Featured

ದೇಶದ ಕಳಪೆ ಆರ್ಥಿಕ ಪರಿಸ್ಥಿತಿಯ ಹಿಂದೆ ಯಾರು ಇದ್ದಾರೆ ? ಸ್ಪಷ್ಟನೆ ನೀಡುವಂತೆ ಮೋದಿ ಸರ್ಕಾರವನ್ನು ಆಗ್ರಹಿಸಿದ ಪ್ರಿಯಾಂಕಾ ಗಾಂಧಿ -Vishwanews24

ನವದೆಹಲಿ: 2019-20ರ ವಾರ್ಷಿಕ ಒಟ್ಟು ದೇಶೀಯ ಉತ್ಪನ್ನ (ಜಿಡಿಪಿ) 7 ವರ್ಷದಲ್ಲೇ ಕನಿಷ್ಠ ಶೇಕಡಾ 5 ಕ್ಕೆ ಕುಸಿದಿದ್ದರಿಂದಾಗಿ ಪ್ರಧಾನಿ ಮೋದಿ ಸರ್ಕಾರದ ವಿರುದ್ಧ  ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಕಿಡಿ ಕಾರಿದ್ದಾರೆ.

ಮೈಕ್ರೋಬ್ಲಾಗಿಂಗ್ ಸೈಟ್ ಟ್ವಿಟ್ಟರ್ ನಲ್ಲಿ ಪ್ರಿಯಾಂಕಾ ಗಾಂಧಿ ಟ್ವೀಟ್ ಮಾಡಿ ಕೇಂದ್ರ ಸರ್ಕಾರವನ್ನು ತರಾಟೆಗೆ ತಗೆದುಕೊಂಡಿದ್ದಾರೆ. ‘ಅಚ್ಚೆ ದಿನ್’ ಭರವಸೆ ನೀಡಿದ ಭಾರತೀಯ ಜನತಾ ಪಕ್ಷ (ಬಿಜೆಪಿ) ನೇತೃತ್ವದ ಸರ್ಕಾರವು ಆರ್ಥಿಕತೆಯನ್ನು ಪಂಕ್ಚರ್ ಮಾಡಿದೆ ಎಂದಿದ್ದಾರೆ.ಇನ್ನು ಮುಂದುವರೆದು ಇತ್ತಕಡೆ ಜಿಡಿಪಿನೂ ಬೆಳವಣಿಗೆ ಹೊಂದಿಲ್ಲ ಅಥವಾ ಯುಎಸ್ ಡಾಲರ್ ವಿರುದ್ಧ ರೂಪಾಯಿ ಬಲವಾಗಿಲ್ಲ, ಮತ್ತು ಉದ್ಯೋಗಗಳು ಕಾಣೆಯಾಗಿವೆ ಎಂದು ಟೀಕಿಸಿದ್ದಾರೆ.

ದೇಶದ ಕಳಪೆ ಆರ್ಥಿಕ ಪರಿಸ್ಥಿತಿಯ ಹಿಂದೆ ಯಾರು ಇದ್ದಾರೆ ಎಂಬ ಬಗ್ಗೆ ಸ್ಪಷ್ಟನೆ ನೀಡುವಂತೆ ಪ್ರಿಯಾಂಕಾ ಗಾಂಧಿ ಮೋದಿ ಸರ್ಕಾರವನ್ನು ಆಗ್ರಹಿಸಿದರು. 2019-20ರ ಅವಧಿಯಲ್ಲಿ ಜಿಡಿಪಿ ಏಳು ವರ್ಷಗಳಲ್ಲೇ ಕನಿಷ್ಠ ಶೇ 5 ಕ್ಕೆ ಇಳಿದಿದೆ ಎಂದು ಸರ್ಕಾರದ ಅಂಕಿ ಅಂಶಗಳು ತೋರಿಸಿದ ನಂತರ ಅವರು ಸರ್ಕಾರದ ವಿರುದ್ಧ ಪ್ರತಿಪಕ್ಷಗಳು ಆಕ್ರೋಶ ವ್ಯಕ್ತಪಡಿಸಿವೆ.

‘2019-20ರ ತ್ರೈಮಾಸಿಕ 1 ರಲ್ಲಿ ಸ್ಥಿರವಾದ (2011-12) ಬೆಲೆಗಳು 35.85 ಲಕ್ಷ ಕೋಟಿ ರೂ ಎಂದು ಅಂದಾಜಿಸಲಾಗಿದೆ, 2018-19ರ ತ್ರೈಮಾಸಿಕ 1 ರಲ್ಲಿ 34.14 ಲಕ್ಷ ಕೋಟಿ ರೂ.ಗಳಂತೆ, ಇದು ಬೆಳವಣಿಗೆಯ ದರವನ್ನು 5.0 ರಷ್ಟು ತೋರಿಸುತ್ತದೆ ಎಂದು ಸರ್ಕಾರ ಹೇಳಿಕೆ ನೀಡಿತ್ತು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago