ಬೆಂಗಳೂರು: ದೇಶದ ಗೌರವ ಉಳಿಸುವ ಸಲುವಾಗಿ ಕೇಂದ್ರ ಸರ್ಕಾರ ಉದ್ಯಮಿ ಗೌತಮ್ ಅದಾನಿ ಅವರನ್ನು ಬಂಧಿಸಿ, ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಒತ್ತಾಯಿಸಿದರು.
ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸರ್ಕಾರ ಈವರೆಗೆ ಉದ್ಯಮಿ ಗೌತಮ್ ಅದಾನಿ ಅವರನ್ನು ರಕ್ಷಿಸುತ್ತಾ ಬಂದಿದೆ. ಈಗ ಅಮೆರಿಕದ ನ್ಯಾಯಾಲಯ ಗೌತಮ್ ಅದಾನಿ ಅಧಿಕಾರಿಗಳಿಗೆ ಲಂಚ ನೀಡಿ ವಿದ್ಯುತ್ ಹಂಚಿಕೆ ಯೋಜನೆ ಪಡೆದಿದ್ದಾರೆ. ಹೀಗಾಗಿ ಅವರನ್ನು ಬಂಧಿಸುವಂತೆ ಆದೇಶಿಸಿದೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಗೌತಮ್ ಅದಾನಿ ಅವರನ್ನು ಬಂಧಿಸಿ, ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕು ಎಂದರು.
ಕಳೆದ ಏಳೆಂಟು ವರ್ಷಗಳಿಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಗೌತಮ್ ಅದಾನಿ ಅವರ ಸಂಸ್ಥೆಗಳ ವಿರುದ್ಧ ಆರೋಪ ಮಾಡುತ್ತಿದ್ದರು. ಆದರೆ, ಕೇಂದ್ರ ಸರ್ಕಾರ ಮತ್ತು ತನಿಖಾ ಸಂಸ್ಥೆಗಳು ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಈ ವಿಚಾರ ಸಂಸತ್ತಿನಲ್ಲೂ ಚರ್ಚೆಯಾಗಿತ್ತು. ಇದೀಗ ಅಮೆರಿಕ ನ್ಯಾಯಾಲಯ ಗೌತಮ್ ಅದಾನಿ ಅವರನ್ನು ಬಂಧಿಸುವಂತೆ ಆದೇಶಿಸಿದೆ. ಮುಖ್ಯಮಂತ್ರಿಗಳು ಸೇರಿದಂತೆ ವಿಪಕ್ಷದ ನಾಯಕರನ್ನು ಬಂಧಿಸುವ ಕೇಂದ್ರ ಸರ್ಕಾರ ಈಗ ಅದಾನಿ ಅವರನ್ನು ಬಂಧಿಸಿ ದೇಶದ ಮರ್ಯಾದೆ ಉಳಿಸಬೇಕು ಎಂದು ಹೇಳಿದರು.
ಕೇಂದ್ರ ಸರ್ಕಾರ ಗೌತಮ್ ಅದಾನಿ ಅವರನ್ನು ರಕ್ಷಿಸುವುದರಲ್ಲಿ ಯಾವುದೇ ಪ್ರಯೋಜನವಿಲ್ಲ. ಅದರ ಬದಲು ದೇಶದ ಜನಸಾಮಾನ್ಯರು ಅದಾನಿ ಸಂಸ್ಥೆಗಳ ಷೇರುಗಳ ಮೇಲೆ ಹೂಡಿಕೆ ಮಾಡಿರುವ ಸಾವಿರಾರು ಕೋಟಿಯನ್ನು ರಕ್ಷಿಸುವುದಕ್ಕೆ ಮುಂದಾಗಬೇಕು ಎಂದು ಕೋರಿದರು.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…