Featured

ದೇಶದ ರೈತರು ತಮ್ಮ ಸತ್ಯಾಗ್ರಹದಿಂದ ದುರಹಂಕಾರವನ್ನು ಸೋಲಿಸಿದ್ದಾರೆ : ರಾಹುಲ್ ಗಾಂಧಿ – Vishwanews24

ದೇಶದ ರೈತರು ತಮ್ಮ ಸತ್ಯಾಗ್ರಹದಿಂದ ದುರಹಂಕಾರವನ್ನು ಸೋಲಿಸಿದ್ದಾರೆ : ರಾಹುಲ್ ಗಾಂಧಿ – Vishwanews24

ನವದೆಹಲಿ, : ಕಳೆದ ವರ್ಷ ಜಾರಿಗೆ ತಂದ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ ಬೆನ್ನಲ್ಲೇ ಟ್ವೀಟ್ ಮಾಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ “ದೇಶದ ರೈತರು ತಮ್ಮ ಸತ್ಯಾಗ್ರಹದಿಂದ ದುರಹಂಕಾರವನ್ನು ಸೋಲಿಸಿದ್ದಾರೆ” ಎಂದು ಪ್ರತಿಕ್ರಿಯಿಸಿದ್ದಾರೆ.

ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ ಕೆಲವೇ ನಿಮಿಷಗಳಲ್ಲಿ ಈ ವರ್ಷದ ಜನವರಿಯಲ್ಲಿ ಮಾಡಿರುವ ” ನನ್ನ ಮಾತುಗಳನ್ನು ನೆನಪಿಟ್ಟುಕೊಳ್ಳಿ, ಸರ್ಕಾರವು ಈ ರೈತ ವಿರೋಧಿಯನ್ನು ಹಿಂಪಡೆಯುತ್ತದೆ” ಎಂದು ಹೇಳಿರುವ ಹಳೆಯ ಟ್ವೀಟ್ ಜೊತೆಗೆ ಟ್ವೀಟ್ ಮಾಡಿರುವ “ದೇಶದ ರೈತರು ತಮ್ಮ ಸತ್ಯಾಗ್ರಹದಿಂದ ದುರಹಂಕಾರವನ್ನು ಸೋಲಿಸಿದ್ದಾರೆ. ಜೈ ಹಿಂದಿ, ಜೈ ಹಿಂದಿ ರೈತರೇ” ಎಂದು ಬರೆದುಕೊಂಡಿದ್ದಾರೆ.

ಕೇಂದ್ರ ಮಟ್ಟದ ವಿರೋಧ ಪಕ್ಷಗಳ ಇತರ ಅನೇಕ ನಾಯಕರು ಕೂಡ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿ ರೈತರನ್ನು ಅಭಿನಂದಿಸಿ ಟ್ವೀಟ್ ಮಾಡಿದ್ದಾರೆ.

ಒಂದು ವರ್ಷದಿಂದ ದೆಹಲಿಯ ಹೊರವಲಯದಲ್ಲಿ ಬೀಡುಬಿಟ್ಟಿರುವ ರೈತರು ಎಲ್ಲಾ ಮೂರು ಕಾನೂನುಗಳನ್ನು ಹಿಂತೆಗೆದುಕೊಳ್ಳದ ಹೊರತು ಪ್ರತಿಭಟನೆಯನ್ನು ಹಿಂಪಡೆಯುವುದಿಲ್ಲ ಎಂದು ಪಟ್ಟು ಹಿಡಿದಿದ್ದರು. ಹೊಸ ಕಾನೂನುಗಳು ಕೃಷಿ ವಲಯವನ್ನು ನಿಯಂತ್ರಿಸಲು ಖಾಸಗಿ ಕೈಗಳಿಗೆ ಅಧಿಕಾರವನ್ನು ನೀಡುತ್ತದೆ ಎಂದು ಅವರು ಆರೋಪಿಸಿದ್ದರು.

Vishwa News 24

Recent Posts

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ – vishwanews24

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ…

18 hours ago

ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ – vishwanews24

ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ಮಂಗಳೂರು: ದಸರಾ  ಸಂಭ್ರಮದ ನಡುವೆಯೇ…

18 hours ago

ಮಂಗಳೂರು : ದಸರಾ ಉದ್ಘಾಟನೆಗೆ ಸಿಎಂ ಗೈರು ; ಕರಾವಳಿ ತೀವ್ರ ಜನರಲ್ಲಿ ಅಸಮಾಧಾನ  : ಅಕ್ಷಿತ್ ಸುವರ್ಣ  – vishwanews24

ಮಂಗಳೂರು : ದಸರಾ ಉದ್ಘಾಟನೆಗೆ ಸಿಎಂ ಗೈರು ; ಕರಾವಳಿ ತೀವ್ರ ಜನರಲ್ಲಿ ಅಸಮಾಧಾನ  : ಅಕ್ಷಿತ್ ಸುವರ್ಣ   ಮಂಗಳೂರು:…

18 hours ago

ಮಂಗಳೂರು: ಅಕ್ರಮ ಸಂಬಂಧದ ಶಂಕೆ ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ – vishwanews24

ಮಂಗಳೂರು: ಅಕ್ರಮ ಸಂಬಂಧದ ಶಂಕೆ ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ ಮಂಗಳೂರು: ಅಕ್ರಮ ಸಂಬಂಧದ ಶಂಕೆಯ ಹಿನ್ನೆಲೆ…

18 hours ago

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

3 days ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

3 days ago