ರಾಯಚೂರು: ‘ದೇಶದಲ್ಲಿ ಪ್ರಜಾ ಪ್ರಭುತ್ವದ ಮೌಲ್ಯಗಳು ಕುಸಿಯುತ್ತಿವೆ. ಸಹೋದರರಂತೆ ಇದ್ದವರನ್ನು ಕಲಹಕ್ಕೆ ಪ್ರಚೋದಿಸುತ್ತಿದೆ. ಬ್ರಿಟಿಷರ ಆಳ್ವಿಕೆ ಕಾಲದಲ್ಲಿದ್ದ ಸ್ಥಿತಿ ಮತ್ತೆ ಹತ್ತಿರ ಬರುತ್ತಿದೆ’ ಎಂದು ಐಎಎಸ್ ಹುದ್ದೆಗೆ ರಾಜೀನಾಮೆ ಸಲ್ಲಿಸಿರುವ ಅಧಿಕಾರಿ ಸಸಿಕಾಂತ ಸೆಂಥಿಲ್ ಹೇಳಿದರು.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಧರ್ಮ–ಧರ್ಮಗಳ ಜಗಳ ಹಚ್ಚುವ ಕೆಲಸಕ್ಕೆ ಕೇಂದ್ರ ಮುಂದಾಗಿದೆ. ಸಂವಿಧಾನದ ನೀತಿ ನಿಯಮಗಳನ್ನು ಹಾಳು ಮಾಡಿದೆ. ದೇಶವು ಆರ್ಥಿಕ, ಸಾಮಾಜಿಕ, ಶೈಕ್ಷಣಿಕವಾಗಿ ಹಿನ್ನೆಡೆ ಅನುಭವಿಸುವಂತೆ ಮಾಡಿದೆ’ ಎಂದು ದೂರಿದರು.
ಶಿಕ್ಷಣ ವ್ಯವಸ್ಥೆ ಮಕ್ಕಳಿಗೆ ಪೂರಕ ವಾತಾವರಣ ಸೃಷ್ಟಿಸಬೇಕು. ಶಿಕ್ಷಣ ಸುಧಾರಣೆಗೆ ಮೊದಲು ಸರ್ಕಾರಿ ಶಾಲೆಗಳಿಗೆ ಮೂಲ ಸೌಲಭ್ಯ ಕಲ್ಪಿಸಿ, ಶಿಕ್ಷಣ, ಆರೋಗ್ಯದ ಕಡೆ ಗಮನ ಹರಿಸಿ, ಅದಕ್ಕೆ ಹೆಚ್ಚಿನ ಬಜೆಟ್ ಮೀಸಲಿಡುವಂತೆ ತಿಳಿಸಿದರು.
ದೆಹಲಿಯ ಜೆಎನ್‌ಯು ವಿದ್ಯಾರ್ಥಿಗಳ ಮೇಲೆ ಪೊಲೀಸರು ಹಲ್ಲೆ ನಡೆಸಿರುವುದು ಖಂಡನೀಯ. ಎಲ್ಲರಿಗೂ ಪ್ರತಿಭಟಿಸುವ ಹಕ್ಕಿದೆ ಅದನ್ನು ಆಡಳಿತದಲ್ಲಿರುವ ಸರ್ಕಾರ ಕಿತ್ತುಕೊಂಡಿದೆ. ಒತ್ತಾಯ ಪೂರ್ವಕ ತಮ್ಮದೇ ಆದ ಸೈದ್ಧಾಂತಿಕ ನಿಲುವುಗಳನ್ನು ಜಾರಿಗೊಳಿಸುವ ಪ್ರಯತ್ನಗಳು ನಡೆದಿವೆ ಎಂದು ಆರೋಪಿಸಿದರು.
ಕೇಂದ್ರ ಸರ್ಕಾರ ಸರಕು ಮತ್ತು ಸೇವಾ ತೆರಿಗೆ ವಿಧಿಸಿ ದೇಶದಲ್ಲಿ ಕೈಗಾರಿಕ ಕಂಪನಿಗಳು ನಷ್ಟ ಅನುಭವಿಸುವಂತೆ ಮಾಡಿದೆ. ಅನೇಕ ಕಾರ್ಮಿಕರು ಉದ್ಯೋಗ ಕಳೆದುಕೊಂಡಿದ್ದಾರೆ. ಶಿಕ್ಷಣ ವ್ಯವಸ್ಥೆಯನ್ನು ಸಂಪೂರ್ಣ ಖಾಸಗಿಕರಣ ಮಾಡಲು ಹೋರಟಿದ್ದಾರೆ ಇದು ಸರಿಯಾದ ನಿರ್ಧಾರ ಅಲ್ಲ ಎಂದರು.
ದೇಶವು ಸರಿಯಾದ ದಾರಿಯಲ್ಲಿ ಸಾಗುತ್ತಿಲ್ಲ; ಅದಕ್ಕೆ, ಐಎಎಸ್ ಹುದ್ದೆಗೆ ರಾಜೀನಾಮೆ ನೀಡಿ ಅಧಿಕಾರದಿಂದ ಹೊರಬಂದು ಕೇಂದ್ರ ಸರ್ಕಾರದ ನೀತಿಗಳ ವಿರುದ್ಧ ಟೀಕಿಸುತ್ತಿದ್ದೇನೆ. ಪ್ರಜೆಗಳಿಗೆ ಜಾಗೃತಿಗೊಳಿಸಿ ಅವರ ಉಳಿವಿಗೆ ಶ್ರಮಿಸುತ್ತಿದ್ದೇನೆ ಎಂದು ತಿಳಿಸಿದರು.
ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…
ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…
ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…
ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ ಕಾಪು: ಕಾಪು ಕಡಲ ಕಿನಾರೆಯಲ್ಲಿ…
ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…
ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…