ದೇಶದ ಬೆಳವಣಿಗೆ ದೃಷ್ಟಿಯಿಂದ ಬಿಜೆಪಿ ಸೇರುತ್ತಿದ್ದೇನೆ : ಇಂದು ಅಧಿಕೃತವಾಗಿ ಬಿಜೆಪಿ ಪಕ್ಷಕ್ಕೆ ಸೇರಿದ ಕೆ.ಸಿ. ರಾಮಮೂರ್ತಿ -Vishwanews24
ನವದೆಹಲಿ : ಕಾಂಗ್ರೆಸ್ನ ರಾಜ್ಯಸಭಾ ಸದಸ್ಯತ್ವಕ್ಕೆ ಒಂದು ವಾರದ ಹಿಂದೆ ರಾಜೀನಾಮೆ ನೀಡಿದ್ದ ಕೆ.ಸಿ. ರಾಮಮೂರ್ತಿ ಇಂದು ಅಧಿಕೃತವಾಗಿ ಬಿಜೆಪಿ ಪಕ್ಷಕ್ಕೆ ಸೇರಿದರು. ಮಾಜಿ ಪೊಲೀಸ್ ಅಧಿಕಾರಿಯೂ ಆಗಿರುವ ರಾಮಮೂರ್ತಿ ಯವರು ಇಲ್ಲಿಯ ಬಿಜೆಪಿ ಮುಖ್ಯ ಕಚೇರಿಯಲ್ಲಿ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಸಮ್ಮುಖದಲ್ಲಿ ಅಧಿಕೃತವಾಗಿ ಬಿಜೆಪಿ ಸೇರ್ಪಡೆಗೊಂಡರು.
ಬಿಜೆಪಿ ಸೇರಿದ ಕೆ ಸಿ ರಾಮಮೂರ್ತಿ ಯವರು ಬಿಜೆಪಿ ಪ್ರಾಥಮಿಕ ಸದಸ್ಯತ್ವವನ್ನು ಪಡೆದುಕೊಂಡರು. ಎನ್ನಲಾಗಿದೆ. ಬಿಜೆಪಿ ಸೇರ್ಪಡೆ ಕುರಿತು ಆ ಪಕ್ಷದ ರಾಷ್ಟ್ರೀಯ ನಾಯಕರೊಂದಿಗೆ ಹಲವು ದಿನಗಳ ಹಿಂದೆ ಕೆ ಸಿ ರಾಮೂರ್ತಿ ಯವರು ಮಾತುಕತೆ ನಡೆಸಿದ್ದರು. ಇಂದು ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಉಪಸ್ಥಿತರಿದ್ದರು.
ಸೇರ್ಪಡೆ ಬಳಿಕ ನವದೆಹಲಿಯಲ್ಲಿ ಪ್ರತಿಕ್ರಿಯೆ ನೀಡಿದ್ದ ಕೆ.ಸಿ.ರಾಮಮೂರ್ತಿ, ಅತ್ಯಂತ ಸಂತೋಷದಿಂದ ಬಿಜೆಪಿ ಸೇರುತ್ತಿದ್ದೇನೆ ಎರಡೂವರೆ ವರ್ಷದಿಂದ ಕೈಲಾದಷ್ಟು ಕೆಲಸ ಮಾಡಿದ್ದೇನೆ. ಆದರೂ ಬಹಳ ಬಾರಿ ಆತ್ಮವಂಚನೆ ಮಾಡಿಕೊಂಡಿದ್ದೆ. ಈಗ ದೇಶದ ಬೆಳವಣಿಗೆ ದೃಷ್ಟಿಯಿಂದ ಬಿಜೆಪಿ ಸೇರುತ್ತಿದ್ದೇನೆ. ಮೊದಲು ದೇಶದಲ್ಲಿ ಈ ರೀತಿಯ ನಾಯಕ ಇರಲಿಲ್ಲ. ಈಗ ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವ ಮೆಚ್ಚಿ ಬಿಜೆಪಿ ಸೇರಿದ್ದೇನೆ. ಪಕ್ಷ ವಹಿಸುವ ಕೆಲಸ ಮಾಡಲು ಸಿದ್ದನಿದ್ದೇನೆ ಎಂದು ಹೇಳಿದರು.
