ಬೆಂಗಳೂರು/ನವದೆಹಲಿ: ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆಯಾದ ಇಂಡಿಗೋದಲ್ಲಿ ಉಂಟಾಗಿರುವ ಭಾರೀ ಅಡಚಣೆ ಮೂರನೇ ದಿನವೂ ಮುಂದುವರಿದಿದೆ. ನಿನ್ನೆ ದೆಹಲಿ, ಮುಂಬೈ, ಬೆಂಗಳೂರು ಏರ್‌ಪೋರ್ಟ್ ಸೇರಿದಂತೆ ವಿವಿಧ ವಿಮಾನ ನಿಲ್ದಾಣಗಳಿಂದ ಸುಮಾರು 200 ವಿಮಾನಗಳ ಹಾರಾಟ ರದ್ದುಗೊಳಿಸಲಾಗಿತ್ತು. ಇನ್ನು ಕೆಲ ವಿಮಾನಗಳ ಹಾರಾಟದಲ್ಲಿ ವಿಳಂಬ ಕಂಡುಬಂದಿತ್ತು. ಈ ಸಮಸ್ಯೆ ಸತತ ಮೂರನೇ ದಿನಕ್ಕೆ ಕಾಲಿಟ್ಟಿದೆ. .
ವಿಮಾನದಲ್ಲಿನ ತಾಂತ್ರಿಕ ದೋಷ ಹಾಗೂ ಸಿಬ್ಬಂದಿ ಕೊರತೆ ಇತರ ಸಮಸ್ಯೆಗಳಿಂದ ಇಂದು ಸಹ ದೇಶಾದ್ಯಂತ 100ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದಾಗುವ ಸಾಧ್ಯತೆಗಳಿವೆ ಎಂದು ವರದಿಗಳು ತಿಳಿಸಿವೆ. ವ್ಯಾಪಕ ವಿಳಂಬ ಮತ್ತು ರದ್ದತಿಯಿಂದಾಗಿ ದೇಶಾದ್ಯಂತ ಸಾವಿರಾರು ಪ್ರಯಾಣಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಬೆಂಗಳೂರು ಏರ್‌ಪೋರ್ಟ್‌ನಲ್ಲಿ 73 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಕೆಂಪೇಗೌಡ ಏರ್‌ಪೋರ್ಟ್‌ನಲ್ಲೂ ತಾಂತ್ರಿಕ ದೋಷ ಉಂಟಾಗಿರುವ ಪರಿಣಾಮ 73 ಇಂಡಿಗೋ ವಿಮಾನಗಳ ಹಾರಾಟ ರದ್ದಾಗಿದೆ. ನಿನ್ನೆ 43 ವಿಮಾನಗಳ ಹಾರಾಟ ರದ್ದುಗೊಳಿಸಿದ್ದ ಇಂಡಿಗೋ ಇಂದು 73 ವಿಮಾನ ಹಾರಾಟ ರದ್ದುಗೊಳಿಸಿದೆ.
ಇಂಡಿಗೋ ಅಧಿಕಾರಿಗಳಿಗೆ ಡಿಜಿಸಿಎ ಬುಲಾವ್
ಇಂಡಿಗೋ ವಿಮಾನಗಳ ವಿಳಂಬ ಮತ್ತು ರದ್ದತಿಗಳ ಹಿಂದಿನ ಕಾರಣಗಳನ್ನ ವಿವರಿಸುವಂತೆ ಮತ್ತು ಪರಿಸ್ಥಿತಿ ಸುಧಾರಿಸಲು ಒಂದು ಯೋಜನೆ ನೀಡುವಂತೆ ಡಿಜಿಸಿಎ (DGCA) ಇಂಡಿಗೋಗೆ ಸೂಚಿಸಿದೆ. ಅಲ್ಲದೇ ಈ ಕುರಿತು ಇಂದು ಮಧ್ಯಾಹ್ನ ನಡೆಯಲಿರುವ ಉನ್ನತ ಮಟ್ಟದ ಸಭೆಗೆ ಇಂಡಿಗೋ ಅಧಿಕಾರಿಗಳಿಗೆ ಬುಲಾವ್ ನೀಡಿದೆ.
48 ಗಂಟೆಗಳಲ್ಲಿ ಪರಿಸ್ಥಿತಿ ಸುಧಾರಿಸುತ್ತೇವೆ: ಇಂಡಿಗೋ
ಉಂಟಾಗಿರುವ ಸಮಸ್ಯೆಗಳ ಕುರಿತು ಪ್ರತಿಕ್ರಿಯೆ ನೀಡಿರುವ ಇಂಡಿಗೋ ಸಂಸ್ಥೆಯು, 48 ಗಂಟೆಗಳಲ್ಲಿ ಪರಿಸ್ಥಿತಿ ಸುಧಾರಿಸುವ ಭರವಸೆ ನೀಡಿದೆ. ಜೊತೆಗೆ ಪ್ರಯಾಣಿಕರಲ್ಲಿ ಕ್ಷಮೆಯಾಚಿಸಿದೆ.
ಸಣ್ಣಪುಟ್ಟ ತಾಂತ್ರಿಕ ದೋಷಗಳು, ಚಳಿಗಾಲದ ವೇಳಾಪಟ್ಟಿಯಲ್ಲಿನ ಹೊಂದಾಣಿಕೆ, ಪ್ರತಿಕೂಲ ಹವಾಮಾನ ಪರಿಸ್ಥಿತಿ, ವಿಮಾನ ನಿಲ್ದಾಣದಲ್ಲಿನ ದಟ್ಟಣೆ ಹಾಗೂ ನವೀಕರಿಸಿದ ಸಿಬ್ಬಂದಿ ರೋಸ್ಟರಿಂಗ್ ನಿಯಮಗಳ ಅನುಷ್ಠಾನ ಸೇರಿದಂತೆ ಅನಿರೀಕ್ಷಿತ ಕಾರ್ಯಾಚರಣೆ ಸವಾಲುಗಳು ಅಡಚಣೆಗೆ ಕಾರಣವಾಗಿದೆ. ಇದನ್ನ ನಾವು ಊಹಿಸಿಯೂ ಇರಲಿಲ್ಲ. ಹಾಗಾಗಿ ಸಿಬ್ಬಂದಿ ಲಭ್ಯತೆಗೆ ಅನುಗುಣವಾಗಿ ಕಾರ್ಯಾಚರಣೆ ಸ್ಥಿರಗೊಳಿಸಲು ಕೆಲ ವಿಮಾನಗಳ ವೇಳಾಪಟ್ಟಿ ಬದಲಾವಣೆ ಮತ್ತು ರದ್ದತಿ ಆಗಿದೆ ಎಂದು ತಿಳಿಸಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…