Featured

ದೇಶದ ಸರ್ವೋತ್ತಮ ಜಿ.ಪಂ. ಹೆಗ್ಗಳಿಕೆಗೆ ಪಾತ್ರವಾದ ಉಡುಪಿ ಜಿಲ್ಲಾ ಪಂಚಾಯತ್ – vishwanews24

ದೇಶದ ಸರ್ವೋತ್ತಮ ಜಿ.ಪಂ. ಹೆಗ್ಗಳಿಕೆಗೆ ಪಾತ್ರವಾದ ಉಡುಪಿ ಜಿಲ್ಲಾ ಪಂಚಾಯತ್

ಉಡುಪಿ: ಶಿಕ್ಷಣ, ಆರ್ಥಿಕ ಕ್ರೋಢೀಕರಣ ಸಹಿತ ವಿವಿಧ ವಿಷಯ ಗಳಲ್ಲಿನ ವಿಶೇಷ ಸಾಧನೆಗಾಗಿ ಕೇಂದ್ರ ಸರಕಾರದ ಪಂಚಾಯತ್‌ರಾಜ್‌ ಇಲಾಖೆಯ ರಾಷ್ಟ್ರೀಯ ಪುರಸ್ಕಾರಕ್ಕೆ ಉಡುಪಿ ಜಿ.ಪಂ. ಆಯ್ಕೆಯಾಗಿದೆ.

ಡಿ.11ರಂದು ದಿಲ್ಲಿಯಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದ್ದು, ಜಿ.ಪಂ. ಸಿಇಒ ಪ್ರತೀಕ್‌ ಬಾಯಲ್‌ 2 ಕೋ.ರೂ. ನಗದಿನ ಪ್ರಶಸ್ತಿ ಸ್ವೀಕರಿಸುವರು.ಈ ಹಣವನ್ನು ಯಾವ ಉದ್ದೇಶಕ್ಕೆ ಬಳಸಬೇಕು ಎಂಬುದರ ಮಾರ್ಗ ಸೂಚಿಯನ್ನು ಇಲಾಖೆ ನೀಡಲಿದೆ. ಈ ಮೂಲಕ ಉಡುಪಿಯು ದೇಶದ ಸರ್ವೋತ್ತಮ ಜಿ.ಪಂ. ಹೆಗ್ಗಳಿಕೆಗೆ ಪಾತ್ರವಾಗಿದೆ.

ಉಡುಪಿಯ ಸಾಧನೆಯ ಹಾದಿ
ಉಡುಪಿಯು 155 ಗ್ರಾ. ಪಂ. ಹೊಂದಿದ್ದು, ಪ್ರತಿ ಸೋಮವಾರ ಜಿಪಂ ಸಿಇಒ ಗ್ರಾ.ಪಂ. ಗಳ ನೀರು ಪೂರೈಕೆ ಸಹಿತ ವಿವಿಧ ಕಾರ್ಯಯೋಜನೆ ಅನುಷ್ಠಾನ ಏಜೆನ್ಸಿಗಳೊಂದಿಗೆ ಪ್ರಗತಿ ಪರಿಶೀಲಿಸುತ್ತಿದ್ದರು. ಬಳಿಕ ಸಮಸ್ಯೆಗಳ ಪರಿಹಾರಕ್ಕೆ ತಿಂಗಳಿಗೆ 2 ಬಾರಿ ಜಿಲ್ಲಾಧಿಕಾರಿಗಳ ಜತೆ ಸಭೆ, ಇಲಾಖೆಗಳ ಜತೆ ಸಮನ್ವಯ, ಅಭಿವೃದ್ಧಿಗಾಗಿ ಕಳೆದ ವರ್ಷದ ಸೂಚ್ಯಂಕದ ಆಧಾರದಲ್ಲಿ ಯೋಜನೆ ರೂಪಿಸಿ ಅನುಷ್ಠಾನ,ವಾರ್ಡ್‌ ಸಭೆ, ಗ್ರಾಮ ಸಭೆ, ಜಮಾಬಂದಿಗೆ ಒತ್ತು, ಶಾಲಾಭಿವೃದ್ಧಿಗೆ ಪ್ರತ್ಯೇಕ ಸಮಿತಿ ರಚನೆ, ಶೈಕ್ಷಣಿಕ ಕಾರ್ಯಕ್ರಮ ಅನುಷ್ಠಾನ ಗುಣಮಟ್ಟ ಪರಿಶೀಲನೆ, ಶಿಶು, ಗರ್ಭಿಣಿ ಮರಣ ಸಂಭವಿಸ ದಂತೆ ನಿಗಾ, ಅಪೌಷ್ಟಿಕತೆ ನಿವಾರಣೆ, ಸಾಂಕ್ರಾಮಿಕ ರೋಗಗಳ ಸಮರ್ಥ ನಿರ್ವಹಣೆ ಇತ್ಯಾದಿ ಕ್ರಮಗಳಿಗೆ ಈ ಪ್ರಶಸ್ತಿ ಸಂದಿದೆ.

ಸಂಪನ್ಮೂಲ ಕ್ರೋಢೀಕರಣಕ್ಕೆ ಒತ್ತು ನೀಡಿ ಶೇ.90ಕ್ಕೂ ಜಾಸ್ತಿ ತೆರಿಗೆ ವಸೂಲು, ಆನ್‌ಲೈನ್‌ ತೆರಿಗೆ ಪಾವತಿಗೆ ಕ್ರಮ, ತ್ಯಾಜ್ಯ ನಿರ್ವಹಣೆಯಲ್ಲಿ ದೇಶಕ್ಕೆ ಮಾದರಿ, ಗ್ರಾಮೀಣ ಭಾಗದಲ್ಲಿ ಎಂಆರ್‌ಎಫ್ ಘಟಕ ಸ್ಥಾಪನೆ, ಆನ್‌ಲೈನ್‌ ಮೂಲಕ ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ನೀಟ್‌, ಸಿಇಟಿ ಕೋಚಿಂಗ್‌ ಮೂಲಕ ಎಸೆಸೆಲ್ಸಿ, ಪಿಯುಸಿಯಲ್ಲಿ ಅಗ್ರಸ್ಥಾನ ಪಡೆದದ್ದು, ಸಂಜೀವಿನಿ ಸಂಘಗಳ ಮೂಲಕ ಹಡಿಲು ಭೂಮಿ ಕೃಷಿ, ಇತ್ಯಾದಿ ಕ್ರಮಗಳಿಗೆ ನಾನಾಜಿ ದೇಶ್‌ಮುಖ್‌ ಸರ್ವೋತ್ತಮ ಪಂಚಾಯತ್‌ ಪ್ರಶಸ್ತಿಗೆ 3ನೇ ಅತ್ಯುತ್ತಮ ಜಿಲ್ಲೆಯಾಗಿ ಆಯ್ಕೆಯಾಗಿದೆ ಎಂದು ಜಿ.ಪಂ. ಸಹಾಯಕ ಕಾರ್ಯದರ್ಶಿ ಪ್ರಶಾಂತ್‌ ಅವರು ಮಾಹಿತಿ ನೀಡಿದರು.

ಮಡಿಕೇರಿ ತಾಲೂಕಿನ ಗಾಳಿಬೀಡು ಗ್ರಾ.ಪಂ.ಗೆ ಪ್ರಥಮ ಸ್ಥಾನ ಬಂದಿದ್ದು, 1 ಕೋ.ರೂ. ಬಹುಮಾನ ಪಡೆಯಲಿದೆ.

 

Vishwa News 24

Recent Posts

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ – vishwanews24

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…

6 minutes ago

ರೈಲು ಟಿಕೆಟ್‌ಗೆ ಹೊಸ ನಿಯಮ: ಪ್ರಯಾಣಿಕರಿಗೆ ಭಾರತೀಯ ರೈಲ್ವೆಯಿಂದ ಹೊಸ ಮಾರ್ಗಸೂಚಿ ಪ್ರಕಟ – vishwanews24

ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್​ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…

24 minutes ago

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ – vishwanews24

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…

1 hour ago

ಪತಿಗೆ ಬೇರೆ ಮಹಿಳೆ ಜೊತೆ ಅನೈತಿಕ ಸಂಬಂಧ : ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಪತ್ನಿ – vishwanews24

ಪತಿಗೆ ಬೇರೆ ಮಹಿಳೆ ಜೊತೆ ಅನೈತಿಕ ಸಂಬಂಧ : ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಪತ್ನಿ ಹಾವೇರಿ: ಪತಿಗೆ ಬೇರೆ…

1 hour ago

ಬಡ್ಡಿ ದಂಧೆಕೋರರ ಕಿರುಕುಳ : ಸೆಲ್ಫಿ ವಿಡಿಯೋ ಮಾಡಿ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ – vishwanews24

ಬಡ್ಡಿ ದಂಧೆಕೋರರ ಕಿರುಕುಳ : ಸೆಲ್ಫಿ ವಿಡಿಯೋ ಮಾಡಿ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ ಗದಗ: ಬಡ್ಡಿ ದಂಧೆಕೋರರ ಕಿರುಕುಳಕ್ಕೆ…

1 hour ago

ಕರ್ನಾಟಕ ಶಾಶ್ವತ ವಸತಿ ಪ್ರಮಾಣಪತ್ರಕ್ಕೆ ಆಕ್ಷೇಪ: ತುರ್ತು ಪರಿಶೀಲನೆಗಾಗಿ ಕೇಂದ್ರ ಗೃಹ ಸಚಿವರಿಗೆ ಶೋಭಾ ಕರಂದ್ಲಾಜೆ ಪತ್ರ – vishwanews24

ಕರ್ನಾಟಕ ಶಾಶ್ವತ ವಸತಿ ಪ್ರಮಾಣಪತ್ರಕ್ಕೆ ಆಕ್ಷೇಪ: ತುರ್ತು ಪರಿಶೀಲನೆಗಾಗಿ ಕೇಂದ್ರ ಗೃಹ ಸಚಿವರಿಗೆ ಶೋಭಾ ಕರಂದ್ಲಾಜೆ ಪತ್ರ ಬೆಂಗಳೂರು: ಕರ್ನಾಟಕ…

2 hours ago