Featured

ದೇಶದ ಬೆಳವಣಿಗೆ ದೃಷ್ಟಿಯಿಂದ ಬಿಜೆಪಿ ಸೇರುತ್ತಿದ್ದೇನೆ : ಇಂದು ಅಧಿಕೃತವಾಗಿ ಬಿಜೆಪಿ  ಪಕ್ಷಕ್ಕೆ ಸೇರಿದ ಕೆ.ಸಿ. ರಾಮಮೂರ್ತಿ -Vishwanews24

ನವದೆಹಲಿ : ಕಾಂಗ್ರೆಸ್​ನ ರಾಜ್ಯಸಭಾ ಸದಸ್ಯತ್ವಕ್ಕೆ ಒಂದು ವಾರದ ಹಿಂದೆ ರಾಜೀನಾಮೆ ನೀಡಿದ್ದ ಕೆ.ಸಿ. ರಾಮಮೂರ್ತಿ ಇಂದು ಅಧಿಕೃತವಾಗಿ ಬಿಜೆಪಿ  ಪಕ್ಷಕ್ಕೆ ಸೇರಿದರು. ಮಾಜಿ ಪೊಲೀಸ್ ಅಧಿಕಾರಿಯೂ ಆಗಿರುವ ರಾಮಮೂರ್ತಿ ಯವರು ಇಲ್ಲಿಯ ಬಿಜೆಪಿ ಮುಖ್ಯ ಕಚೇರಿಯಲ್ಲಿ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್​ ಸಮ್ಮುಖದಲ್ಲಿ ಅಧಿಕೃತವಾಗಿ ಬಿಜೆಪಿ  ಸೇರ್ಪಡೆಗೊಂಡರು.

ಬಿಜೆಪಿ ಸೇರಿದ ಕೆ ಸಿ ರಾಮಮೂರ್ತಿ ಯವರು ಬಿಜೆಪಿ ಪ್ರಾಥಮಿಕ ಸದಸ್ಯತ್ವವನ್ನು ಪಡೆದುಕೊಂಡರು. ಎನ್ನಲಾಗಿದೆ. ಬಿಜೆಪಿ ಸೇರ್ಪಡೆ ಕುರಿತು ಆ ಪಕ್ಷದ ರಾಷ್ಟ್ರೀಯ ನಾಯಕರೊಂದಿಗೆ ಹಲವು ದಿನಗಳ ಹಿಂದೆ  ಕೆ ಸಿ ರಾಮೂರ್ತಿ ಯವರು ಮಾತುಕತೆ ನಡೆಸಿದ್ದರು. ಇಂದು ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಉಪಸ್ಥಿತರಿದ್ದರು.

ಸೇರ್ಪಡೆ ಬಳಿಕ ನವದೆಹಲಿಯಲ್ಲಿ ಪ್ರತಿಕ್ರಿಯೆ ನೀಡಿದ್ದ ಕೆ.ಸಿ.‌ರಾಮಮೂರ್ತಿ, ಅತ್ಯಂತ ಸಂತೋಷದಿಂದ ಬಿಜೆಪಿ ಸೇರುತ್ತಿದ್ದೇನೆ ಎರಡೂವರೆ ವರ್ಷದಿಂದ ಕೈಲಾದಷ್ಟು ಕೆಲಸ ಮಾಡಿದ್ದೇನೆ. ಆದರೂ ಬಹಳ ಬಾರಿ ಆತ್ಮವಂಚನೆ ಮಾಡಿಕೊಂಡಿದ್ದೆ. ಈಗ ದೇಶದ ಬೆಳವಣಿಗೆ ದೃಷ್ಟಿಯಿಂದ ಬಿಜೆಪಿ ಸೇರುತ್ತಿದ್ದೇನೆ. ಮೊದಲು ದೇಶದಲ್ಲಿ ಈ ರೀತಿಯ ನಾಯಕ ಇರಲಿಲ್ಲ. ಈಗ ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವ ಮೆಚ್ಚಿ ಬಿಜೆಪಿ ಸೇರಿದ್ದೇನೆ. ಪಕ್ಷ ವಹಿಸುವ ಕೆಲಸ ಮಾಡಲು ಸಿದ್ದನಿದ್ದೇನೆ ಎಂದು ಹೇಳಿದರು.

Vishwa News 24

Recent Posts

ಉಡುಪಿ: ಮಹಾವೀರ ಜಯಂತಿ – ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  – vishwanews24

ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…

5 hours ago

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ – vishwanews24

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ  ಮಾ.31ಕ್ಕೆ ಮುಂದೂಡಿಕೆ…

5 hours ago

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ – vishwanews24

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…

6 hours ago

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ – vishwanews24

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…

7 hours ago

ಬಂಟ್ವಾಳ: ಯುವತಿ ನಾಪತ್ತೆ ; ಪ್ರಕರಣ ದಾಖಲು – vishwanews24

ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…

7 hours ago

ಉಡುಪಿ : ಗ್ಯಾರಂಟಿ ಯೋಜನೆಗಳಿಂದ ಜನ ಸಾಮಾನ್ಯರಿಗೆ ಸಾಕಷ್ಟು ಅನುಕೂಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ – vishwanews24

 ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…

7 hours ago