ಬೆಂಗಳೂರು: ‘ನಿಮಗೆ ದೇಶಪ್ರೇಮೆ, ಜನರ ಮೇಲೆ ಹಾಗೂ ಸಂವಿಧಾನದ ಮೇಲೆ ವಿಶ್ವಾಸವಿದ್ದರೆ ಈಗ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವವರಿಗೆ ಯಾವುದೇ ಸ್ಥಾನ ಕೊಡಬೇಡಿ’ ಎಂದು ಸಚಿವ ಯು.ಟಿ.ಖಾದರ್ ಬಿಜೆಪಿಗೆ ಸವಾಲು ಹಾಕಿದರು.
‘ನಮ್ಮ ದೇಶದ ಮೇಲೆ ದಾಳಿ ಮಾಡಿದವರಿಗೆ ಕೆಂಪು ಹಾಸು ಹಾಸುತ್ತೀರಿ. ಪಾಕ್ ಪ್ರಧಾನಿಯ ಜೊತೆಗೆ ಬಿರಿಯಾನಿ ಊಟ ಮಾಡುತ್ತೀರಿ. ಆದರೆ ನಮಗೆ ಮಾತ್ರ ನಮ್ಮವರ ಜತೆ ಮತನಾಡಲು ಅವಕಾಶ ಕೊಡದೆ ತಡೆಯುತ್ತೀರಿ. ಅಧಿಕಾರಕ್ಕಾಗಿ ಏನೆಲ್ಲಾ ಮಾಡುತ್ತಿದ್ದೀರಿ. ಇಂದು ಆತ್ಮಸಾಕ್ಷಿಯನ್ನು ಪ್ರಶ್ನಿಸಿಕೊಳ್ಳಿ’ ಎಂದು ಖಾದರ್ ತಿರುಗೇಟು ನೀಡಿದರು.
‘ಮುಂಬೈನಲ್ಲಿರುವವರನ್ನು ಅತೃಪ್ತರು ಎಂದು ಬಿಂಬಿಸಿ ಮಾಧ್ಯಮದವರು ತಪ್ಪು ಮಾಡುತ್ತಿದ್ದಾರೆ. ವಾಸ್ತವವಾಗಿ ಅವರೆಲ್ಲರೂ ತೃಪ್ತರು. ಅವರು ಬೆಂಗಳೂರಿಗೆ ವಾಪಸ್ ಬಂದ ಮೇಲೆ ಎಲ್ಲವೂ ಬಯಲಾಗುತ್ತದೆ’ ಎಂದು ಛೇಡಿಸಿದರು.
‘ನಮ್ಮ ಶಾಸಕರಿಗೆ ಬಂದೂಕು ತೋರಿಸಿ ಬೆದರಿಸುತ್ತಿದ್ದೀರಿ. ಬಿಜೆಪಿಯ ರಾಜ್ಯ ಮತ್ತು ಕೇಂದ್ರ ನಾಯಕರು ಇದರಲ್ಲಿ ಶಾಮೀಲಾಗಿದ್ದಾರೆ. ಅನುಭವಿ ವಕೀಲರಿಂದ ಅವರಿಗೆ ಮಾರ್ಗದರ್ಶನ ನೀಡಿ, ಆಮಿಷ ಒಡ್ಡಿ ಬೇರೆಡೆಗೆ ಕಳುಹಿಸಿದ್ದೀರಿ’ ಎಂದು ಆರೋಪಿಸಿದರು.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…