Featured

ದೇಶದ ಅಭಿವೃದ್ಧಿ ಮಾಡಲು ಐದು ವರ್ಷ ಸಾಕಾಗುವುದಿಲ್ಲ ಮೋದಿ ಮತ್ತೆ ಪ್ರಧಾನಿಯಾಗಬೇಕು : ಕಂಗನಾ ರಣಾವತ್

ಮುಂಬೈ : ಪ್ರಧಾನಿ ಮೋದಿ ಅವರು ಮತ್ತೆ ಅಧಿಕಾರಕ್ಕೆ ಬರಬೇಕು ಎಂದು ಹೇಳಿದ ಬಾಲಿವುಡ್‌ನ ಕ್ವೀನ್ ಚಿತ್ರದ ನಟಿ ಕಂಗನಾ ರಣಾವತ್ ರಾಜಕೀಯ ಪ್ರವೇಶಿಸುವ ಬಗ್ಗೆ ಸುಳಿವು ಬಿಟ್ಟುಕೊಟ್ಟಿದ್ದಾರೆ.ಇನ್ನು ಎಲ್ಲರಿಗೂ ತಿಳಿದಿರುವಂತೆ ಕಂಗನಾ ಈ ಹಿಂದೆಯೇ ನಾನು ಪ್ರಧಾನಿ ಮೋದಿ ಅವರ ಬಹು ದೊಡ್ಡ ಅಭಿಮಾನಿ ಎಂದಿದ್ದರು. ಅವರ ಯಶಸ್ವಿ ಜೀವನ ನಮಗೆ ರೋಲ್ ಮಾಡೆಲ್. ಒಬ್ಬ ಚಾಯ್ ವಾಲ ಪ್ರಧಾನಿ ಆಗುವುದು, ಸಾಮಾನ್ಯ ಮನುಷ್ಯನ ಸಾಧನೆ ಮಾತ್ರವಲ್ಲ. ಅದು ನಮ್ಮ ಪ್ರಜಾಪ್ರಭುತ್ವದ ಯಶಸ್ಸು ಕೂಡ ಎನ್ನುವ ಅಭಿಪ್ರಾಯವನ್ನು ಹೊರ ಹಾಕಿದ್ದರು. ಸದ್ಯ ಸಿನಿಮಾರಂಗದಲ್ಲಿ ಬ್ಯುಸಿ ಆಗಿರುವ ಕಂಗನಾ ರಣಾವತ್ ರಾಜಕೀಯ ಪ್ರವೇಶದ ಬಗ್ಗೆ ಸುಳಿವು ನೀಡಿದ್ದಾರೆ.

ಇತ್ತೀಚಿಗಷ್ಟೆ ಖಾಸಗಿ ವಾಹಿನಿಯ ಸಂದರ್ಶನವೊಂದರಲ್ಲಿ ರಾಜಕೀಯದ ಬಗ್ಗೆ ಮಾತನಾಡಿದ ಕಂಗನಾ ದೇಶದಲ್ಲಿನ ಸಾಮಾಜಿಕ ಅಸಮಾನತೆಗಳ ಬಗ್ಗೆಯೂ ಕೂಡ ತಮ್ಮ ಕಾಳಜಿ ತೋರಿದ್ದರು. ಇದೇ ಸಮಯದಲ್ಲಿ ಬಾಲಿವುಡ್ ಬೋಲ್ಡ್ ಬೆಡಗಿ ರಾಜಕೀಯಕ್ಕೆ ಬರುವ ಸಣ್ಣ ಸುಳಿವು ನೀಡಿದ್ದಾರೆ. ಯುವ ಪಡೆ ದೇಶದ ಆಡಳಿತ ನಡೆಸಬೇಕು ಎನ್ನುವ ಉದ್ದೇಶ ಹೊಂದಿರುವ ಕಂಗನಾ ಲೋಕಸಭೆ ಚುನಾವಣೆಯಲ್ಲಿ ರಾಜಕೀಯ ಪ್ರವೇಶಿಸುವ ಊಹಾಪೋಹ ಇದೆ. ಕಂಗಾನ ದೇಶಕ್ಕೆ ಸೇವೆ ಸಲ್ಲಿಸುವ ಮನಸ್ಸು ತಮಗಿದೆ ಎನ್ನುವುದನ್ನು ತಿಳಿಸಿದ್ದು, ಬಾಲಿವುಡ್ ಅಂಗಳದಲ್ಲಿ ರಾಜಕೀಯದ ಸುದ್ದಿ ದಟ್ಟವಾಗಿದೆ.
ಇತ್ತೀಚಿಗೆ ಕಂಗನಾ ೨೦೧೯ರಲ್ಲಿ ಮೋದಿ ಕೇಂದ್ರದಲ್ಲಿ ಮತ್ತೆ ಅಧಿಕಾರಕ್ಕೆ ಬರುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮೋದಿ ಅವರು ಮತ್ತೆ ಅಧಿಕಾರಕ್ಕೆ ಬರಬೇಕು. ದೇಶದ ಅಭಿವೃದ್ಧಿ ಮಾಡಲು ಐದು ವರ್ಷ ಸಾಕಾಗುವುದಿಲ್ಲ ಎಂದಿದ್ದಾರೆ.

ಜಾಹಿರಾತು: vyshali Bar& Family Restaurant kaup: 

prop: NAYESH P SHETTY: 9620427036

Vishwa News 24

Recent Posts

ಕೋಳಿ ಫಾರ್ಮ್‌ ಹೆಸರಲ್ಲಿ ಡ್ರಗ್ಸ್ ಫ್ಯಾಕ್ಟರಿ : ಮೂರು ರಾಜ್ಯಗಳಿಗೆ ಸಪ್ಲೈ ಮಾಡ್ತಿದ್ದ 7 ಮಂದಿ ಪೊಲೀಸರ ವಶಕ್ಕೆ – vishwanews24

ಕೋಳಿ ಫಾರ್ಮ್‌ ಹೆಸರಲ್ಲಿ ಡ್ರಗ್ಸ್ ಫ್ಯಾಕ್ಟರಿ : ಮೂರು ರಾಜ್ಯಗಳಿಗೆ ಸಪ್ಲೈ ಮಾಡ್ತಿದ್ದ 7 ಮಂದಿ ಪೊಲೀಸರ ವಶಕ್ಕೆ ಬೆಳಗಾವಿ:…

39 minutes ago

ಮಂಗಳೂರು: ಅಕ್ರಮ ಗೋ ಸಾಗಾಟ : 23 ಗೋವುಗಳ ರಕ್ಷಣೆ – vishwanews24

ಮಂಗಳೂರು: ಅಕ್ರಮ ಗೋ ಸಾಗಾಟ : 23 ಗೋವುಗಳ ರಕ್ಷಣೆ ಮಂಗಳೂರು: ನಗರದ ಕುಳೂರು ರಾಷ್ಟ್ರೀಯ ಹೆದ್ದಾರಿ ಬಳಿ ಅಕ್ರಮವಾಗಿ…

43 minutes ago

ಬ್ರಹ್ಮಾವರ: ತಂದೆ-ತಾಯಿಯನ್ನೇ ಸುತ್ತಿಗೆಯಿಂದ ಹೊಡೆದು ಹತ್ಯೆಗೈದ ಮಗ – vishwanews24

ಬ್ರಹ್ಮಾವರ: ತಂದೆ-ತಾಯಿಯನ್ನೇ ಸುತ್ತಿಗೆಯಿಂದ ಹೊಡೆದು ಹತ್ಯೆಗೈದ ಮಗ ಬ್ರಹ್ಮಾವರ: ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ಮಗನೇ ತಂದೆ-ತಾಯಿಯನ್ನು ಸುತ್ತಿಗೆಯಿಂದ ಹೊಡೆದು ಹತ್ಯೆಗೈದಿರುವ…

48 minutes ago

ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಕುಖ್ಯಾತ ಗ್ಯಾಂಗ್‌ಸ್ಟರ್ ಬಂಧನ ; ಪರಾರಿಯಾಗಲು ಯತ್ನಿಸಿದ ಆರೋಪಿ ಕಾಲಿಗೆ ಪೊಲೀಸರಿಂದ ಗುಂಡೇಟು – vishwanews24

 ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಕುಖ್ಯಾತ ಗ್ಯಾಂಗ್‌ಸ್ಟರ್ ಬಂಧನ ; ಪರಾರಿಯಾಗಲು ಯತ್ನಿಸಿದ ಆರೋಪಿ ಕಾಲಿಗೆ ಪೊಲೀಸರಿಂದ ಗುಂಡೇಟು ಉಡುಪಿ:…

54 minutes ago

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ – vishwanews24

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…

2 days ago

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ – vishwanews24

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ ಬೀದರ್‌: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…

2 days ago