ರಿಚರ್ಡ್ ಆಂಟನಿ ಸಿನಿಮಾದ ಕೆಲಸದಲ್ಲಿ ಬ್ಯುಸಿಯಾಗಿರುವ ರಕ್ಷಿತ್ ಶೆಟ್ಟಿ ಬೆಂಗಳೂರಿನಿಂದ ಉಡುಪಿಗೆ ಪ್ರಯಾಣ ಬೆಳೆಸಿ ಮತ ಹಾಕಿದ್ದಾರೆ. ಪ್ರತಿ ಬಾರಿಯೂ ಅವರು ತಪ್ಪದೇ ಮತದಾನದ ಪ್ರಕ್ರಿಯೆಯಲ್ಲಿ ಭಾಗಿಯಾಗುತ್ತಾರೆ. ಮತದಾನದ ನಂತರ ಮಾಧ್ಯಮಗಳ ಜೊತೆಯ ಮಾತನಾಡಿದ್ದಾರೆ.
ಐದು ವರ್ಷದಲ್ಲಿ ಏನು ಅಭಿವೃದ್ಧಿಯಾಗಿದೆ ಎಂದು ನೋಡಿ ವೋಟ್ ಹಾಕುತ್ತೇನೆ. ಮುಂದಿನ ಐದು ವರ್ಷ ಯಾವ ನಾಯಕ ಅಧಿಕಾರಕ್ಕೆ ಬರಬೇಕು ಎಂದು ವೋಟ್ ಮಾಡ್ತೇನೆ. ಯೋಚನೆ ಮಾಡಿ ರಾಜಕೀಯ ತಿಳಿದವರ ಜೊತೆ ತರ್ಕ ಮಾಡಿ ಮತ ಹಾಕುತ್ತೇನೆ. ಯಾವಾಗಲೂ ನಾನು ಒಂದು ನಿರ್ಧಾರಕ್ಕೆ ಬಂದು ಮತ ಹಾಕುತ್ತೇನೆ. ದೇಶವನ್ನು ಚೆನ್ನಾಗಿ ನಡೆಸಿಕೊಂಡು ಹೋಗುವ ನಾಯಕ ಅಧಿಕಾರಕ್ಕೆ ಬರಬೇಕು ಎಂದಿದ್ದಾರೆ ರಕ್ಷಿತ್.
ನೆನ್ನೆ ರಾತ್ರಿ ಬೆಂಗಳೂರಿಂದ ಹೊರಟು ಉಡುಪಿಗೆ ಬಂದಿದ್ದೇನೆ. ನಾನು ಬೆಂಗಳೂರು ಸೇರಿ 18 ವರ್ಷ ಆಯ್ತು. ಪ್ರತಿ ಬಾರಿ ವೋಟಿಗೆ ನಾನು ಉಡುಪಿಗೆ ಬರುತ್ತೇನೆ, ವೋಟು ನಮ್ಮ ಹಕ್ಕು ನಮ್ಮ ಜವಾಬ್ದಾರಿ. ವೋಟ್ ಗೋಸ್ಕರ ಬೆಂಗಳೂರಿಂದ ಊರಿಗೆ ಬರುವುದು ಖುಷಿ. ನನ್ನ ಊರು ನನ್ನ ದೇಶ ನಮ್ಮ ಜವಾಬ್ದಾರಿ ಏನೋ ಖುಷಿ ಇದೆ ಅಂತಾರೆ ರಕ್ಷಿತ್ ಶೆಟ್ಟಿ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…