ನವದೆಹಲಿ: ಭಾರತೀಯ ಯೋಧರು ತಮ್ಮ ಪ್ರಾಣವನ್ನೇ ಪಣಕಿಟ್ಟು, ಶೌರ್ಯ, ತ್ಯಾಗ ಬಲಿದಾನದವನ್ನು ನೆನಪಿಸಿ ನಮನ ಸಲ್ಲಿಸುವ ಗೌರವ ದಿನವಾಗಿದ್ದು, ದೇಶದಾದ್ಯಂತ ಇಂದು 20 ನೇ ವರ್ಷದ ಕಾರ್ಗಿಲ್ ವಿಜಯೋತ್ಸವನ್ನು ಆಚರಿಸುತ್ತಿದೆ.
ಜುಲೈ 14ರಂದು ದೆಹಲಿಯ ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು `ವಿಕ್ಟರ್ ಫ್ಲೇಮ್’ ಅನ್ನು ಬೆಳಗಿಸಿದ್ದರು. ಈ ಜ್ಯೋತಿ ದೇಶದ ಪ್ರಮುಖ ನಗರಗಳಲ್ಲಿ ಸಂಚರಿಸಿದೆ. ಸುಮಾರು 25 ದಿನಗಳ ಕಾಲ ನಡೆದಿದ್ದ ಯುದ್ಧದಲ್ಲಿ ಪಾಕ್ ಸೇನಾಪಡೆ ಹಾಗೂ ಉಗ್ರವಾದಿಗಳನ್ನು ನಮ್ಮ ಸಿಪಾಯಿಗಳು ಹಿಮ್ಮೆಟ್ಟಿಸಿದ್ದರು. ಇದಕ್ಕೆ ಆಪರೇಷನ್ ವಿಜಯ್ ಅಂತ ಹೆಸರಿಡಲಾಗಿತ್ತು.
ಇತಿಹಾಸದಲ್ಲಿ 1999 ರ ಜುಲೈ 26 ಎಂಬುವುದು ಮಹತ್ವದ ದಿನವಾಗಿದೆ. ಭಾರತದ ಗಡಿಭಾಗದಲ್ಲಿ ಕಾರ್ಗಿಲ್, ದಾಸ್ ತೊಲೊಲಿಂಗ್, ಬಟಾಲಿಕ್, ಟರ್ಟೋಕ್ ವಲಯಗಳಲ್ಲಿ ಅಕ್ರಮವಾಗಿ ದೇಶದೊಳಗೆ ನುಸುಳಿದ ಪಾಕಿಸ್ತಾನಿ ಸೈನ್ಯಪಡೆಯನ್ನು ಸದೆಬಡಿಯುವ ಮೂಲಕ ಕಾರ್ಗಿಲ್ ಬೆಟ್ಟಗಳ ಮೇಲೆ ತ್ರಿವರ್ಣ ಧ್ವಜವನ್ನು ಹಾರಿಸಿದೆ.
ಕಾರ್ಗಿಲ್ ಯುದ್ಧದಲ್ಲಿ ಪಾಕಿಸ್ತಾನದ ವಿರುದ್ಧ ಭಾರತೀಯ ಸೈನಿಕರು ವಿಜಯಪತಾಕೆಯನ್ನು ಹಾರಿಸಿದ ದಿನವಾಗಿದೆ. ಪಾಕ್ ಮೇಲೆ ಭಾರತೀಯ ಯೋಧರು ವಿಜಯ ಸಾಧಿಸಿದ ಸ್ಮರಣಾರ್ಥ ಇಂದು ದೇಶದೆಲ್ಲೆಡೆ `ಕಾರ್ಗಿಲ್ ವಿಜಯ್ ದಿವಸ್’ ಆಚರಣೆ ಮಾಡಲಾಗುತ್ತಿದೆ. ಭಾರತೀಯ ಸೈನ್ಯದ ಶೌರ್ಯ, ಸೈನಿಕರ ಸಾಹಸವನ್ನು ಜಗತ್ತಿಗೆ ಪರಿಚಯಿಸಿದ್ದು ಕಾರ್ಗಿಲ್ ಯುದ್ಧ, ಹೀಗಾಗಿ ಪ್ರತಿ ವರ್ಷ ಜುಲೈ 26ರಂದು ಸಂಭ್ರಮದಿಂದ ಭಾರತೀಯರು ಆಚರಿಸುತ್ತಾರೆ.
ಕುಂದಾಪುರ: ಹೋಂ ಸ್ಟೇ ಎನ್ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…
ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ :…
ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…
ಉಡುಪಿ: ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…