ಬೆಂಗಳೂರು: ಇಂದಿನ ಯುವಕರು ನಾಳಿನ ನಾಯಕರಾಗುವುದು ಪ್ರದಾನಿ ಮೋದಿಗೆ ಇಷ್ಟವಿಲ್ಲ, ಇಂದಿನ ಯುವಕರು ಇಂದೇ ನಾಯಕರಾಗಬೇಕು ಎಂಬುದು ಮೋದಿ ಅಭಿಲಾಷೆಯಾಗಿದೆ ಎಂದು ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ.
ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು, ಪಕ್ಷದ ಸಂಘಟನೆಗಾಗಿ ಶ್ರಮಿಸುವುದಾಗಿ ತಿಳಿಸಿದ್ದಾರೆ.
ಈ ಕುರಿತು ಮಾತನಾಡಿರುವ ತೇಜಸ್ವಿ, ನಾನು ಇದೇ ಮೊಟ್ಟ ಮೊದಲ ಬಾರಿಗೆ ಕರ್ನಾಟಕದಿಂದ ಈ ಹುದ್ದೆ ಅಲಂಕರಿಸಿದ್ದು, ಇದು ಎಲ್ಲಾ ಕನ್ನಡಿಗರ ಮತ್ತು ನನ್ನ ಕ್ಷೇತ್ರದ ಜನರ ಆಶೀರ್ವಾದ ಎಂದು ತೇಜಸ್ವಿ ಸೂರ್ಯ ಹೇಳಿದ್ದಾರೆ.
ಈ ಹಿಂದೆ ರಾಜಕೀಯ ಹಿನ್ನೆಲೆ ಇಲ್ಲದ ಜನರಿಗೆ ಅವಕಾಶ ನೀಡಿದರೆ, ಕೆಲವು ಪಕ್ಷಗಳು ವಂಶವಾಹಿಯಾಗಿ ಅಧಿಕಾರ ನೀಡುತ್ತಿದ್ದವು ಎಂದು ಹೇಳಿದ್ದಾರೆ.
ದೇಶಾದ್ಯಂತ ತಳಮಟ್ಟದಿಂದ ಪಕ್ಷವನ್ನು ಸಂಘಟಿಸುವುದು ನನ್ನ ಪ್ರಮುಖ ಧ್ಯೇಯವಾಗಿದೆ. ಅತ್ಯಂತ ಸಾಧಾರಣ ಮತ್ತು ಸಾಮಾನ್ಯ ಹಿನ್ನೆಲೆ, ಬಡ ಮತ್ತು ದುರ್ಬಲ ವಿಭಾಗಗಳಿಂದ ಬಂದವರನ್ನು ಗುರುತಿಸಿ, ದೇಶಾದ್ಯಂತ ನಾಯಕತ್ವದ ಸ್ಥಾನಗಳನ್ನು ಪಡೆಯಲು ಮತ್ತು ಸಂಘಟನೆಗೆ ಶಕ್ತಿ ನೀಡಲು ಅವರಿಗೆ ಸಹಾಯ ಮಾಡುವ ಉದ್ದೇಶ ಹೊಂದಿದ್ದಾರೆ. ಭಾರತದ ಕೆಲವು ಭಾಗಗಳಲ್ಲಿ ಬಿಜೆಪಿ ನಗಣ್ಯ ಹೆಜ್ಜೆಗುರುತನ್ನು ಹೊಂದಿದೆ, ಇಂದು ಯುವ ನಾಯಕರಿಗೆ ಪ್ರಮುಖ ಸವಾಲಾಗಿದೆ. ಏಕೆಂದರೇ ನಾವು ಕಿರಿಯರು, ಆದರೆ ಪಕ್ಷ ವೇಗವಾಗಿ ಬೆಳೆಯುತ್ತಿದೆ ಎಂದರು.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…