Featured

ದೇಶದ ಮುಂದಿನ ಪ್ರಧಾನಿಯಾಗಲಿರುವ ರಾಹುಲ್ ಗಾಂಧಿ ಅವರು ಕರ್ನಾಟಕದಿಂದಲೇ ಸ್ಪರ್ಧಿಸಬೇಕು :ಸಿದ್ದರಾಮಯ್ಯ – Vishwanews24

ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕರ್ನಾಟಕದಿಂದ ಸ್ಪರ್ಧಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.

ಕರ್ನಾಟಕದ ಜನರು ರಾಷ್ಟ್ರೀಯ ಕಾಂಗ್ರೆಸ್ ನಾಯಕರನ್ನು ಬೆಂಬಲಿಸುವ ಮೂಲಕ ಉತ್ತೇಜಿಸುತ್ತ ಬಂದಿದ್ದಾರೆ. ಇದು ಇಂದಿರಾ ಗಾಂಧಿ ಹಾಗೂ ಸೋನಿಯಾ ಗಾಂಧಿ ವಿಷಯದಲ್ಲಿ ಸಾಬೀತಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ದೇಶದ ಮುಂದಿನ ಪ್ರಧಾನಿಯಾಗಲಿರುವ ರಾಹುಲ್ ಗಾಂಧಿ ಅವರು ಕರ್ನಾಟಕದಿಂದಲೇ ಸ್ಪರ್ಧಿಸಬೇಕು ಮತ್ತು ರಾಜಕೀಯ ಬೆಳವಣಿಗೆಗೆ ಮಾದರಿಯಾಗಬೇಕೆಂದು ಬಯಸುವುದಾಗಿ ತಿಳಿಸಿದ್ದಾರೆ.

ಉತ್ತರ ಪ್ರದೇಶದ ಅಮೇಥಿಯಿಂದ ಸ್ಪರ್ಧಿಸುವ ರಾಹುಲ್ ಗಾಂಧಿಗೆ ಈ ಬಾರಿ ಕರ್ನಾಟಕದಿಂದಲೂ ಸ್ಪರ್ಧಿಸುವಂತೆ ರಾಜ್ಯ ಕಾಂಗ್ರೆಸ್ ನಾಯಕರು ಒತ್ತಾಯಿಸುತ್ತಿದ್ದು, ಈ ಸಂಬಂಧ ರಾಜ್ಯ ಕಾಂಗ್ರೆಸ್ ನಾಯಕರು #RaGaFromKarnataka ಎಂಬ ಹ್ಯಾಷ್‌ ಟ್ಯಾಗ್ ಬಳಸಿ ಟ್ವಿಟ್ಟರ್ ಅಭಿಯಾನ ಆರಂಭಿಸಿದ್ದಾರೆ.

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅಮೇಥಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಾರೋ ಇಲ್ಲವೋ ಎಂಬ ಊಹಾಪೋಹದ ಬೆನ್ನಲ್ಲೇ ಸಿದ್ದರಾಮಯ್ಯ ಮಾಡಿದ ಟ್ವೀಟ್ ಚರ್ಚೆಗೆ ಗ್ರಾಸವಾಗಿದೆ.

Vishwa News 24

Recent Posts

ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ – vishwanews24

ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ…

33 minutes ago

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ – vishwanews24

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…

5 hours ago

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  – vishwanews24

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…

5 hours ago

ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ – vishwanews24

ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್‌, ಡೀಸೆಲ್‌ ಬಳಿಕ…

5 hours ago

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು – vishwanews24

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…

6 hours ago

ಗೋ ರಕ್ಷಣೆಯ ಹೆಸರಿನಲ್ಲಿ ನಡೆಯುತ್ತಿರುವ ದೌರ್ಜನ್ಯಗಳ ವಿರುದ್ಧ ಮಂಗಳೂರಿನಲ್ಲಿ SDPI ಪ್ರತಿಭಟನೆ – vishwanews24

ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…

6 hours ago