ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ರೇಡಿಯೊ ಕಾರ್ಯಕ್ರಮ ಮನ್ ಕಿ ಬಾತ್ ಗೆ ಪ್ರತಿಯಾಗಿ ಕಾಂಗ್ರೆಸ್ ದೇಶ್ ಕಿ ಬಾತ್ ಕಾರ್ಯಕ್ರಮವನ್ನು ಇಂದಿನಿಂದ ನಡೆಸಲಿದ್ದು ಸೋಷಿಯಲ್ ಮೀಡಿಯಾಗಳ ಮೂಲಕ ನೇರ ಪ್ರಸಾರ ಮಾಡಲು ಉದ್ದೇಶಿಸಿದೆ.
ಕಾರ್ಯಕ್ರಮದ ಬಗ್ಗೆ ಮಾತನಾಡಿರುವ ಕಾಂಗ್ರೆಸ್ ಸಾಮಾಜಿಕ ಜಾಲತಾಣ ಮುಖ್ಯಸ್ಥ ರೋಹನ್ ಗುಪ್ತಾ, ದೇಶ್ ಕಿ ಬಾತ್ ಕಾರ್ಯಕ್ರಮವು ಸಾಮಾನ್ಯ ವ್ಯಕ್ತಿಯ ಕಳವಳವನ್ನು ಪರಿಹರಿಸುವ ಪ್ರಯತ್ನ ಮಾಡಲಿದೆ. ಈಡೇರದ ಭರವಸೆ, ನಿರುದ್ಯೋಗ, ಆರ್ಥಿಕ ಪರಿಸ್ಥಿತಿ, ಅಪರಾಧ, ಕೃಷಿ ಬಿಕ್ಕಟ್ಟು ಹಾಗೂ ಏರುತ್ತಿರುವ ಬೆಲೆ ಮುಂತಾದ ಪ್ರಮುಖ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಜನರ ಪರವಾಗಿ ನಾವು ಕಾರ್ಯಕ್ರಮದ ಮೂಲಕ ಧ್ವನಿ ಎತ್ತಲಿದ್ದೇವೆ ಎಂದು ತಿಳಿಸಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿದ ಕಾಂಗ್ರೆಸ್ ನ ಸೋಷಿಯಲ್ ಮೀಡಿಯಾ ಮುಖ್ಯಸ್ಥ ರೋಹನ್ ಗುಪ್ತಾ, ದೇಶದ ಸಾಮಾನ್ಯ ಜನತೆಯ ಸಮಸ್ಯೆಗಳನ್ನು ಮತ್ತು ಸರ್ಕಾರದ ವೈಫಲ್ಯಗಳನ್ನು, ಈಡೇರಿಸದಿರುವ ಭರವಸೆಗಳನ್ನು ಮತ್ತು ಪ್ರಮುಖ ಸಾರ್ವಜನಿಕ ಸಮಸ್ಯೆಗಳನ್ನು ದೇಶ್ ಕಿ ಬಾತ್ ನಲ್ಲಿ ಚರ್ಚೆ ನಡೆಸಲಾಗುವುದು ಎಂದಿದ್ದಾರೆ.
ಅದರ ಮೊದಲ ಅವತರಣಿಕೆ ಇಂದು ಬೆಳಗ್ಗೆ 11 ಗಂಟೆಗೆ ಆರಂಭವಾಗಲಿದ್ದು ಪಕ್ಷದ ವಕ್ತಾರ ಪವನ್ ಖೆರಾ ನಡೆಸಿಕೊಡಲಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…