ಹೊಸದಿಲ್ಲಿ: “ಹುತಾತ್ಮರ ಪ್ರತಿ ಹನಿ ರಕ್ತಕ್ಕೂ ಪ್ರತೀಕಾರ ತೀರಿಸಿಯೇ ಸಿದ್ಧ ಎಂದು ನಾನು ಶಪಥ ಮಾಡಿದ್ದೇನೆ. ದೇಶ ದಿಂದ ಭಯೋತ್ಪಾದನೆ ಮತ್ತು ನಕ್ಸಲ್‌ವಾದವನ್ನು ನಿರ್ಮೂಲನೆ ಮಾಡುತ್ತೇನೆ’.
ಮಧ್ಯಪ್ರದೇಶದ ಸಾಗರದಲ್ಲಿ ರವಿವಾರ ಚುನಾವಣ ಪ್ರಚಾರ ರ‍್ಯಾಲಿಯಲ್ಲಿ ಪ್ರಧಾನಿ ಮೋದಿ , ಈ ಚೌಕಿದಾರನು ಪ್ರತಿಯೊಬ್ಬ ಯೋಧನ ನೆತ್ತರಿಗೂ ಪ್ರತೀಕಾರ ತೀರಿಸಲು ಪಣ ತೊಟ್ಟಿದ್ದಾನೆ. ಅದಕ್ಕೆ ನಿಮ್ಮ ಆಶೀರ್ವಾದ ಬೇಕಿದೆ. ಪಾಕಿಸ್ಥಾನದ ಸೂಪರ್ ಫೇವರಿಟ್ ಭಯೋತ್ಪಾದಕ ಮಸೂದ್ ಅಜರ್‌ಗೆ ವಿಶ್ವಸಂಸ್ಥೆ ಹೇರಿದ ನಿಷೇಧ ಹಾಗೂ ಭಾರತದ ನಿಲುವಿಗೆ ಇತರೆಲ್ಲ ದೇಶಗಳೂ ಸಮ್ಮತಿಸಿದ ರೀತಿಯು ಪಾಕಿಸ್ಥಾನಕ್ಕೆ ಕಪಾಳ ಮೋಕ್ಷವಾದಂತಾಗಿದೆ. ಆದರೆ, ಇದು ಕೇವಲ ಆರಂಭವಷ್ಟೆ. ನಾವು ಇನ್ನೂ ಸಾಧಿಸಬೇಕಾದ್ದು ಬಹಳಷ್ಟಿದೆ. ಈಗ ಪಾಕಿಸ್ಥಾನವೇ ತಾವು ಯಾವ ಹಾದಿಯಲ್ಲಿ ಸಾಗಬೇಕು ಎಂಬುದನ್ನು ನಿರ್ಧರಿಸಬೇಕಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
“ಬ್ಯಾಕಾಪ್ಸ್ ಎಂಬ ಹೆಸರೇ ಕಾಂಗ್ರೆಸ್ ಅಧ್ಯಕ್ಷರ ಹಿಂಬಾಗಿಲ ಕಾರ್ಯಾಚರಣೆಯನ್ನು ಸೂಚಿಸುತ್ತದೆ. 21ನೇ ಶತಮಾನದ ಒಂದಿಡೀ ದಶಕವನ್ನೇ ಭಾರತವು ಕಳೆದುಕೊಂಡಿತು. 2004ರಲ್ಲಿ ಕಾಂಗ್ರೆಸ್ “ಕುಟುಂಬಕ್ಕೆ ವಿಧೇಯ’ರಾದ ಮನಮೋಹನ್ ಸಿಂಗ್‌ರನ್ನು ಪ್ರಧಾನಿ ಹುದ್ದೆಗೇರಿಸಿತು.
ಏಕೆಂದರೆ, ಆಗ ರಾಜಕುಮಾರ ಇನ್ನೂ ಆ ಹುದ್ದೆಗೇರಲು ಸಜ್ಜಾಗಿರಲಿಲ್ಲ. ಆತನಿಗೆ ತರಬೇತಿ ನೀಡುವ ಯತ್ನವೆಲ್ಲವೂ ವಿಫಲವಾಯಿತು’ ಎಂದು ವ್ಯಂಗ್ಯವಾಡಿದ್ದಾರೆ. ಅಲ್ಲದೆ, ಕಾಂಗ್ರೆಸ್ ಅಧ್ಯಕ್ಷರ ಹಗರಣಗಳು ಈಗ ನೆಲ, ಜಲ ಹಾಗೂ ಆಕಾಶದಿಂದಲೂ ಒಂದೊಂದಾಗಿ ಹೊರಬರುತ್ತಿದೆ ಎಂದೂ ಹೇಳಿದ್ದಾರೆ.
ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…
ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ…
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…
ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…
ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…
ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…