Featured

ದೇಶದ ಸಮಗ್ರ ಅಭಿವೃದ್ಧಿಗಾಗಿ ಮೋದಿ ಮತ್ತೂಮ್ಮೆ ದೇಶದ ಪ್ರಧಾನಿಯಾಗಬೇಕು:ಶಾಸಕ ಸಿ.ಟಿ. ರವಿ – Vishwanews24

ಕುಷ್ಟಗಿ: ನರೇಂದ್ರ ಮೋದಿ ಮತ್ತೂಮ್ಮೆ ದೇಶದ ಪ್ರಧಾನಿಯಾದರೆ ಮಹಾತ್ವಾಕಾಂಕ್ಷಿ ನದಿಗಳ ಜೋಡಣೆ ಸಂಕಲ್ಪ ಈಡೇರಲಿದೆ ಎಂದು ರಾಜ್ಯ ಬಿಜೆಪಿ ಕಾರ್ಯದರ್ಶಿ, ಚಿಕಮಗಳೂರು ಶಾಸಕ ಸಿ.ಟಿ. ರವಿ ಹೇಳಿದರು.

ರವಿವಾರ ಪಟ್ಟಣದಲ್ಲಿ ರೋಡ್‌ ಶೋ ನಡೆಸಿ ಬಿಜೆಪಿ ಅಭ್ಯರ್ಥಿ ಕರಡಿ ಸಂಗಣ್ಣ ಪರ ಮತಯಾಚಿಸಿದರು. ನಂತರ ಬಸವೇಶ್ವರ ವೃತ್ತದಲ್ಲಿ ಮತದಾರರನ್ನು ಉದ್ದೇಶಿಸಿ ಮಾತನಾಡಿದರು.

2014ರಲ್ಲಿ ನರೇಂದ್ರ ಮೋದಿ ಪ್ರಧಾನಮಂತ್ರಿಯಾಗಿ ಸ್ವಚ್ಛ ಭಾರತ, ಜನ್‌ಧನ್‌ ಉಜ್ವಲ, ಮುದ್ರಾ, ಪ್ರಧಾನಮತ್ರಿ ಫಸಲ್ ಬಿಮಾ ಯೋಜನೆ, ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌, ಆಯುಷ್ಮಾನ್‌ ಭಾರತ ಮೊದಲಾದ ಜನಕಲ್ಯಾಣ ಯೋಜನೆಗಳನನ್ನು ಜಾರಿಗೆ ತಂದರು. ಇದೀಗ ಮತ್ತೂಮ್ಮೆ ಪ್ರಧಾನಿಯಾದರೆ ನದಿಗಳ ಜೋಡಣೆಯಿಂದ ವ್ಯಾಪಕ ನೀರಾವರಿ ಯೋಜನೆಗಳಿಗೆ ಮೊದಲಾದ್ಯತೆ ನೀಡುತ್ತಾರೆ. ಹೀಗಾಗಿ ಬಿಜೆಪಿ ಗೆಲ್ಲಿಸಬೇಕು. ಮೋದಿ ಮತ್ತೂಮ್ಮೆ ಪ್ರಧಾನಿಯಾಗಬೇಕು. ಪುಲ್ವಾಮಾ ಉಗ್ರರರ ದಾಳಿಗೆ ಮೂಲಕ ಪ್ರತ್ಯುತ್ತರ ನೀಡಿರುವುದು ಭಾರತದ ತಾಕತ್‌ ಆಗಿದೆ.

ಭಾರತ ಗೆಲ್ಲಿಸುವ ಯೋಗ್ಯತೆ ನರೇಂದ್ರ ಮೋದಿ ಅವರಿಗೆ ಇದ್ದು, ಆ ಯೋಗ್ಯತೆ ಕಾಂಗ್ರೆಸ್ಸಿಗರಲ್ಲಿದೆಯೇ? ಮಾಜಿ ಪ್ರಧಾನಿ ದೊಡ್ಡಗೌಡರಿಗೆ ದೇಶದ ಚಿಂತೆಗಿಂತ ಮಕ್ಕಳು, ಮೊಮ್ಮಕ್ಕಳ ಚಿಂತೆಯಾದರೆ ನರೇಂದ್ರ ಮೋದಿ ಅವರಿಗೆ ದೇಶ ಗೆಲ್ಲಿಸುವ ಚಿಂತೆಯಾಗಿದ್ದು, ದೇಶಕ್ಕಾಗಿ ಮೋದಿ ಅನಿವಾರ್ಯ ಎಂದು ಹೇಳಿದರು.

ಸಂಸದ, ಬಿಜೆಪಿ ಅಭ್ಯರ್ಥಿ ಸಂಗಣ್ಣ ಕರಡಿ ಮಾತನಾಡಿ, ಲೋಕಸಭೆ ಚುನಾವಣೆ ನಂತರ ರಾಜ್ಯದ ಮೈತ್ರಿ ಸರ್ಕಾರ ಪತನಗೊಳ್ಳಲಿದೆ. ಈ ಸರ್ಕಾರ ಮೇ 23ರವರೆಗೆ ಮಾತ್ರ ಜೀವಂತವಾಗಿರಲಿದೆ ಎಂದರು.

ಮಾಜಿ ಶಾಸಕ ದೊಡ್ಡನಗೌಡ ಪಾಟೀಲ, ಮಾಜಿ ಶಾಸಕ ಕೆ. ಶರಣಪ್ಪ ಮಾತನಾಡಿದರು. ಜಿಪಂ ಸದಸ್ಯರಾದ ಕೆ. ಮಹೇಶ, ವಿಜಯ್‌ ನಾಯಕ್‌, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಶರಣು ತಳ್ಳೀಕೇರಿ, ಹೇಮಲತಾ ಹಿರೇಮಠ, ಮಲ್ಲಣ್ಣ ಪಲ್ಲೇದ್‌, ಬಾಲಪ್ಪ ಚಾಕ್ರಿ, ಎಪಿಎಂಸಿ ಅಧ್ಯಕ್ಷ ಪರಶುರಾಮ ಪಲ್ಲೇದ್‌, ಪುರಸಭೆ ಸದಸ್ಯ ಕಲ್ಲೇಶ ತಾಳದ್‌, ಮಲ್ಲಿಕಾರ್ಜುನ ಮಸೂತಿ, ರಾಜು ಗಂಗನಾಳ ಮತ್ತಿತರಿದ್ದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago