Featured

ದೇಶ ಆರ್ಥಿಕ ಸಂಕಷ್ಟದಲ್ಲಿದೆ ಅಂತ ರಾಹುಲ್ ಗಾಂಧಿ ಮೊದಲೇ ಹೇಳಿದ್ದರು: ಪ್ರಿಯಾಂಕ್ ಖರ್ಗೆ – vishwanews24

ದೇಶ ಆರ್ಥಿಕ ಸಂಕಷ್ಟದಲ್ಲಿದೆ ಅಂತ ರಾಹುಲ್ ಗಾಂಧಿ ಮೊದಲೇ ಹೇಳಿದ್ದರು: ಪ್ರಿಯಾಂಕ್ ಖರ್ಗೆ

ಕಲಬುರಗಿ: ದೇಶದ ಆರ್ಥಿಕ ಸಂಕಷ್ಟದಲ್ಲಿದೆ ಅಂತ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಮೊದಲೇ ಹೇಳಿದ್ದರು. ಆಗ ಯಾರೂ ಎಚ್ಚೆತ್ತುಕೊಳ್ಳಲಿಲ್ಲ. ಈಗ ಬಿಜೆಪಿಯವರು ಪೆಟ್ರೋಲ್ ಕಡಿಮೆ ಬಳಸಿ ಎನ್ನುತ್ತಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆಟೀಕಿಸಿದ್ದಾರೆ.

ಮಧ್ಯಪ್ರಾಚ್ಯದಲ್ಲಿನ ಬಿಕ್ಕಟ್ಟು ತೀವ್ರಗೊಳ್ಳುತ್ತಿರುವ ಹಿನ್ನೆಲೆ ಮೋದಿ ತೈಲ ಮಿತಬಳಕೆಗೆ ಕರೆ ಕೊಟ್ಟಿರುವ ವಿಚಾರಕ್ಕೆ ಸಂಬಂಧಿಸಿದಂತೆ ಅವರು ಮಾತನಾಡಿದರು.

ಇದನ್ನೂ ಓದಿ: 

ದೇಶವನ್ನು ಈ ಸ್ಥಿತಿಗೆ ತಂದವರು ಯಾರು? ಬಿಜೆಪಿಯವರು ನಾಲ್ಕು ಜನ ಎಸ್ಕಾರ್ಟ್ ಬಿಟ್ರೆ ದೇಶದ ಸಮಸ್ಯೆ ಪರಿಹಾರ ಆಗುತ್ತಾ? ಇಷ್ಟು ದಿನ ಎಲ್ಲವೂ ಸರಿಯಾಗಿದೆ ಎಂದು ಮೋದಿ ಹೇಳುತ್ತಿದ್ದರು. ಈಗ ಯಾಕೆ ದೇಶದ ಆರ್ಥಿಕ ಸ್ಥಿತಿ ಆಪತ್ತಿನಲ್ಲಿದೆ? ಪ್ರಧಾನಿಯವರು ನಾವು ಜಾಗತಿಕವಾಗಿ ಆರ್ಥಿಕ ಸಂಕಷ್ಟದಲ್ಲಿದ್ದೇವೆ ಎಂದು ಮುಂಚೆಯೇ ಸಂಸತ್ತಿನಲ್ಲಿ ಹೇಳಬೇಕಿತ್ತು ಎಂದು ಕಿಡಿಕಾರಿದ್ದಾರೆ.

ನಾವು ಮೋದಿಯವರು ಹೇಳುವುದಕ್ಕೂ ಮುಂಚೆಯೇ ವಾರದಲ್ಲಿ ಒಂದು ದಿನ ಮೆಟ್ರೋದಲ್ಲಿ ಪ್ರಯಾಣ ಮಾಡುತ್ತಿದ್ದೆವು. ಏನಾದರೂ ಒಳ್ಳೆ ಸುದ್ದಿ ಇದ್ದರೆ ಮಾತ್ರ ರಾತ್ರಿ ಎಂಟು ಗಂಟೆಗೆ ಟಿವಿ ಮುಂದೆ ಬಂದು ಹೇಳುತ್ತಾರೆ. ಇದನ್ನು ಮೊದಲೇ ಯಾಕೆ ಜನರ ಹತ್ತಿರ ಹೇಳಲಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: 

ಪ್ರಧಾನಿ ನರೇಂದ್ರ ಮೋದಿಯವರು ಸದ್ಯ ಐದು ದಿನಗಳ ವಿದೇಶ ಪ್ರವಾಸದಲ್ಲಿದ್ದಾರೆ. ಅವರು ಜಾಗತಿಕ ಮಟ್ಟದ ಬೆಳವಣಿಗೆಗಳ ಕುರಿತು ನೆದರ್ಲೆಂಡ್‌ನಲ್ಲಿ ಭಾಷಣ ಮಾಡುತ್ತಾ, ಈ ಮೊದಲು ಕೊರೊನಾ ಬಂದಿತ್ತು. ಬಳಿಕ ಯುದ್ಧ ಪ್ರಾರಂಭವಾತ್ತು. ಈಗ ಇಂಧನ ಬಿಕ್ಕಟ್ಟು ತೀವ್ರಗೊಂಡಿದೆ. ಒಟ್ಟಾರೆಯಾಗಿ ಈ ದಶಕ ಇಡೀ ವಿಶ್ವಕ್ಕೆ ವಿಪತ್ತುಗಳ ದಶಕವಾಗಿ ಬದಲಾಗುತ್ತಿದೆ. ಈ ಪರಿಸ್ಥಿತಿ ಬೇಗ ದೂರವಾಗದೇ ಇದ್ದರೆ ಕಳೆದ ಒಂದು ದಶಕದಿಂದ ಮಾಡಿದ ಯಾವುದೇ ಕೆಲಸಗಳಿಂದ ಪ್ರಯೋಜನವಿಲ್ಲ. ವಿಶ್ವದ ಬಹುಪಾಲು ಜನರು ಬಡತನಕ್ಕೆ ಸಿಲುಕಲಿದ್ದಾರೆ ಎಂದು ಎಚ್ಚರಿಕೆ ನೀಡಿದ್ದರು.

Vishwa News 24

Recent Posts

ಉಡುಪಿ : ಯುವತಿ ನಾಪತ್ತೆ -vishwanews24

ಉಡುಪಿ : ಯುವತಿ ನಾಪತ್ತೆ ಉಡುಪಿ : ಉಡುಪಿ ಸವೀಸ್ ಬಸ್ ನಿಲ್ದಾಣದ ಬಳಿ ಇರುವ ಹೊಲಿಗೆ ತರಬೇತಿ ಕೇಂದ್ರದಲ್ಲಿ…

10 hours ago

ಪಡುಬಿದ್ರಿ : ವ್ಯಕ್ತಿ ನಾಪತ್ತೆ -vishwanews24

ಪಡುಬಿದ್ರಿ : ವ್ಯಕ್ತಿ ನಾಪತ್ತೆ ಉಡುಪಿ: ಎಲ್ಲೂರು ಗ್ರಾಮ ಅದಮಾರು ಅಂಚೆ ಅಂಬೇಡ್ಕರ್ ರೋಡ್ ಆಶಿರ್ವಾದ ಹೌಸ್ ನಿವಾಸಿ ಹರ್ಷಲ್…

10 hours ago

ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ -vishwanews24

ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ ಉಡುಪಿ: ತುಳು ಭಾಷೆಗೆ ಅಧಿಕೃತ…

11 hours ago

ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ -vishwanews24

ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಶೀಘ್ರ…

12 hours ago

ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ  , ಪುತ್ರ ನಾಪತ್ತೆ ;  ಪ್ರಕರಣ ದಾಖಲು -vishwanews24

ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ  , ಪುತ್ರ ನಾಪತ್ತೆ ;  ಪ್ರಕರಣ ದಾಖಲು…

15 hours ago

ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ -vishwanews24

ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ ಮಂಗಳೂರು: ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು…

15 hours ago