Featured

ದೇಶದ್ರೋಹ ಹೇಳಿಕೆ ನೀಡಿದವರ ನಾಲಿಗೆ ಕತ್ತರಿಸಬೇಕಾಗುತ್ತದೆ : ಎಚ್ಚರಿಕೆ ನೀಡಿದ ಶಾಸಕ ರಾಜುಗೌಡ – Vishwanews24

ರಾಯಚೂರು : ಜಮ್ಮು-ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ದೇ‍ಶದ್ರೋಹಿಗಳು ಸಂತಸ ವ್ಯಕ್ತಪಡಿಸುತ್ತಿರುವ ಹಿನ್ನಲೆಯಲ್ಲಿ ಬುದ್ಧಿಜೀವಿಗಳು ಹೇಳಿಕೆ ನೀಡುವಾಗ ಅವರ ನಾಲಗೆ ಮೇಲೆ ಹಿಡಿತವಿರಿಲಿ. ಇಲ್ಲದಿದ್ದರೆ ನಾಲಿಗೆ ಕತ್ತರಿಸಬೇಕಾಗುತ್ತದೆ ಎಂದು ಸುರಪುರ ಶಾಸಕ ರಾಜುಗೌಡ ಎಚ್ಚರಿಕೆ ನೀಡಿದ್ದಾರೆ.

ಜಮ್ಮು-ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಯೋಧರ ಸಾವಿಗೆ ಸಂತಾಪ ಸೂಚಿಸಿ, ಬಳಿಕ ಮಾತನಾಡಿದ ಅವರು, ಪುಲ್ವಾಮದಲ್ಲಿ ನಡೆದ ಘೋರ ಉಗ್ರರ ದಾಳಿಯಲ್ಲಿ ವೀರ ಯೋಧರು ಹುತಾತ್ಮರಾಗಿರುವುದು ಬೇಸರದ ಸಂಗತಿ. ಇದರಿಂದ ಇಡೀ ದೇಶಕ್ಕೆ ನೋವಾಗಿದೆ. ಯೋಧರ ಹತ್ಯೆಯನ್ನು ಸಂಭ್ರಮಿಸುವ ಪ್ರಜೆಗಳು, ನಟರು, ರಾಜಕಾರಣಿಗಳು ಹಾಗೂ ಉದ್ಯಮಿಗಳು ಯಾರೇ ಆಗಲಿ ಅವರು ದೇಶದ್ರೋಹಿಗಳು. ಯಾರೇ ದೇಶದ್ರೋಹ ಹೇಳಿಕೆ ನೀಡಿದರೂ ಅವರ ಪ್ರತಿರೋಧಕ್ಕೆ ಯುವಕರ ಪಡೆ ಸಿದ್ಧವಾಗಿದೆ ಎಂದು ಕಿಡಿಕಾರಿದ್ದಾರೆ.

ಅಲ್ಲದೇ ಸಿಆರ್‌ಪಿಎಫ್‌ನ 40 ಕ್ಕೂ ಅಧಿಕ ಯೋಧರು ಬಲಿಯಾಗಿದ್ದಾರೆ. ಈ ಕೃತ್ಯವೆಸಗಿದ ಪಾಕ್ ಉಗ್ರರನ್ನು ಬುಡ ಸಮೇತ ಕಿತ್ತು ಎಸೆಯಬೇಕು ಎಂದು ನಾನು ಮೋದಿ ಅವರಿಗೆ ಮನವಿ ಮಾಡುತ್ತೇನೆ. ಗಡಿ ಯೋಧರು ಯಾವ ಜಾತಿ, ಪಕ್ಷ ಭೇದವಿಲ್ಲದೆ ನಾವೆಲ್ಲ ಭಾರತೀಯರೆಂದು ದೇಶವನ್ನು ಕಾಯುತ್ತಾರೆ. ಹಾಗೆಯೇ ನಾವೆಲ್ಲ ಒಂದಾಗಿ ಉಗ್ರರ ವಿರುದ್ಧ ನಿಲ್ಲಬೇಕು ಎಂದು ಅವರು ತಿಳಿಸಿದ್ದಾರೆ.

Vishwa News 24

Recent Posts

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

4 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

4 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

5 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

5 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

5 hours ago

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು  – vishwanews24

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …

6 hours ago