Featured

ದೇಶದ ಅಗ್ರಗಣ್ಯ ತಜ್ಞರಲ್ಲಿ ಒಬ್ಬರಾಗಿದ್ದ ಖ್ಯಾತ ಅರ್ಥಶಾಸ್ತ್ರಜ್ಞ ಅಭಿಜಿತ್‌ ಸೇನ್‌ ನಿಧನ – Vishwanews24

ದೇಶದ ಅಗ್ರಗಣ್ಯ ತಜ್ಞರಲ್ಲಿ ಒಬ್ಬರಾಗಿದ್ದ ಖ್ಯಾತ ಅರ್ಥಶಾಸ್ತ್ರಜ್ಞ ಅಭಿಜಿತ್‌ ಸೇನ್‌ ನಿಧನ

ನವದೆಹಲಿ : ಯೋಜನಾ ಆಯೋಗದ ಮಾಜಿ ಸದಸ್ಯ ಹಾಗೂ ಗ್ರಾಮೀಣ ಆರ್ಥಿಕತೆ ವಿಷಯದಲ್ಲಿ ದೇಶದ ಅಗ್ರಗಣ್ಯ ತಜ್ಞರಲ್ಲಿ ಒಬ್ಬರಾಗಿದ್ದ ಖ್ಯಾತ ಅರ್ಥಶಾಸ್ತ್ರಜ್ಞ ಅಭಿಜಿತ್‌ ಸೇನ್‌ (72) ಸೋಮವಾರ ರಾತ್ರಿ ನಿಧನರಾಗಿದ್ದಾರೆ.

ಸೋಮವಾರ ರಾತ್ರಿ 11 ಗಂಟೆ ಸುಮಾರಿಗೆ ಅವರಿಗೆ ಹೃದಯಾಘಾತವಾಗಿತ್ತು. ನಾವು ಅವರನ್ನು ಆಸ್ಪತ್ರೆಗೆ ಸೇರಿಸುವಷ್ಟರಲ್ಲಿ ಅವರು ಕೊನೆಯುಸಿರೆಳೆದಿದ್ದರು ಎಂದು ಅಭಿಜಿತ್‌ ಅವರ ಸಹೋದರ ಡಾ. ಪ್ರಣಬ್ ಸೇನ್ ಹೇಳಿದ್ದಾರೆ.

ನಾಲ್ಕು ದಶಕಗಳಿಗೂ ಹೆಚ್ಚು ಕಾಲದ ವೃತ್ತಿಜೀವನದಲ್ಲಿ ಅಭಿಜಿತ್ ಸೇನ್ ನವದೆಹಲಿಯ ಜವಾಹರಲಾಲ್ ನೆಹರೂ ವಿಶ್ವವಿದ್ಯಾನಿಲಯದಲ್ಲಿ (ಜೆಎನ್‌ಯು) ಅರ್ಥಶಾಸ್ತ್ರವನ್ನು ಬೋಧಿಸಿದರು. ಕೃಷಿ ವೆಚ್ಚ ಮತ್ತು ಬೆಲೆಗಳ ಆಯೋಗದ ಅಧ್ಯಕ್ಷರು ಸೇರಿದಂತೆ ಹಲವಾರು ಪ್ರಮುಖ ಸರ್ಕಾರಿ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ ಅಭಿಜಿತ್‌ ಅವರು 2004 ರಿಂದ 2014 ರವರೆಗೆ ಯೋಜನಾ ಆಯೋಗದ ಸದಸ್ಯರಾಗಿದ್ದರು.

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

22 hours ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

23 hours ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

23 hours ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

24 hours ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

24 hours ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

1 day ago