ಕೋಲ್ಕತ್ತಾ,– ದೇಶದ ಹಿತಾಸಕ್ತಿ ದೃಷ್ಟಿಯಿಂದಾಗಿ ನರೇಂದ್ರ ಮೋದಿ ಅವರನ್ನು ಪ್ರಧಾನಮಂತ್ರಿ ಕುರ್ಚಿಯಿಂದಲ್ಲ ರಾಜಕೀಯ ಜೀವನದಿಂದಲೇ ಹೊರ ಹೋಗಬೇಕು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇಂದು ನಡೆದ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಅವರು, ನಾಲ್ಕೂವರೆ ವರ್ಷ ನರೇಂದ್ರ ಮೋದಿ ಅವರಿಗೆ ಈ ದೇಶದ ರೈತರು ನೆನಪಾಗಲಿಲ್ಲ. ಮಧ್ಯಮ ವರ್ಗದ ಕಷ್ಟಗಳು ಅರಿವಾಗಲಿಲ್ಲ. ವಿದೇಶಗಳಲ್ಲಿ ಪ್ರವಾಸ ಮಾಡುವುದರಲ್ಲೇ ಅವರು ಹೆಚ್ಚು ಸಮಯ ಕಳೆದರು.
ಚುನಾವಣೆ ಬಂದು ಬಾಗಿಲು ಬಡಿದಾಗ ಇದ್ದಕ್ಕಿದ್ದ ಹಾಗೆ ಮೋದಿ ಅವರಿಗೆ ದೇಶ ನೆನಪಾಗಿದೆ. ತಮ್ಮ ಸುಳ್ಳುಗಳ ಮೂಲಕ ವಿರೋಧ ಪಕ್ಷಗಳನ್ನು ಜರಿದು ಅಭಿವೃದ್ಧಿಯಾಗದೇ ಇರುವುದಕ್ಕೆ ವಿಪಕ್ಷಗಳನ್ನೇ ಗುರಿ ಮಾಡಿದ್ದಾರೆ ಮತ್ತು ವಿವಿಧ ರೀತಿಯ ಬೆದರಿಕೆಗಳನ್ನುಒಡ್ಡುವ ಪ್ರಯತ್ನ ಮಾಡಿದರು.
ದೇಶದಲ್ಲಿ ಸುಳ್ಳು ಹೇಳುವ ಸ್ಪರ್ಧೆಗೆ ಪ್ರಶಸ್ತಿ ನೀಡುವುದಾದರೆ ನರೇಂದ್ರ ಮೋದಿ ಅವರಿಗೆ ಪ್ರಥಮ ಬಹುಮಾನ ನೀಡಬೇಕು ಎಂದು ಮಮತಾ ಕಿಡಿಕಾರಿದರು.ಈ ಚುನಾವಣೆಯಲ್ಲಿ ಸುಳ್ಳಿನ ಮಾತುಗಳು ನಡೆಯುವುದಿಲ್ಲ.
ರೈತರು ಆತ್ಮಹತ್ಯೆ ಮಾಡಿಕೊಂಡಾಗ ಅವರ ಕಷ್ಟ ಕೇಳದ ಮೋದಿ ಅವರು ನೋಟು ಅಮಾನೀಕರಣದಿಂದ ಜನರು ತೊಂದರೆಯಲ್ಲಿದ್ದಾಗ ನೆರವಿಗೆ ಬಾರದ ಮೋದಿ ಅವರು ಸುಳ್ಳಿನ ಭಾಷಣ ಮಾಡುವ ಮೂಲಕ ಜನರನ್ನು ವಂಚಿಸಲು ಸಾಧ್ಯ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…