Featured

ದೇಶದ ಸಂವಿಧಾನ, ಜಾತ್ಯತೀತತೆಯ ರಕ್ಷಣೆಗಾಗಿ ಪ್ರಮೋದ್‌ ಅವರ ಗೆಲುವು ಅನಿವಾರ್ಯ : ವಿನಯಕುಮಾರ್‌ ಸೊರಕೆ – Vishwanews24

ಕಾಪು : ಕಾಂಗ್ರೆಸ್‌ – ಜೆಡಿಎಸ್‌ ಜಂಟಿ ಪಕ್ಷಗಳ ಕಾರ್ಯಕರ್ತರ ಸಭೆಕಾಪು, ಮಾ. 29: ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ದಲ್ಲಿ ಕಾಂಗ್ರೆಸ್‌ – ಜೆಡಿಎಸ್‌ ಮೈತ್ರಿ ಪಕ್ಷದ ಅಭ್ಯರ್ಥಿಯಾಗಿ ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್‌ ಸ್ಪರ್ಧಿಸುವ ಮೂಲಕ ರಾಷ್ಟ್ರ ರಾಜಕಾರಣದ ಮಹಾ ಘಟಬಂಧನ್‌ಗೆ ವಿಶೇಷ ಬಲ ತುಂಬಿದಂತಾಗಿದೆ. ದೇಶದ ಸಂವಿಧಾನ, ಜಾತ್ಯತೀತತೆಯ ರಕ್ಷಣೆಗಾಗಿ ಗೆಲುವಿಗೆ ಪ್ರಮೋದ್‌ ಅವರ ಗೆಲುವು ಅನಿವಾರ್ಯವಾಗಿದೆ ಎಂದು ಮಾಜಿ ಸಚಿವ ವಿನಯಕುಮಾರ್‌ ಸೊರಕೆ ಹೇಳಿದರು.

ಕಾಂಗ್ರೆಸ್‌ – ಜೆಡಿಎಸ್‌ ಮೈತ್ರಿ ಸರಕಾರದ ಅಭ್ಯರ್ಥಿ ಪ್ರಮೋದ್‌ ಮಧ್ವರಾಜ್‌ ಮಾತನಾಡಿ, ಕಾಪು ಕ್ಷೇತ್ರದಲ್ಲಿ ಪುರಸಭೆಯೊಂದನ್ನು ಹೊರತುಪಡಿಸಿದರೆ ಹೆಚ್ಚಿನ ಆಯಕಟ್ಟಿನ ಸ್ಥಾನಗಳಲ್ಲಿ ಬಿಜೆಪಿ ಜನಪ್ರತಿನಿಧಿಗಳೇ ಆಡಳಿತದಲ್ಲಿದ್ದಾರೆ. ಕಾರ್ಯಕರ್ತರ ಎಲ್ಲ ನೋವಿಗೂ ಪೂರಕವಾಗಿ ಸ್ಪಂದಿಸಿ, ಕಾರ್ಯಕರ್ತರ ಪರವಾಗಿ ಧ್ವನಿ ಎತ್ತುವ ಉದ್ದೇಶಕ್ಕಾಗಿ ಸ್ಪರ್ಧಿಸುತ್ತಿದ್ದೇನೆ.ಎಲ್ಲರೂ ಮುಕ್ತ ಮನಸ್ಸಿನಿಂದ ಬೆಂಬಲಿಸುವಂತೆ ವಿನಂತಿಸಿ ಕೊಂಡರು.

ಕೆ.ಪಿ.ಸಿ.ಸಿ. ಕಾರ್ಯದರ್ಶಿ ಗಳಾದ ಡಾ| ದೇವಿಪ್ರಸಾದ್‌ ಶೆಟ್ಟಿ, ರಾಜಶೇಖರ ಕೋಟ್ಯಾನ್‌, ಕೆಪಿಸಿಸಿ ಸಂಯೋಜಕ ನವೀನ್‌ಚಂದ್ರ ಜೆ. ಶೆಟ್ಟಿ, ಕಾಪು ಕಾಂಗ್ರೆಸ್‌ ಬ್ಲಾಕ್‌ ಅಧ್ಯಕ್ಷ ನವೀನ್‌ಚಂದ್ರ ಸುವರ್ಣ, ಜೆಡಿಎಸ್‌ ಬ್ಲಾಕ್‌ ಅಧ್ಯಕ್ಷ ಸುಧಾಕರ ಹೆಜಮಾಡಿ, ಮೈತ್ರಿ ಪಕ್ಷದ ಮುಖಂಡರಾದ ಗೀತಾ ವಾಗ್ಲೆ, ಕಾಪು ದಿವಾಕರ ಶೆಟ್ಟಿ, ದಿಲ್ಲೇಶ್‌ ಶೆಟ್ಟಿ, ಶಾಲಿನಿ ಶೆಟ್ಟಿ ಕೆಂಚನೂರು, ಪ್ರಭಾವತಿ ಶೆಟ್ಟಿ ಕಟಪಾಡಿ, ಶಿವಾಜಿ ಸುವರ್ಣ ಬೆಳ್ಳೆ, ದಿನೇಶ್‌ ಪುತ್ರನ್‌, ಮನ್ಸೂರ್‌ ಇಬ್ರಾಹಿಂ, ಅಬ್ದುಲ್‌ ಅಜೀಜ್‌ ಮೊದಲಾದವರು ಉಪಸ್ಥಿತರಿದ್ದರು.

 

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago