Featured

‘ದೇಶದ ಪ್ರಧಾನಿ ಒಬ್ಬ ಮೋಸಗಾರ, ಮೋಸಗಾರನನ್ನು ಪ್ರಧಾನಿಯಾಗಿ ಮಾಡಲಾಗಿದೆ’ :ಕೆಪಿಸಿಸಿ ಅಧ್ಯಕ್ಷ ದಿನೇಶ್​ ಗುಂಡೂರಾವ್​

ಕಲಬುರ್ಗಿ: ದೇಶದ ಪ್ರಧಾನಿ ಒಬ್ಬ ಮೋಸಗಾರ, ಮೋಸಗಾರನನ್ನು ಪ್ರಧಾನಿಯಾಗಿ ಮಾಡಲಾಗಿದೆ. ಅಚ್ಚೆದಿನ್ ಅಚ್ಚೆದಿನ್ ಅಂತಾ ಜನರಿಗೆ ಸುಳ್ಳು ಹೇಳುವುದೇ ಅವರ ಕಾಯಕವಾಗಿದೆ ಅಂತಾ ಕೆಪಿಸಿಸಿ ಅಧ್ಯಕ್ಷ ದಿನೇಶ್​ ಗುಂಡೂರಾವ್​ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು.

ಕೆಪಿಸಿಸಿ ಅಧ್ಯಕ್ಷರಾದ ಬಳಿಕ ಮೊದಲ ಬಾರಿ ಕಲಬುರ್ಗಿಗೆ ಆಗಮಿಸಿದ ಅವರು, ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾ ಕಾಂಗ್ರೆಸ್ ಕಚೇರಿ ಆವರಣದಲ್ಲಿ ಏರ್ಪಡಿಸಿದ್ದ ಸಭೆಯಲ್ಲಿ ಭಾಗವಹಿಸಿದರು.

ಈ ವೇಳೆ ಮಾತನಾಡಿದ ಅವರು, ದೇಶವನ್ನೇ ಕೊಳ್ಳೆ ಹೊಡೆದು ವಿದೇಶಕ್ಕೆ ಹಾರುವರ ವಿರುದ್ಧ ಕ್ರಮ ಕೈಗೊಳ್ಳುತ್ತಿಲ್ಲ ಅಂತಾ ಪ್ರಧಾನಿ ವಿರುದ್ಧ ಕಿಡಿಕಾರಿದರು. ಇನ್ನು ಕರ್ನಾಟಕಕ್ಕೆ ಯಡಿಯೂರಪ್ಪ ಕೊಡುಗೆ ಶೂನ್ಯ. ಅಲ್ಲದೇ ಏರ್ ಇಂಡಿಯಾ ಶೋ ಹೋರ ರಾಜ್ಯಕ್ಕೆ ಹೋಗದಂತೆ ಉಳಿಸಲು ಬಿಎಸ್​ವೈ ಶ್ರಮಿಸುತ್ತಿಲ್ಲ ಎಂದು ಆರೋಪಿಸಿದರು. ರಾಜ್ಯ ಬಿಜೆಪಿ ಸಂಸದರು ಕರ್ನಾಟಕ ಅಭಿವೃದ್ಧಿಗೆ ಶ್ರಮಿಸುತ್ತಿಲ್ಲ ಎಂದರು.

ಬೀದರ್ ಲೋಕಸಭಾ ಕ್ಷೇತ್ರದಿಂದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸ್ಪರ್ಧೆ ವಿಚಾರವಾಗಿ ಪ್ರತಿಕ್ರಿಯಿಸಿ,  ಆ ವಿಚಾರದ ಬಗ್ಗೆ ಇಲ್ಲಿವರೆಗೆ ಯಾವುದೆ ಪ್ರಸ್ತಾವನೆ ಬಂದಿಲ್ಲ, ಕರ್ನಾಟಕದಿಂದ ಸ್ಪರ್ಧಿಸುವುದಾದರೆ ಸ್ವಾಗತ ಎಂದರು. ಈ ವೇಳೆ ಸಚಿವ ಪ್ರಿಯಾಂಕ್ ಖರ್ಗೆ, ಜೇವರ್ಗಿ ಶಾಸಕ ಡಾ.ಅಜಯ್ ಸಿಂಗ್, ಅಫಜಲಪುರ ಶಾಸಕ ಎಂ.ವೈ. ಪಾಟೀಲ್, ಕಲಬುರ್ಗಿ ಉತ್ತರ ಕ್ಷೇತ್ರದ ಶಾಸಕಿ ಕನೀಜ್ ಫಾತೀಮಾ, ಮಾಜಿ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

11 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

11 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

12 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

15 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

15 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

15 hours ago