ಸರಕು ಮತ್ತು ಸೇವಾ ತೆರಿಗೆಯ ವ್ಯವಸ್ಥೆಯಲ್ಲಿನ ಸೇವಾ ತೆರಿಗೆ (ಜಿ.ಎಸ್.ಟಿ) ಹಂತಗಳನ್ನು ಕಡಿಮೆ ಮಾಡಿ ಮಹತ್ವದ ಬದಲಾವಣೆಗಳನ್ನು ಕೇಂದ್ರ ಸರಕಾರದ ಜಿ.ಎಸ್.ಟಿ ಮಂಡಳಿಯು ನಿರ್ಧರಿಸಿದೆ.
ಈ ಹಿಂದೆ 4 ಜಿ.ಎಸ್.ಟಿ ಯ ಹಂತಗಳಿದ್ದು, ಅದನ್ನು 2 ಹಂತಗಳಾಗಿ (ಶೇ.5% ಮತ್ತು ಶೇ.18%) ನಿಗಧಿಪಡಿಸಿದ್ದರಿಂದ ಆರ್ಥಿಕವಾಗಿ ಹಿಂದುಳಿದ ವರ್ಗಗಳ ಹಾಗೂ ಮಧ್ಯಮ ವರ್ಗದ ಕುಟುಂಬಗಳ ಜೀವನ ನಿರ್ವಹಣೆಯ ನಿಟ್ಟಿನಲ್ಲಿ ಬದಲಾವಣೆ ತಂದಿರುವುದು ಒಂದು ದಿಟ್ಟ ಹೆಜ್ಜೆ ಆಗಿರುತ್ತದೆ. ಆರೋಗ್ಯ, ಜೀವಾ ವಿಮೆ, ಕ್ಷೀರೋತ್ಪನ್ನ, ಜೀವ ರಕ್ಷಕ ಔಷಧಗಳು ಹಾಗೂ ನಿತ್ಯ ಬಳೆಕೆಯ ವಸ್ತುಗಳಿಗೆ ಇದು ಅನ್ವಯವಾಗುವುದರಿಂದ ದೇಶದ ತೆರಿಗೆ ವ್ಯವಸ್ಥೆಯಲ್ಲಿ ಒಂದು ಕ್ರಾಂತಿಕಾರಕ ಬದಲಾವಣೆಯನ್ನು ತಂದ ಮಾನ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ನೆತೃತ್ವದ ಕೇಂದ್ರ ಸರಕಾರದ ಈ ತೆರಿಗೆ ನೀತಿಯನ್ನು ದೇಶದ ಸಾಮಾನ್ಯ ಜನರಲ್ಲದೇ ನಾನೂ ಕೂಡ ಸ್ವಾಗತಿಸುತ್ತೇವೆ.
ಈ ತೆರಿಗೆ ನೀತಿಯ ಬದಲಾವಣೆಯಿಂದ ಮುಂದಿನ ದಿನಗಳಲ್ಲಿ ಸಾಮಾನ್ಯ ಹಾಗೂ ಮಧ್ಯಮ ವರ್ಗದ ಜನರ ಜೀವನ ಶೈಲಿಯಲ್ಲಿ ಸುಧಾರಣೆಯಾಗುವುದು ಮಹತ್ವದ ಸಂಗತಿಯಾಗಿರುತ್ತದೆ. ಅಲ್ಲದೆ ಜಿಎಸ್‌ಟಿ ದರವನ್ನು ಗಣನೀಯವಾಗಿ ಇಳಿಮುಖ ಮಾಡಿದ್ದರಿಂದ ದೇಶದ ಜಿ.ಡಿ.ಪಿ ಯ ಮೇಲೆ ಧನಾತ್ಮಕ ಪರಿಣಾಮವನ್ನು ಬೀರುವುದರಲ್ಲಿ ಯಾವುದೇ ಸಂಶಯವಿಲ್ಲ. ಎಂದು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹೇಳಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…