ್ಯಕರ್ತರ ಜಯಘೋಷ ಮಾರ್ದನಿಸಿತು. ವಿಜಯದ ಸಂಕೇತ ಪ್ರದರ್ಶಿಸಿದ್ದ ಅವರಲ್ಲಿ ಸಂತಸ ಮನೆ ಮಾಡಿತ್ತು. ಹರ್ ಹರ್ ಮೋದಿ, ಅಮಿತ್ ಷಾ ಕೀ ಜೈ , ಔರ್ ಪಿರ್ ಏಕ್ ಬಾರ್ ಮೋದಿ ಸರ್ಕಾರ್ ಎಂಬ ಜಯ ಘೋಷಗಳನ್ನು ಕೂಗಿದ ಕಾರ್ಯಕರ್ತರು ಕೇಸರಿ ಧ್ವಜಗಳನ್ನು ಹಿಡಿದು ಸಂಭ್ರಮಿಸುತ್ತಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…