ಬಂಟ್ವಾಳ: ದೇಶದಲ್ಲಿ ಮಹತ್ಮಾಗಾಂಧಿ ಉದ್ಯೋಗ ಖಾತರಿ ಯೋಜನೆ ಸಹಿತ ಸರಣಿ ಅಭಿವೃದ್ಧಿ ಯೋಜನೆಗಳನ್ನು ಘೋಷಿಸುವುದರ ಜೊತೆಗೆ ಸಮಗ್ರವಾಗಿ ಅನುಷ್ಠಾನಗೊಳಿಸಿದ ಹಿನ್ನೆಲೆ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರಕ್ಕೆ ಮಾತ್ರ ಇದೆ. ಆದರೆ, ಕಳೆದ ಅವಧಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಕೇವಲ ಭರವಸೆ ಮತ್ತು ಭಾವನಾತ್ಮಕ ಬಣ್ಣದ ಮಾತುಗಳಿಂದ ಜನರನ್ನು ವಂಚಿಸುತ್ತಲೇ ಬಂದಿದೆ ಎಂದು ಮಾಜಿ ಸಚಿವ ಬಿ.ರಮಾನಥ ರೈ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.
ದೇಶದಲ್ಲಿ ಜನರಿಗೆ ಆಹಾರ ಭದ್ರತೆ, ಮಾಹಿತಿ ಹಕ್ಕು, ಶಿಕ್ಷಣದ ಹಕ್ಕು (ಆರ್‌ಟಿಇ), ರಾಷ್ಟ್ರೀಯ ಆರೋಗ್ಯ ಅಭಿಯಾನ, ಸಾಕ್ಷರತಾ ಆಂದೋಲನ, ಸರ್ವಶಿಕ್ಷಾ ಅಭಿಯಾನ ಮತ್ತಿತರ ಯೋಜನೆಗಳನ್ನು ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಯಶಸ್ವಿಯಾಗಿ ಅನುಷ್ಠಾನಗೊಳಿಸಿದೆ ಎಂದು ಅವರು ತಿಳಿಸಿದರು.
ಭ್ರಷ್ಟಾಚಾರದ ವಿರುದ್ಧ ಮಾತನಾಡುವ ಪ್ರಧಾನಿ ನರೇಂದ್ರ ಮೋದಿ ಅವರ ತವರು ರಾಜ್ಯ ಗುಜರಾತ್‌ನಲ್ಲಿ ಸುಪ್ರೀಂ ಕೋರ್ಟ್ ಆದೇಶದ ಬಳಿಕವೂ ಲೋಕಾಯುಕ್ತ ಅನುಷ್ಠಾನಕ್ಕೆ ಬಂದಿಲ್ಲ. ಹಾಲಿ ಸಂಸದ ನಳಿನ್ ಕುಮಾರ್ ಕಟೀಲು ಕಳಪೆ ರಾಜಕಾರಣಿ. ಇವರಿಂದ ಜಿಲ್ಲೆಯಲ್ಲಿ ಯಾವುದೇ ಅಭಿವೃದ್ಧಿ ಕಾಮಗಾರಿ ನಡೆದಿಲ್ಲ ಎಂದು ಆರೋಪಿಸಿದರು.
ಈ ಹಿಂದೆ ಯುಪಿಎ ಸರ್ಕಾರವು ಜನತೆಗೆ ನೀಡಿದ್ದ ಎಲ್ಲಾ ಭರವಸೆ ಈಡೇರಿಸಿದ್ದು, ಈಗ ಪ್ರತೀ ವ್ಯಕ್ತಿಗೆ ₹ 72 ಸಾವಿರ, ಅಂದರೆ ಪ್ರತೀ ತಿಂಗಳಿಗೆ ₹ 6 ಸಾವಿರದಂತೆ ಕನಿಷ್ಟ ಆದಾಯ ನೀಡುವುದಾಗಿ ಪ್ರಣಾಳಿಕೆಯಲ್ಲಿ ಘೋಷಿಸಿದೆ. ಕಾಂಗ್ರೆಸ್ ಮುಖಂಡರ ಮನೆಗೆ ಐಟಿ ದಾಳಿ ನಡೆಸುವ ಮೂಲಕ ಕೀಳು ಮಟ್ಟದ ರಾಜಕೀಯ ನಡೆಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರು ಕೇವಲ ಭಾಷಣಕ್ಕೆ ಮಾತ್ರ ಸೀಮಿತ ಎಂದರು.
ಈ ಬಾರಿ ಜಿಲ್ಲೆಯಲ್ಲಿ ಕಾಂಗ್ರೆಸ್ – ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ಮಿಥುನ್ ರೈಗೆ ಸ್ಪರ್ಧಿಸಲು ಅವಕಾಶ ನೀಡುವ ಮೂಲಕ ಜನತೆ ಬಯಸಿದ ಬದಲಾವಣೆಗೆ ಸೂಕ್ತ ಅವಕಾಶ ಒದಗಿಸಿದೆ ಎಂದರು.
ಕುಂದಾಪುರ: ಹೋಂ ಸ್ಟೇ ಎನ್ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…
ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ :…
ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…
ಉಡುಪಿ: ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…