ಉಳ್ಳಾಲ: ಭಾರತ ಸರಕಾರದ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ 2018ರ ಎನ್‌ಐಆರ್‌ಎಫ್ ರ್‍ಯಾಂಕಿಂಗ್ಸ್‌ನಲ್ಲಿ ದೇಶದ 100 ಉನ್ನತ ವಿಶ್ವವಿದ್ಯಾನಿಲಯಗಳಲ್ಲಿ ದೇರಳಕಟ್ಟೆಯ ಯೇನಪೊಯ ವಿಶ್ವವಿದ್ಯಾನಿಲಯ 92ನೇ ಸ್ಥಾನವನ್ನು ಪಡೆದುಕೊಂಡಿದೆ.
ದೇಶದ ಸುಮಾರು ಎಂಟು ನೂರು ವಿ.ವಿ.ಗಳನ್ನು ಮೌಲ್ಯಾಂಕನ ಮಾಡಲಾಗಿದ್ದು, ಅದರಲ್ಲಿ ಪ್ರತಿಷ್ಠಿತ ನೂರು ವಿ.ವಿ.ಗಳನ್ನು ಆರಿಸಿದ್ದು ಯೇನಪೊಯ ವಿಶ್ವವಿದ್ಯಾನಿಲಯ 92ನೇ ರ್‍ಯಾಂಕ್ ಪಡೆದುಕೊಂಡಿದೆ. ಶೈಕ್ಷಣಿಕ ಹಾಗೂ ಆಡಳಿತಾತ್ಮಕ ಅಭಿವೃದ್ಧಿ, ಬೋಧನೆ ಮತ್ತು ಕಲಿಕಾ ನಿಯತಾಂಕದಲ್ಲಿ 19ನೇ ಸ್ಥಾನದಲ್ಲಿದ್ದರೆ, ಸಂಸ್ಥೆಗಳು ಮತ್ತು ಕಾಲೇಜುಗಳನ್ನು ಮೌಲ್ಯಮಾಪನ ಮಾಡಲು ಬಳಸಲಾಗುವ 5 ಪ್ರಮುಖ ನಿಯತಾಂಕಗಳಲ್ಲಿ ಇದು 7ನೇ ಸ್ಥಾನವನ್ನು ಪಡೆದುಕೊಂಡಿದೆ. ಶಿಕ್ಷಣದ ಗುಣಮಟ್ಟ ಮತ್ತು ಸಾರ್ವಜನಿಕ ಗ್ರಹಿಕೆ ಸುಧಾರಿಸುವ ದಿಕ್ಕಿನಲ್ಲಿ ವಿಶ್ವವಿದ್ಯಾನಿಲಯ ಗಮನಾರ್ಹವಾದ ಕ್ರಮಗಳನ್ನು ಕೈಗೊಂಡಿದ್ದು, ಸಂಸ್ಥೆಯನ್ನು ಇನ್ನಷ್ಟು ಎತ್ತರಕ್ಕೆ ಬೆಳೆಸುವ ನಿಟ್ಟಿನಲ್ಲಿ ರ್‍ಯಾಂಕಿಂಗ್ ಪಟ್ಟಿಯಲ್ಲಿ ಪ್ರತಿಷ್ಠಿತ ಸಾಲಿನಲ್ಲಿ ಗುರುತಿಸಿಕೊಂಡಿರುವುದು ಸಂಸ್ಥೆಗೆ ಪ್ರೇರಣೆ ನೀಡಲಿದೆ ಎಂದು ಯೇನಪೊಯ ವಿವಿ ಕುಲಾಧಿಪತಿ ವೈ. ಅಬ್ದುಲ್ ಕುಂಞಿ ತಿಳಿಸಿದ್ದಾರೆ.
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…