Featured

ದೇಶವನ್ನು ಆಳುವ ಅರ್ಹತೆ ಕಾಂಗ್ರೆಸ್‌ಗೆ ಮಾತ್ರ ಇದೆ : ಅಮೃತ್ ಶೆಣೈ – Vishwanews24

ಬಂಟ್ವಾಳ, : ತೀವ್ರಗಾಮಿಗಳಿಗೆ ಮಾತ್ರ ಬಿಜೆಪಿ ಟಿಕೆಟ್ ನೀಡುತ್ತಿದೆ. ಅನಂತ್ ಕುಮಾರ್, ಶೋಭಾ ಕರಂದ್ಲಾಜೆ, ನಳಿನ್ ಕುಮಾರ್ ಕಟೀಲು, ಪ್ರತಾಪ್ ಸಿಂಹ ಇದರ ಬ್ರಾಂಡ್‍ಗಳು. ಕಲ್ಲು ಒಡೆಯುವ, ಬೆಂಕಿ ಹಚ್ಚುವ ಮೂಲಕ ಕೋಮು ಸೌಹಾರ್ದತೆಯನ್ನು ಹಾಳು ಮಾಡುವುದೇ ಇವರ ಉದ್ದೇಶ. ಇವರಿಗೆ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿ ಬೇಕಾಗಿಲ್ಲ ಎಂದು ಎಐಸಿಸಿಯ ಸದಸ್ಯ ಅಮೃತ್ ಶೆಣೈ ಹೇಳಿದ್ದಾರೆ.

ಹಾಸನ- ಗುಂಡ್ಯ- ಬಿ.ಸಿ.ರೋಡ್ ಅಪೂರ್ಣ ಹೆದ್ದಾರಿಯ ಅಸ್ಥವ್ಯಸ್ಥೆಯನ್ನು ವಿರೋಧಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿಯ ಆಶ್ರಯದಲ್ಲಿ ನಡೆಯುತ್ತಿರುವ ಕಾಲ್ನಡಿಗೆ ಜಾಥಾ ಮಂಗಳವಾರ ಸಂಜೆ ಮಾಣಿ ಜಂಕ್ಷನ್‌ಗೆ ತಳುಪಿದ ಸಂದರ್ಭ ನಡೆದ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. ಮೋದಿ ಎರಡನೇ ಬಾರಿ ಪ್ರಧಾನಿಯಾಗುವ ಸಾಧ್ಯತೆಯೇ ಇಲ್ಲ. ಈ ಬಾರಿ ಬಿಜೆಪಿ ಸರಕಾರವನ್ನು ಜನರು ಮನೆಗೆ ಕಳುಹಿಸುತ್ತಾರೆ. ದೇಶವನ್ನು ಆಳುವ ಅರ್ಹತೆ ಕಾಂಗ್ರೆಸ್‌ಗೆ ಮಾತ್ರ ಇದೆ ಎಂದು ಅವರು ಹೇಳಿದರು.

ನಾವೆಲ್ಲರೂ ಹಿಂದು-ಒಂದು ಹೇಳುವವರು ಮೊದಲು ಒಟ್ಟಿಗೆ ಕುಳಿತು ಊಟ ಮಾಡಲಿ. ಕಾಂಗ್ರೆಸ್‌ನದ್ದು ಒಂದೇ ನಿಲುವು. ಬಿಜೆಪಿಯದ್ದು ದ್ವಂದ ನಿಲುವು. ಆಯ ರಾಜ್ಯಗಳಲ್ಲಿ ಒಂದೊಂದು ನೀತಿಯನ್ನು ಬಿಜೆಪಿ ಅನುಸರಿಸುತ್ತಿದೆ ಎಂದ ಅವರು, ನಮಗೆ ಇಷ್ಟವಾದ ಆಹಾರ ಸೇವಿಸುವುದು ನಮ್ಮ ಹಕ್ಕು. ಇದನ್ನು ಸಂವಿಧಾನವೇ ಎತ್ತಿ ಹಿಡಿದಿದೆ ಎಂದರು.

30 ವರ್ಷಗಳಿಂದ ಮಂಗಳೂರು ಲೋಕಸಭಾ ಸದಸ್ಯರಾದವರ ಸಾಧನೆ ಏನೆಂದು ಪ್ರಶ್ನೆ ಮಾಡಿದರೆ ಸಿಗುವ ಉತ್ತರ ಶೂನ್ಯ. ಕಾಂಗ್ರೆಸ್ ಲೋಕಸಭಾ ಸದಸ್ಯರ ಕಾಲದಲ್ಲಿ ಅವಕಾಶ ಸಿಕ್ಕಿದಷ್ಟು ಉತ್ತಮ ಕೆಲಸಗಳು ಆಗಿವೆ. ಜಿಲ್ಲೆಗೆ ಬಂದರು, ವಿಮಾನ ನಿಲ್ದಾಣಗಳು ಬಂದಿದ್ದರೆ ಅದು ಶ್ರೀನಿವಾಸ ಮಲ್ಯರ ಕಾಲದಲ್ಲಿ. ಜಿಲ್ಲೆಯ ಸಂಸದರಾಗಿ ಜವಹರಲಾಲ್ ನೆಹರೂ ಆತ್ಮೀಯರಾಗಿ ಅನೇಕ ಕೆಲಸಗಳು ಆಗಿದೆ. ಮಾತ್ರವಲ್ಲದೆ ಅನೇಕ ಕೆಲಸ ಕಾರ್ಯಗಳು ಜಿಲ್ಲೆಯ ಕಾಂಗ್ರೆಸ್ ಸಂಸದರ ಕಾಲದಲ್ಲಿ ಆಗಿದೆ ಎಂದರು.

ಬಿಜೆಪಿ ದೇಶದ ಸಂಪತ್ತು ಮತ್ತು ಸೌಹಾರ್ದವನ್ನು ನಾಶ ಮಾಡಿದೆ. ಇಡೀ ಬ್ಯಾಂಕ್ ವ್ಯವಸ್ಥೆಯೇ ನಷ್ಟದಲ್ಲಿದ್ದು, ಸುಮಾರು 27 ಮಂದಿ ಬ್ಯಾಂಕ್ ಲೂಟಿ ಮಾಡಿ ವಿದೇಶಕ್ಕೆ ಓಡಿ ಹೋಗಿದ್ದು, ಕೇಂದ್ರ ಸರಕಾರ ಇದರ ಪಾಲುಪಾರ ಎಂದ ಅವರು, ಆಡಂಬರದ ಜೀವನವನ್ನು ಅನುಭವಿಸುತ್ತಿರುವ ನರೇಂದ್ರ ಮೋದಿ ಆಧುನಿಕ ಭಾರತದ ಹಿಟ್ಲರ್ ಎಂದು ಅವರು ಹೇಳಿದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

6 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

6 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

6 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

6 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

6 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

6 days ago