Featured

ಸಿನಿಮಾ ಹಾಲ್ ನಲ್ಲಿ ರಾಷ್ಟ್ರಗೀತೆಯನ್ನು ಮೊಳಗಿಸುವುದು ಸರಿಯಲ್ಲ,ದೇಶ ಭಕ್ತಿಯನ್ನು ಪರೀಕ್ಷಿಸಿಕೊಳ್ಳಲು ಅದು ಸೂಕ್ತ ಸ್ಥಳವಲ್ಲ :ಪವನ್ ಕಲ್ಯಾಣ್  -Vishwanews24

ಹೈದರಾಬಾದ್ : ನಟ ಹಾಗೂ ರಾಜಕಾರಣಿ ಪವನ್ ಕಲ್ಯಾಣ್ ಸಿನಿಮಾ ಹಾಲ್ ನಲ್ಲಿ ರಾಷ್ಟ್ರಗೀತೆಯನ್ನು ಮೊಳಗಿಸುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ಇತ್ತೀಚೆಗಷ್ಟೇ “2019ರ ಲೋಕಸಭೆ ಚುನಾವಣೆ ಬರುವ ಮುನ್ನ ಯುದ್ಧ ನಡೆಯುತ್ತದೆ ಎಂದು ಬಿಜೆಪಿ ಎರಡು ವರ್ಷದ ಹಿಂದೆಯೇ ನನಗೆ ಹೇಳಿತ್ತು” ಎಂದು ಹೇಳಿಕೆ ನೀಡಿದ್ದ ಜನ ಸೇನಾ ಮುಖ್ಯಸ್ಥ ಹಾಗೂ ಟಾಲಿವುಡ್ ನಟ ಪವನ್ ಕಲ್ಯಾಣ್ ಇದೀಗ “ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆಗೆ ಎದ್ದು ನಿಲ್ಲುವುದು ನನಗೆ ಇಷ್ಟವಾಗಲ್ಲ” ಎಂದು ಹೇಳುವುದರ ಮೂಲಕ ಸುದ್ದಿಯಾಗಿದ್ದಾರೆ.

ಆಂಧ್ರಪ್ರದೇಶದ ಕರ್ನೂಲ್​ನಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಮಾತನಾಡಿದ ಪವನ್ ಕಲ್ಯಾಣ್  ‘ಸಿನಿಮಾ ಹಾಲ್ ನಲ್ಲಿ ರಾಷ್ಟ್ರಗೀತೆಗೆ ಎದ್ದು ನಿಲ್ಲುವುದು ದೇಶಪ್ರೇಮವೇ?’, ಸಿನಿಮಾ ಮಂದಿರಗಳಲ್ಲಿ ನಮ್ಮ ಕುಟುಂಬದ ಜೊತೆಗೆ ಸಿನಿಮಾವನ್ನು ನೋಡುತ್ತೇವೆ.ಅದು ನಮ್ಮ ದೇಶ ಭಕ್ತಿಯನ್ನು ಪರೀಕ್ಷಿಸಿಕೊಳ್ಳಲು ಅದು ಸೂಕ್ತ ಸ್ಥಳವಲ್ಲ ಎಂದು ಹೇಳಿದ್ದಾರೆ.

ರಾಷ್ಟ್ರಪ್ರೇಮವನ್ನು ಕೇವಲ ಸಿನಿಮಾ ಹಾಲ್ ಗೆ ಸೀಮಿತ ಗೊಳಿಸುವ ಕ್ರಮವನ್ನು ಖಂಡಿಸಿದ ಪವನ್ ಕಲ್ಯಾಣ್ “ರಾಜಕೀಯ ಪಕ್ಷಗಳು ತಮ್ಮ ಸಭೆ ನಡೆಯುವ ಮೊದಲು ರಾಷ್ಟ್ರಗೀತೆ ಹಾಡಬಹುದಲ್ಲ. ಸಿನಿಮಾ ಮಂದಿರಗಳಲ್ಲಿ ಮಾತ್ರವೇಕೆ? ದೇಶದ ಅತ್ಯುನ್ನತ ಕಚೇರಿಗಳಲ್ಲೂ ರಾಷ್ಟ್ರಗೀತೆ ಹಾಡಬೇಕು ಎಂದಿದ್ದಾರೆ. ಸಮಾಜದಲ್ಲಿ ಇನ್ನೂ ರೌಡಿಯಿಸಂ, ಭ್ರಷ್ಟಾಚಾರಗಳು ಅಸ್ತಿತ್ವದಲ್ಲಿ ಇವೆ.ಅವುಗಳನ್ನು ನಿರ್ಮೂಲನ ಮಾಡಬೇಕು. ಆ ಮೂಲಕ ನಮ್ಮ ದೇಶಭಕ್ತಿ ತೋರಿಸಬೇಕು ಎಂದರು.

“ರಾಜಕೀಯ ಪಕ್ಷಗಳು ತಮ್ಮ ಸಭೆ ಸಮಾರಂಭಗಳು ಆರಂಭವಾಗುವ ಮುನ್ನವೇಕೆ ರಾಷ್ಟ್ರಗೀತೆಯನ್ನು ಹಾಕುವುದಿಲ್ಲ? ಚಿತ್ರಮಂದಿರಗಳಲ್ಲಿ ಮಾತ್ರ ಯಾಕೆ ಹಾಕಬೇಕು? ದೇಶದಲ್ಲಿರುವ ಎಲ್ಲಾ ಕಚೇರಿಗಳಲ್ಲೂ ರಾಷ್ಟ್ರಗೀತೆ ಮೊಳಗಬೇಕು. ಯಾರು ಕಾನೂನನ್ನು ಮಾಡುತ್ತಾರೋ ಅವರು ಕೂಡ ಅದನ್ನು ಪಾಲಿಸಬೇಕು” ಎಂದು ಅವರು ಹೇಳಿದ್ದಾರೆ.

 

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

2 days ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago