ರಾಯಚೂರು: ದೇಶದ ರಕ್ಷಣಾ ನಿಧಿಗೆ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಿಂದ 25 ಲಕ್ಷ ರೂ. ದೇಣಿಗೆಯನ್ನು ಘೋಷಿಸಲಾಗಿದೆ.
ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಶ್ರೀಗಳು ದೇಣಿಗೆಯನ್ನು ಘೋಷಿಸಿದ್ದಾರೆ. ತಮ್ಮ 13ನೇ ಪಟ್ಟಾಭಿಷೇಕ ಮಹೋತ್ಸವದ ವೇಳೆ ಶ್ರೀಗಳು ಈ ಘೋಷಣೆ ಮಾಡಿದ್ದಾರೆ.
ಭಕ್ತರಿಂದ ತುಲಾಭಾರ ಕಾರ್ಯಕ್ರಮ ನಡೆದ ಬಳಿಕ ಶ್ರೀಗಳು ಮಾತನಾಡಿದರು. ಈ ವೇಳೆ, ದೇಶದಲ್ಲಿ ಅಶಾಂತಿ ಉಂಟಾಗಿದೆ. ತಾತ್ಕಾಲಿಕವಾಗಿ ಯುದ್ಧ ವಿರಾಮ ದೊರಕಿದೆ. ರಾತ್ರಿ ಹಗಲು, ಮಳೆ, ಬಿಸಿಲು ಎನ್ನದೇ ಪ್ರಾಣವನ್ನೂ ಲೆಕ್ಕಿಸದೇ ದೇಶದ ರಕ್ಷಣೆಗಾಗಿ ನಮ್ಮೆಲ್ಲ ಯೋಧರು ಶ್ರಮಿಸುತ್ತಿದ್ದಾರೆ. ಜಾಗೃತರಾಗಿ, ವಿವೇಚನಾ ಪೂರ್ವಕವಾಗಿ ದೇಶದ ಸಮಗ್ರತೆಗೆ, ರಕ್ಷಣೆ, ಭದ್ರತೆಗೆ ಕೇಂದ್ರ ಸರ್ಕಾರ ಶ್ರಮಿಸುತ್ತಿದೆ. ದೇಶದಲ್ಲಿ ಅಶಾಂತಿ ಪರಸ್ಥಿತಿ ಹಿನ್ನೆಲೆ ಸರಳವಾಗಿ ಕಾರ್ಯಕ್ರಮ ಆಚರಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆ ದೇಶದ ಸೈನಿಕರ ಹಾಗೂ ನಾಗರಿಕರ ರಕ್ಷಣೆ, ಸುರಕ್ಷತೆಗಾಗಿ ಮಂತ್ರಾಲಯ ಗುರುರಾಘವೇಂದ್ರ ಸ್ವಾಮಿ ಮಠದಲ್ಲಿ ವಿವಿಧ ವಿಶೇಷ ಪೂಜೆ, ಹೋಮ-ಹವನವನ್ನು ಸಹ ಈ ವೇಳೆ ನೆರವೇರಿಸಲಾಯಿತು.
ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…
ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್ಟ್ರಿಮ್ ಡ್ಯಾನ್ಸ್ ಅಕಾಡೆಮಿ…
ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…
ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…
`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ…