Featured

ದೇಶಾದ್ಯಂತ ಯುಪಿಐ ಸೇವೆಗಳಲ್ಲಿ ವ್ಯತ್ಯಯ : ಬ್ಯಾಂಕಿಂಗ್‌ ಸೇವೆಗಳ ಮೇಲೆ ಕೂಡ ಪರಿಣಾಮ – vishwanews24

ದೇಶಾದ್ಯಂತ ಯುಪಿಐ ಸೇವೆಗಳಲ್ಲಿ ವ್ಯತ್ಯಯ : ಬ್ಯಾಂಕಿಂಗ್‌ ಸೇವೆಗಳ ಮೇಲೆ ಕೂಡ ಪರಿಣಾಮ

ನವದೆಹಲಿ: ದೇಶಾದ್ಯಂತ ಹಲವು ನಗರಗಳಲ್ಲಿಂದು ಯುಪಿಐ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿದೆ. ಗೂಗಲ್‌ಪೇ, ಫೋನ್‌ಪೇ , ಪೇಟಿಎಂ ಸೇರಿದಂತೆ ಹಲವಾರು ಯುಪಿಐ ಸಂಯೋಜಿತ ಅಪ್ಲಿಕೇಶನ್‌ಗಳಲ್ಲಿ ಏಕಕಾಲಕ್ಕೆ ಸಮಸ್ಯೆಯಾಗಿದೆ. ಇದರಿಂದ ಗ್ರಾಹಕರು ಬೇರೆಯವರಿಗೆ ಹಣ ಕಳುಹಿಸಲು ಸಾಧ್ಯವಾಗದೇ ಪರದಾಡಿದ್ದಾರೆ. ಯಾವ ಕಾರಣಕ್ಕೆ ಈ ಸಮಸ್ಯೆ ಎದುರಾಗಿದೆ ಎನ್ನುವುದು ತಿಳಿದು ಬಂದಿಲ್ಲ.

ಶನಿವಾರ (ಇಂದು) ಮಧ್ಯಾಹ್ನ 12 ಗಂಟೆ ಸುಮಾರಿಗೆ ಏಕಕಾಲಕ್ಕೆ ದೇಶಾದ್ಯಂತ ಯುಪಿಐ ಸೇವೆಗಳಲ್ಲಿ ಸಮಸ್ಯೆಯಾಗಿದೆ, ಡೌನ್‌ಡೆಕ್ಟರ್‌ ಕೂಡ ಇದನ್ನು ವರದಿ ಮಾಡಿದೆ. ಕ್ಯೂಆರ್‌ ಕೋಡ್‌ ಸ್ಕ್ಯಾನ್‌ ಮಾಡಿದ ಗ್ರಾಹಕರು 5 ನಿಮಿಷವಾದ್ರೂ ಪೂರ್ಣಗೊಳ್ಳದೇ ಇರುವುದು ಕಂಡುಬಂದಾಗ ಸಮಸ್ಯೆಯಾಗಿರುವುದು ಗೊತ್ತಾಗಿದೆ. ಬಳಿಕ ಬಹಳಷ್ಟು ಮಂದಿ ತಮ್ಮ ಸೋಷಿಯಲ್‌ ಮೀಡಿಯಾಗಳಲ್ಲಿ ಪೋಸ್ಟ್‌ ಹಾಕಿದ್ದಾರೆ. #upidown ಎನ್ನುವ ಹ್ಯಾಶ್‌ಟ್ಯಾಗ್‌ನೊಂದಿಗೆ ಎಕ್ಸ್‌ ಖಾತೆಯಲ್ಲಿ ಸ್ಕ್ರೀನ್‌ಶಾಟ್‌ ಅನ್ನು ಪೋಸ್ಟ್‌ ಮಾಡಿದ್ದಾರೆ. ಇದು ಸಮಸ್ಯೆಯಾದ ಕೆಲವೇ ನಿಮಿಷಗಳಲ್ಲಿ ಟ್ರೆಂಡಿಂಗ್‌ ಆಗಿದೆ.

ಎಸ್‌ಬಿಐ , ಗೂಗಲ್‌ ಪೇ, ಎಚ್‌ಡಿಎಫ್‌ಸಿ ಬ್ಯಾಂಕ್ ಮತ್ತು ಐಸಿಐಸಿಐ ಬ್ಯಾಂಕಿಂಗ್‌ನ UPI ಸೇವೆಗಳ ಮೇಲೂ ಪರಿಣಾಮ ಬೀರಿದೆ ಎಂದು ಡೌನ್‌ಡೆಕ್ಟರ್ ತನ್ನ ಪೋರ್ಟಲ್‌ನಲ್ಲಿ ಮಾಹಿತಿ ನೀಡಿದೆ.

ಇನ್ನೂ ಇದಕ್ಕೆ ಪ್ರತಿಕ್ರಿಯಿಸಿ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ನ್ಯಾಷನಲ್ ಪೇಮೆಂಟ್ ಕಾರ್ಪೋರೇಷನ್ ಆಫ್ ಇಂಡಿಯಾ, ಮಧ್ಯಂತರ ತಾಂತ್ರಿಕ ಸಮಸ್ಯೆಗಳಿಂದ ಯುಪಿಐ ವಹಿವಾಟಿನಲ್ಲಿ ಸಮಸ್ಯೆಯಾಗಿದೆ. ಈ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ ಎಂದು ತಿಳಿಸಿದೆ.

Vishwa News 24

Recent Posts

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು – vishwanews24

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…

3 days ago

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ – vishwanews24

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…

3 days ago

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ – vishwanews24

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…

3 days ago

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ – vishwanews24

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮ್ಮ…

3 days ago

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ – vishwanews24

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ  ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…

4 days ago

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ – ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು – vishwanews24

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…

4 days ago