ಕಾಪು : ಕಾಂಗ್ರೆಸ್ – ಜೆಡಿಎಸ್ ಜಂಟಿ ಪಕ್ಷಗಳ ಕಾರ್ಯಕರ್ತರ ಸಭೆಕಾಪು, ಮಾ. 29: ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ದಲ್ಲಿ ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಪಕ್ಷದ ಅಭ್ಯರ್ಥಿಯಾಗಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಸ್ಪರ್ಧಿಸುವ ಮೂಲಕ ರಾಷ್ಟ್ರ ರಾಜಕಾರಣದ ಮಹಾ ಘಟಬಂಧನ್‌ಗೆ ವಿಶೇಷ ಬಲ ತುಂಬಿದಂತಾಗಿದೆ. ದೇಶದ ಸಂವಿಧಾನ, ಜಾತ್ಯತೀತತೆಯ ರಕ್ಷಣೆಗಾಗಿ ಗೆಲುವಿಗೆ ಪ್ರಮೋದ್ ಅವರ ಗೆಲುವು ಅನಿವಾರ್ಯವಾಗಿದೆ ಎಂದು ಮಾಜಿ ಸಚಿವ ವಿನಯಕುಮಾರ್ ಸೊರಕೆ ಹೇಳಿದರು.
ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಸರಕಾರದ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ಮಾತನಾಡಿ, ಕಾಪು ಕ್ಷೇತ್ರದಲ್ಲಿ ಪುರಸಭೆಯೊಂದನ್ನು ಹೊರತುಪಡಿಸಿದರೆ ಹೆಚ್ಚಿನ ಆಯಕಟ್ಟಿನ ಸ್ಥಾನಗಳಲ್ಲಿ ಬಿಜೆಪಿ ಜನಪ್ರತಿನಿಧಿಗಳೇ ಆಡಳಿತದಲ್ಲಿದ್ದಾರೆ. ಕಾರ್ಯಕರ್ತರ ಎಲ್ಲ ನೋವಿಗೂ ಪೂರಕವಾಗಿ ಸ್ಪಂದಿಸಿ, ಕಾರ್ಯಕರ್ತರ ಪರವಾಗಿ ಧ್ವನಿ ಎತ್ತುವ ಉದ್ದೇಶಕ್ಕಾಗಿ ಸ್ಪರ್ಧಿಸುತ್ತಿದ್ದೇನೆ.ಎಲ್ಲರೂ ಮುಕ್ತ ಮನಸ್ಸಿನಿಂದ ಬೆಂಬಲಿಸುವಂತೆ ವಿನಂತಿಸಿ ಕೊಂಡರು.
ಕೆ.ಪಿ.ಸಿ.ಸಿ. ಕಾರ್ಯದರ್ಶಿ ಗಳಾದ ಡಾ| ದೇವಿಪ್ರಸಾದ್ ಶೆಟ್ಟಿ, ರಾಜಶೇಖರ ಕೋಟ್ಯಾನ್, ಕೆಪಿಸಿಸಿ ಸಂಯೋಜಕ ನವೀನ್‌ಚಂದ್ರ ಜೆ. ಶೆಟ್ಟಿ, ಕಾಪು ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ನವೀನ್‌ಚಂದ್ರ ಸುವರ್ಣ, ಜೆಡಿಎಸ್ ಬ್ಲಾಕ್ ಅಧ್ಯಕ್ಷ ಸುಧಾಕರ ಹೆಜಮಾಡಿ, ಮೈತ್ರಿ ಪಕ್ಷದ ಮುಖಂಡರಾದ ಗೀತಾ ವಾಗ್ಲೆ, ಕಾಪು ದಿವಾಕರ ಶೆಟ್ಟಿ, ದಿಲ್ಲೇಶ್ ಶೆಟ್ಟಿ, ಶಾಲಿನಿ ಶೆಟ್ಟಿ ಕೆಂಚನೂರು, ಪ್ರಭಾವತಿ ಶೆಟ್ಟಿ ಕಟಪಾಡಿ, ಶಿವಾಜಿ ಸುವರ್ಣ ಬೆಳ್ಳೆ, ದಿನೇಶ್ ಪುತ್ರನ್, ಮನ್ಸೂರ್ ಇಬ್ರಾಹಿಂ, ಅಬ್ದುಲ್ ಅಜೀಜ್ ಮೊದಲಾದವರು ಉಪಸ್ಥಿತರಿದ್ದರು.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…