ನವದೆಹಲಿ: ಪಕ್ಷದ ಸೈದ್ಧಾಂತಿಕ ಚಿಂತನೆಯನ್ನು ಅತ್ಯುತ್ತಮವಾಗಿ ನಿರ್ಹಿಸುವ ರಾಹುಲ್ ಗಾಂಧಿ ತಮ್ಮ ಉನ್ನತ ನಾಯಕ ಆಗಬೇಕೆಂದು ಹಾಗೂ ವಾಪಸ್ ಮರಳುವಂತೆ ಕೋಟ್ಯಂತರ ಕಾಂಗ್ರೆಸ್ ಕಾರ್ಯಕರ್ತರು ಬಯಸಿದ್ದಾರೆ ಎಂದು ಪಕ್ಷ ತಿಳಿಸಿದೆ.
ಪಕ್ಷದಲ್ಲಿ ಆಂತರಿಕ ಚುನಾವಣೆ ನಡೆಯುತ್ತಿದ್ದು, ಕಾರ್ಯಕರ್ತರ ಬೇಡಿಕೆಯನ್ನು ರಾಹುಲ್ ಗಾಂಧಿ ಒಪ್ಪಲಿದ್ದು, ಮತ್ತೆ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಅಲಂಕರಿಸಲಿದ್ದಾರೆ ಎಂದು ಪಕ್ಷದ ವಕ್ತಾರ ಸುಪ್ರಿಯಾ ಶ್ರೀನೇಟ್ ತಿಳಿಸಿದ್ದಾರೆ.
ರಾಹುಲ್ ಗಾಂಧಿ ಅವರು ಪಕ್ಷದ ಉನ್ನತ ನಾಯಕರಾಗಿದ್ದಾರೆ ಮತ್ತು ಕಾಂಗ್ರೆಸ್ ಪಕ್ಷದ ಸೈದ್ಧಾಂತಿಕ ಚಿಂತನೆಯನ್ನು ಅವರಿಗಿಂತ ಉತ್ತಮವಾಗಿ ಯಾರೂ ನಿರ್ವಹಿಸುವುದಿಲ್ಲ ಎಂದು ನಾವು ಭಾವಿಸುತ್ತೇವೆ. ದೇಶದ ಕಾರ್ಯಕರ್ತರಿಗೆ ಹಾಗೂ ಪಕ್ಷದ ನಾಯಕರಿಗೆ ರಾಹುಲ್ ಗಾಂಧಿ ಸ್ಫೂರ್ತಿಯಾಗಿದ್ದಾರೆ.
ದೇಶಾದ್ಯಂತ ಕೋಟ್ಯಾಂತರ ಕಾರ್ಯಕರ್ತರು ರಾಹುಲ್ ಗಾಂಧಿ ವಾಪಾಸುವುದನ್ನು ಬಯಸುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಸೋನಿಯಾ ಗಾಂಧಿ ಕೇವಲ ಮಧ್ಯಂತರ ಪಕ್ಷದ ಮುಖ್ಯಸ್ಥರಾಗಿರುವುದರಿಂದ ಕಾಂಗ್ರೆಸ್ ತನ್ನ ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡುವ ಪ್ರಕ್ರಿಯೆಯನ್ನು ಈಗಾಗಲೇ ಆರಂಭಿಸಿದ್ದು ಮತ್ತು ಬದಲಿ ಸ್ಥಾನಕ್ಕೆ ಉತ್ತಮ ನಾಯಕನನ್ನು ಕಂಡುಕೊಳ್ಳುವಂತೆ ಪಕ್ಷವನ್ನು ಕಾರ್ಯಕರ್ತರು ಒತ್ತಾಯಿಸಿದ್ದಾರೆ. ಪಕ್ಷಕ್ಕೆ ಹೊಸ ಮುಖ್ಯಸ್ಥರನ್ನು ಆಯ್ಕೆ ಮಾಡುವ ಸಂಬಂಧ ಕಾಂಗ್ರೆಸ್ ಶೀಘ್ರವೇ ಸಮಾವೇಶ ನಡೆಸಲಿದೆ.
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…
ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…
ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…
ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…
ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…