ನವದೆಹಲಿ, : ಈ ಹಿಂದೆ ದೇಶದಲ್ಲಿ ಆಡಳಿತ ನಡೆಸುತ್ತಿದ್ದ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ಅವಧಿಯಲ್ಲಿ ಉಗ್ರರ ವಿರುದ್ಧ ಒಟ್ಟು 6 ಬಾರಿ ಸರ್ಜಿಕಲ್ ಸ್ಟ್ರೈಕ್ ನಡೆಸಲಾಗಿತ್ತು ಎಂದು ಕಾಂಗ್ರೆಸ್ ಹೇಳಿದೆ.
ಪತ್ರಿಕಾಗೋಷ್ಠಿಯಲ್ಲಿ ಯುಪಿಎ ಸರ್ಕಾರ ನಡೆಸಿದ ಸರ್ಜಿಕಲ್ ದಾಳಿಯ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್, ಯುಪಿಎ ಅವಧಿಯಲ್ಲಿ ಆರು ಸರ್ಜಿಕಲ್ ದಾಳಿ ನಡೆದಿದೆ. ಅಲ್ಲದೆ ಅಟಲ್ ಬಿಹಾರಿ ವಾಜಪೇಯಿ ಅವರ ಆಡಳಿತಾವಧಿಯಲ್ಲಿ ಎರಡು ಸರ್ಜಿಕಲ್ ಸ್ಟ್ರೈಕ್‌ಗಳನ್ನು ನಡೆಸಲಾಗಿತ್ತು ಎಂದು ಕಾಂಗ್ರೆಸ್ ವಕ್ತಾರ ರಾಜೀವ್ ಶುಕ್ಲಾ ಅವರು ತಿಳಿಸಿದ್ದಾರೆ.
ಯುಪಿಎ ಸರ್ಕಾರ ನಡೆಸಿದ ಸರ್ಜಿಕಲ್ ದಾಳಿಯ ಪಟ್ಟಿ ಬಿಡುಗಡೆ ಮಾಡಿದ ಅವರು, 2008ರ ಜೂನ್ 19 ರಂದು ಭತ್ತಲ್ ಸೆಕ್ಟರ್ನಲ್ಲಿ ಸರ್ಜಿಕಲ್ ಸ್ಟ್ರೈಕ್, 2011ರ ಆಗಸ್ಟ್ 30, ಸೆಪ್ಟಂಬರ್ 1 ರಂದು ಶಾರ್ದಾ ಸೆಕ್ಟರ್ ಮೇಲೆ ದಾಳಿ, 2013ರ ಜ.6 ರಂದು ಸಾವನ್ ಪಾತ್ರಾ ಚೆಕ್ಪೋಸ್ಟ್ನಲ್ಲಿ ಸರ್ಜಿಕಲ್ ಸ್ಟ್ರೈಕ್, 2013ರ ಜುಲೈ 27-28 ರಂದು ನಜಾಪಿರ್ ಸೆಕ್ಟರ್ನಲ್ಲಿ ಸರ್ಜಿಕಲ್ ಸ್ಟ್ರೈಕ್. 2013ರ ಆಗಸ್ಟ್ 6ರಂದು ನೀಲಂ ಕಣಿವೆಯಲ್ಲಿ ಸರ್ಜಿಕಲ್ ಸ್ಟ್ರೈಕ್, 2014ರ ಜನವರಿ 14 ರಂದು UPA ಅವಧಿಯ 6ನೇ ಸರ್ಜಿಕಲ್ ಸ್ಟ್ರೈಕ್ ನಡೆಸಿದೆ ಎಂದು ತಿಳಿಸಿದ್ದಾರೆ.
ಕಾಂಗ್ರೆಸ್, ಯುಪಿಎ ಅವಧಿಯಲ್ಲಿ ಆರು ಸರ್ಜಿಕಲ್ ದಾಳಿ ನಡೆದಿದೆ. ಅಲ್ಲದೆ ಅಟಲ್ ಬಿಹಾರಿ ವಾಜಪೇಯಿ ಅವರ ಆಡಳಿತಾವಧಿಯಲ್ಲಿ ಎರಡು ಸರ್ಜಿಕಲ್ ಸ್ಟ್ರೈಕ್‌ಗಳನ್ನು ನಡೆಸಲಾಗಿತ್ತು ಎಂದು ಹೇಳಿದ್ದಾರೆ.
ಸರ್ಜಿಕಲ್ ದಾಳಿಗಳ ಕುರಿತು ಮಾಹಿತಿ ನೀಡಿದ ರಾಜೀವ್ ಶುಕ್ಲಾ ಅವರು, ದೇಶದ ಭದ್ರತೆ ಮತ್ತು ಸೈನಿಕರ ಗೌರವ ಕಾಪಾಡುವುದು ಹೇಗೆಂದು ಕಾಂಗ್ರೆಸ್ ಗೆ ಗೊತ್ತಿದೆ ಎಂದು ಬಿಜೆಪಿಗೆ ತಿರುಗೇಟು ನೀಡಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…