Featured

ದೇಶದ ಪ್ರಮುಖ ಜೈನ ಬಸದಿಗಳ ವಾಸ್ತುಶಿಲ್ಪದ ಅಚ್ಚರಿ : ಮೂಡುಬಿದರೆಯ ಸಾವಿರಕಂಬದ ಬಸದಿಗೆ ಮೂರನೇ ಸ್ಥಾನ -Vishwanews24

ದೇಶದ ಪ್ರಮುಖ ಜೈನ ಬಸದಿಗಳ ವಾಸ್ತುಶಿಲ್ಪದ ಅಚ್ಚರಿ : ಮೂಡುಬಿದರೆಯ ಸಾವಿರ ಕಂಬದ ಬಸದಿಗೆ ಮೂರನೇ ಸ್ಥಾನ -Vishwanews24

ಮೂಡುಬಿದರೆ: ವಿಶ್ವ ಪರಂಪರೆಯ ಪವಿತ್ರ ತಾಣಗಳಲ್ಲಿ ಒಂದಾಗಿರುವ ಮೂಡುಬಿದಿರೆಯ ಸಾವಿರ ಕಂಬದ ಬಸದಿ ತ್ರಿಭುವನ ತಿಲಕ ಚೂಡಾಮಣಿ ಎಂದೇ ಪ್ರಸಿದ್ದವಾದ ಜೈನ ಬಸದಿಯು ದೇಶದ ಪ್ರಮುಖ ಜೈನ ಬಸದಿಗಳ ವಾಸ್ತುಶಿಲ್ಪದ ಅಚ್ಚರಿಗಳ ಪೈಕಿ ಇದೀಗ ಮೂರನೇ ಸ್ಥಾನವನ್ನು ಪಡೆದಿದೆ ಎಂದು ಶ್ರೀ ಜೈನ ಮಠಾದೀಶ ಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಸ್ವಾಮೀಜಿ ತಿಳಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು, ಅತ್ಯಂತ ಸೂಕ್ಷ್ಮ ಕೆತ್ತನೆಯ ತೀರ್ಥಂಕರ ಜಿನ ಬಿಂಬಗಳು, ಮತ್ತು ಸರ್ವ ಧರ್ಮ ಸಮನ್ವಯದ ಅನೇಕ ಕಲ್ಲಿನ ಕೆತ್ತನೆಗಳು, ಬೆಡಗಿನ ಭಿತ್ತಿಚಿತ್ರಗಳುಳ್ಳ ವಾಸ್ತುವೈಭವದ ಬಸದಿಗಳ ಪಟ್ಟಿಯಲ್ಲಿ ಸಾವಿರ ಕಂಬದ ಬಸದಿಯು ರಾಜಸ್ಥಾನದ ರಣಾಕ್ ಪುರ ಬಸದಿ, ದಿಲ್ ವಾರಾ ದೇಗುಲದ ಅನಂತರದ ಸ್ಥಾನದಲ್ಲಿ ಗುರುತಿಸಲ್ಪಟ್ಟಿರುವುದು ದಿಲ್ಲಿಯ ಜೈನ ಸನ್ಸ್ ಮೂಲಕ ಖಚಿತವಾಗಿದೆ ಎಂದು ತಿಳಿಸಿದ್ದಾರೆ.

ಇನ್ನು ದೇಶದ 13 ಇತರ ಬಸದಿಗಳಲ್ಲಿ 4ನೇಯ ಸ್ಥಾನವನ್ನು ಕಾರ್ಕಳದ ಚತುರ್ಮುಖ ಬಸದಿಗಳಿಸಿದೆ ಎಂದರು.

ಸಾವಿರ ಕಂಬದ ಬಸದಿಗೆ ಪ್ರತಿ ವರ್ಷ ವಿಶ್ವದೆಲ್ಲೆಡೆಯಿಂದ ಅನೇಕ ಸಂಖ್ಯೆಯಲ್ಲಿ ಕಲಾಪ್ರಿಯರು, ಯಾತ್ರಿಕರು ಭೇಟಿ ನೀಡುತ್ತಿರುತ್ತಾರೆ. ಆದರೆ ಈ ಬಾರಿ ಕೊರೊನಾ ಸಂಕಷ್ಟದಿಂದ ಬಸದಿಗೆ ಭೇಟಿ ನೀಡುವ ಯಾತ್ರಿಕರ ಸಂಖ್ಯೆ ಕಡಿಮೆಯಾಗಿದೆ. ಇದೀಗ ಈ ಪರಿಸ್ಥಿತಿಯಲ್ಲಿ ಬಸದಿಯಲ್ಲಿ ನಿತ್ಯ ತ್ರಿಕಾಲ ಪೂಜೆಯ ವ್ಯವಸ್ಥೆ ಮಾಡಲಾಗಿದ್ದು, ಆ ಸಮಯದಲ್ಲಿ ಮಾತ್ರ ಬಸದಿಯನ್ನು ತೆರೆಯಲಾಗುತ್ತಿದೆ. ಕೊರೊನಾದ ಆತಂಕ ಕಡಿಮೆಯಾದ ಬಳಿಕ ಸಾರ್ವಜನಿಕರಿಗೆ ದರ್ಶನಕ್ಕೆ ಅವಕಾಶವನ್ನು ಕಲ್ಪಿಸಲಾಗುತ್ತದೆ ಎಂದು ಸ್ವಾಮೀಜಿಯವರು ತಿಳಿಸಿದ್ದಾರೆ.

Vishwa News 24

Recent Posts

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

14 hours ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

14 hours ago

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು – vishwanews24

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…

14 hours ago

ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ – vishwanews24

ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…

14 hours ago

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ – vishwanews24

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…

14 hours ago

ಕೋಳಿಮರಿ ವಿತರಣೆ : ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ – vishwanews24

 ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ  ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…

14 hours ago