Featured

ದೇಶವನ್ನು ದಿವಾಳಿ ಮಾಡಿದ್ದು ಮೋದಿ ಸರ್ಕಾರವೇ ಹೊರತು ನಾವಲ್ಲ : ಸಚಿವ ಸಂತೋಷ್ ಲಾಡ್ ವಾಗ್ದಾಳಿ – vishwanews24

ದೇಶವನ್ನು ದಿವಾಳಿ ಮಾಡಿದ್ದು ಮೋದಿ ಸರ್ಕಾರವೇ ಹೊರತು ನಾವಲ್ಲ : ಸಚಿವ ಸಂತೋಷ್ ಲಾಡ್ ವಾಗ್ದಾಳಿ

ಮಂಗಳೂರು: 2014ರ ವರೆಗೆ ದೇಶದ ಸಾಲ 53 ಲಕ್ಷ ಕೋಟಿ ಇತ್ತು. ನರೇಂದ್ರ ಮೋದಿ ಪ್ರಧಾನಿ ಆದ 10 ವರ್ಷಗಳಲ್ಲಿ ದೇಶದ ಸಾಲ 185 ಲಕ್ಷ ಕೋಟಿಗೆ ಏರಿಕೆಯಾಗಿದೆ. ದೇಶವನ್ನು ದಿವಾಳಿ ಮಾಡಿದ್ದು ಮೋದಿ ಅವರ ಸರ್ಕಾರವೇ ಹೊರತು ನಾವಲ್ಲ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ವಾಗ್ದಾಳಿ ನಡೆಸಿದ್ದಾರೆ.

ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನು ಭೇಟಿ ಮಾಡಿ ಬಳಿಕ ಅವರು ಮಾತನಾಡುತ್ತಿದ್ದರು.

ಬಿಜೆಪಿಗರು ಚುನಾವಣೆ ಸಂದರ್ಭ ಅಭಿವೃದ್ಧಿ ಬಗ್ಗೆ ಮಾತನಾಡುವುದಿಲ್ಲ, ಬದಲಾಗಿ ಪಾಕಿಸ್ತಾನ, ಮುಸಲ್ಮಾನ, ಅಪಘಾನಿಸ್ತಾನ ಬಗ್ಗೆ ಮಾತ್ರ ಮಾತನಾಡುತ್ತಾರೆ. ರಾಹುಲ್ ಗಾಂಧಿ ಇದುವರೆಗೆ ಸಾವಿರಕ್ಕೂ ಅಧಿಕ ಪತ್ರಿಕಾಗೋಷ್ಠಿ ನಡೆಸಿದ್ದಾರೆ. ಹೊರ ದೇಶಗಳಿಗೆ ಭೇಟಿ ನೀಡಿದ ಬಳಿಕ ಸಾಮಾನ್ಯವಾಗಿ ಪ್ರಾಧನಿಯಾದವರೂ ಪತ್ರಿಕಾಗೋಷ್ಠಿ ನಡೆಸುತ್ತಾರೆ. ಆದರೆ ಪ್ರಧಾನಿ ಮೋದಿ ಅವರು ತಿಂಗಳಿಗೆ ಒಂದು ಸುದ್ದಿಗೋಷ್ಠಿಯನ್ನೂ ನಡೆಸಿಲ್ಲ. ಬಿಹಾರ ಚುನಾವಣೆಗಾಗಿ ಬಿಜೆಪಿ ಸರಕಾರ ಒಂದು ವರ್ಷದ ಆಡಳಿತದ ಹಣವನ್ನು ಮಹಿಳೆಯರ ಖಾತೆಗೆ ಹತ್ತು ಸಾವಿರ ಹಾಕಲಾಗುತ್ತಿದೆ ಎಂದು ಹೇಳಿದರು.

ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಬೇಕಾದರೆ ಬಸವಣ್ಣ, ಬುದ್ಧ, ಅಂಬೇಡ್ಕರ್, ಕಾಂಗ್ರೆಸ್ ಸಿದ್ಧಾಂತವುಳ್ಳ ಯುವಕರನ್ನು ಗುರುತಿಸಬೇಕು. ಕಟ್ಟೆ ಮೇಲೆ ನಿಂತು ಭಾಷಣ ಮಾತನಾಡುವ ಯುವಕರನ್ನು ಮುನ್ನೆಲೆಗೆ ತರಬೇಕು ಎಂದರು.

ಅಸಂಘಟಿತ ವರ್ಗದ ಕಾರ್ಮಿಕರಲ್ಲಿ ಖಾಸಗಿ ವಾಣಿಜ್ಯ ಸಾರಿಗೆ ಹಾಗೂ ಇತರೆ ಸಂಬಂಧಿತ ಕಾರ್ಮಿಕರು ಸುಮಾರು 40 ಲಕ್ಷ ಇರುವುದಾಗಿ ಅಂದಾಜಿಸಲಾಗಿದ್ದು, ಅವರಿಗೆ ಸಾಮಾಜಿಕ ಭದ್ರತೆ ಹಾಗೂ ಕಲ್ಯಾಣ ಸೌಲಭ್ಯಗಳನ್ನು ಒದಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಕರ್ನಾಟಕ ಮೋಟಾರು ಸಾರಿಗೆ ಮತ್ತು ಇತರೆ ಸಂಬಂಧಿತ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ ಅಧಿನಿಯಮ ಜಾರಿಗೆ ತರಲಾಗಿದೆ. ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ ಮಂಡಳಿಯನ್ನು ರಚಿಸಿದ್ದು, ಈ ಮಂಡಳಿಯ ಮೂಲಕ ಕಾರ್ಮಿಕರಿಗೆ ಸಾಮಾಜಿಕ ಭದ್ರತಾ ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮಾಜಿ ಮೇಯರ್ ಸುರೇಶ್ ಬಳ್ಳಾಲ್, ಶಶಿಧರ್ ಹೆಗ್ಡೆ, ಸದಾಶಿವ್ ಉಳ್ಳಾಲ್, ಪದ್ಮರಾಜ್ ಪೂಜಾರಿ, ಟಿ.ಎಂ ಶಹೀದ್, ಎಂ.ಎ ಗಫೂರ್, ಲಾವಣ್ಯ ಬಳ್ಳಾಲ್, ಮಮತಾ ಗಟ್ಟಿ, ಅನೀಲ್ ತಡ್ಕಲ್, ಸೇರಿಂದತೆ ಮುಖಂಡರು, ಬ್ಲಾಕ್ ಅಧ್ಯಕ್ಷರು ಉಪಸ್ಥಿತರಿದ್ದರು. ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೆ.ಹರೀಶ್ ಕುಮಾರ್ ಸ್ವಾಗತಿಸಿದರು.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

4 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

5 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

5 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

5 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

5 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

1 day ago