ಮಂಗಳೂರು: ದೇಶದ ಎಲ್ಲಾ ಹಗರಣಗಳ ಹಿಂದೆ ಕಾಂಗ್ರೆಸ್ಸಿನ ಕೈ ಇರುವಂತೆ, ದೇಶದ ಎಲ್ಲಾ ಗಲಭೆಗಳ ಹಿಂದೆಯೂ ಕಾಂಗ್ರೆಸ್ ನಾಯಕರ ಕೈ ಇರುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ದೇಶದ ಎಲ್ಲಾ ಹಗರಣಗಳ ಹಿಂದೆ ಕಾಂಗ್ರೆಸ್ಸಿನ ಕೈ ಇರುವಂತೆ, ದೇಶದ ಎಲ್ಲಾ ಗಲಭೆಗಳ ಹಿಂದೆಯೂ ಕಾಂಗ್ರೆಸ್ ನಾಯಕರ ಕೈ ಇರುತ್ತದೆ. ಅವರು ಅಧಿಕಾರದಲ್ಲಿದ್ದಾಗ ದೇಶ ವಿರೋಧಿಗಳಿಗೆ ಬೆಂಬಲ ನೀಡುವುದು, ಗಲಭೆಕೋರರ ಮೇಲಿನ ಪ್ರಕರಣಗಳನ್ನು ರದ್ದು ಮಾಡುವುದು, ಅಧಿಕಾರ ಕಳೆದುಕೊಂಡಾಗ ದೇಶದಲ್ಲಿ ಗಲಭೆ ಎಬ್ಬಿಸಿ ಸಮಾಜದ ಶಾಂತಿ ಕದಡಿ ಆಡಳಿತ ಪಕ್ಷದ ಮೇಲೆ ಗೂಬೆ ಕೂರಿಸುವುದು. ಇದು ಐಎನ್‌ಸಿ ನಾಯಕರ ಸಿದ್ಧಾಂತ ಎಂದಿದ್ದಾರೆ.
ಸಮಾಜದಲ್ಲಿ ಬೆಂಕಿ ಹಚ್ಚುವ ಸಮಾಜಘಾತುಕರನ್ನು ಮಟ್ಟಹಾಕಿ ಶಾಂತಿಯುತ ಸಮಾಜ ಕಟ್ಟಬೇಕಾದ ರಾಷ್ಟ್ರೀಯ ಪಕ್ಷವೊಂದು ರಾಜಕೀಯ ಲಾಭಕ್ಕಾಗಿ ಬೆಂಕಿ ಇಡುವ ಕೆಲಸಕ್ಕೆ ಇಳಿದಿರುವುದು ಅತ್ಯಂತ ಹೀನಾಯ ಎಂದು ಹೇಳಿದ್ದಾರೆ.
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…