ದೇಶದ್ರೋಹಿಗಳ ಜೊತೆ ಕಲಾಪದಲ್ಲಿ ಕುಳಿತುಕೊಳ್ಳಲು ನಾವು ಸಿದ್ಧರಿಲ್ಲ, ಯತ್ನಾಳ್ ಅವರನ್ನು ಸಭಾಧ್ಯಕ್ಷರು ತಕ್ಷಣ ಅಮಾನತು ಮಾಡಬೇಕು : ಸಿದ್ದರಾಮಯ್ಯ -Vishwanews24

ಬೆಂಗಳೂರು: “ಒಬ್ಬ ಹಿರಿಯ ಸ್ವಾತಂತ್ರ್ಯ ಹೋರಾಟಗಾರನನ್ನು ಅವಮಾನಿಸಿರುವುದು ಸಂವಿಧಾನಕ್ಕೆ ಮಾಡಿರುವ ಅವಮಾನ. ಇಂತಹ ದೇಶದ್ರೋಹಿಗಳ ಜೊತೆ ಕಲಾಪದಲ್ಲಿ ಕುಳಿತುಕೊಳ್ಳಲು ನಾವು ಸಿದ್ಧರಿಲ್ಲ” ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಈ ವಿಚಾರವಾಗಿ ಟ್ವೀಟ್‌‌ ಮಾಡಿರುವ ಸಿದ್ದರಾಮಯ್ಯ ಅವರು, “ಬಸವನಗೌಡ ಪಾಟೀಲ್ ಯತ್ನಾಳ್ ಅವರು ಸದನಕ್ಕೆ ಅಗೌರವ ತೋರಿದ್ದಾರೆ. ಸಂವಿಧಾನದ ಹೆಸರಲ್ಲಿ ಪ್ರಮಾಣ ಮಾಡಿದವರು ಒಬ್ಬ ಹಿರಿಯ ಸ್ವಾತಂತ್ರ್ಯ ಹೋರಾಟಗಾರನಿಗೆ ಅವಮಾನಿಸಿರುವುದು ಸಂವಿಧಾನಕ್ಕೆ ಮಾಡಿರುವ ಅವಮಾನ. ಇಂತಹ ದೇಶದ್ರೋಹಿಗಳ ಜೊತೆ ಕಲಾಪದಲ್ಲಿ ಕುಳಿತುಕೊಳ್ಳಲು ನಾವು ಸಿದ್ಧರಿಲ್ಲ. ಅವರನ್ನು ಸಭಾಧ್ಯಕ್ಷರು ತಕ್ಷಣ ಅಮಾನತು ಮಾಡಬೇಕು” ಎಂದಿದ್ದಾರೆ.

“ಯತ್ನಾಳ್‌‌ ಹೇಳಿಕೆಯನ್ನು ಬಿಜೆಪಿ ನಾಯಕರು, ಮಂತ್ರಿಗಳು ಖಂಡಿಸುವ ಬದಲು ಬೆಂಬಲಿಸಿ ಮಾತನಾಡುತ್ತಾರೆ. ದೇಶದ ಸ್ವಾತಂತ್ರ್ಯ ಚಳುವಳಿಗೆ, ಸ್ವಾತಂತ್ರ್ಯ ಹೋರಾಟಗಾರರಿಗೆ ಪಕ್ಷದ ಶಾಸಕನೊಬ್ಬ ಅವಮಾನಿಸುವುದು ವೈಯಕ್ತಿಕ ಅಭಿಪ್ರಾಯ ಹೇಗಾಗುತ್ತದೆ? ಹಾಗಾದರೆ ಯತ್ನಾಳ್ ಹೇಳಿಕೆಗೆ ಬಿಜೆಪಿ ಸಮ್ಮತಿ ಇದೆಯೇ ಎಂಬುದನ್ನು ಅಧಿಕೃತವಾಗಿ ತಿಳಿಸಲಿ” ಎಂದು ಹೇಳಿದ್ದಾರೆ.

 

“ಸ್ವಾತಂತ್ರ್ಯಹೋರಾಟಗಾರ ದೊರೆಸ್ವಾಮಿಯವರನ್ನು ಒಂದು ಪಕ್ಷಕ್ಕೆ ಕಟ್ಟಿಹಾಕುವುದು ಸರಿಯಲ್ಲ. ಅವರು ಹಿಂದೆ ತುರ್ತುಪರಿಸ್ಥಿತಿಯ ಕಾಲದಲ್ಲಿ ಇಂದಿರಾಗಾಂಧಿ ವಿರುದ್ಧವೂ ಪ್ರತಿಭಟಿಸಿದ್ದರು. ನಾನು ಮುಖ್ಯಮಂತ್ರಿಯಾಗಿದ್ದಾಗ ನಮ್ಮ ಸರ್ಕಾರದ ವಿರುದ್ಧವೂ ಪ್ರತಿಭಟನೆ ನಡೆಸಿದ್ದರು” ಎಂದಿದ್ದಾರೆ.

“ಸದನಕ್ಕೆ ಅಗೌರವ ತೋರುವ‌ ಸದಸ್ಯರನ್ನು ಅಮಾನತು ಮಾಡಬೇಕೆಂದು ಮಧ್ಯಪ್ರದೇಶ ಹೈಕೋರ್ಟ್ ಆದೇಶ ನೀಡಿತ್ತು. ಆ ತೀರ್ಪನ್ನು ಆಧಾರವಾಗಿಟ್ಟುಕೊಂಡು ಯತ್ನಾಳ್ ಅವರನ್ನು ಅಮಾನತು ಮಾಡುವಂತೆ ಸಭಾಧ್ಯಕ್ಷರಲ್ಲಿ ಒತ್ತಾಯ ಮಾಡಿದ್ದೇವೆ. ಆದರೆ ನಮಗೆ ಮಾತನಾಡಲು ಅವಕಾಶವನ್ನೇ ನೀಡದಿರುವ ಸಭಾಧ್ಯಕ್ಷರ ವರ್ತನೆ ಸರಿ ಅಲ್ಲ” ಎಂದು ಟ್ವೀಟ್‌ ಮಾಡಿದ್ದಾರೆ.

 

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

3 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

5 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

5 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

5 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

6 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

6 hours ago