Featured

ದೇಶ ಮತ್ತು ರಾಜ್ಯ ಉಳಿಸಲು ಕಾಂಗ್ರೆಸ್ ನಿಂದ ಮಾತ್ರ ಸಾಧ್ಯ , ಕಾಂಗ್ರೆಸ್‌ ಪಕ್ಷ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಪಕ್ಷ :  ಸಿದ್ದರಾಮಯ್ಯ – Vishwanews24

ದೇಶ ಮತ್ತು ರಾಜ್ಯ ಉಳಿಸಲು ಕಾಂಗ್ರೆಸ್ ನಿಂದ ಮಾತ್ರ ಸಾಧ್ಯ ..

ಕಾಂಗ್ರೆಸ್‌ ಪಕ್ಷ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಪಕ್ಷ :  ಸಿದ್ದರಾಮಯ್ಯ

ಬಾಗಲಕೋಟೆ : ದೇಶ ಮತ್ತು ರಾಜ್ಯ ಉಳಿಸಲು ಕಾಂಗ್ರೆಸ್‌ ನಿಂದ ಮಾತ್ರ, ಕಾಂಗ್ರೆಸ್‌ ಪಕ್ಷ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಪಕ್ಷ. ದೇಶದ ಸ್ವಾತಂತ್ರ್ಯಕ್ಕಾಗಿ ಸಾವಿರಾರು ಜನ ಕಾಂಗ್ರೆಸ್‌ ನವರು ಪ್ರಾಣತ್ಯಾಗ ಮಾಡಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಬಾಗಲಕೋಟೆ ಜಿಲ್ಲೆಯ ತೇರದಾಳದಲ್ಲಿ ಇಂದು ಆಯೋಜಿಸಿದ್ದ ಪ್ರಜಾಧ್ವನಿ ಸಮಾವೇಶದಲ್ಲಿ ಮಾತನಾಡಿದ ಸಿದ್ದರಾಮಯ್ಯ, ತೇರದಾಳ ವಿಧಾನಸಭಾ ಕ್ಷೇತ್ರದಲ್ಲಿ 16 ಜನ ನಮ್ಮ ಪಕ್ಷದ ಟಿಕೇಟ್‌ ಆಕಾಂಕ್ಷಿಗಳು ಇದ್ದಾರೆ, ಅವರೆಲ್ಲರಲ್ಲಿ ನನ್ನದೊಂದು ಮನವಿ, ಇಂದು ಇಲ್ಲಿ ಈ ಕಾರ್ಯಕ್ರಮವನ್ನು ಆಯೋಜನೆ ಮಾಡಲು ಯಾವ ರೀತಿ ಒಗ್ಗಟ್ಟಾಗಿ ಕೆಲಸ ಮಾಡಿದ್ದೀರಿ, ಚುನಾವಣೆಯಲ್ಲಿ ಕೂಡ ಇದೇ ಒಗ್ಗಟ್ಟನ್ನು ತೋರಿ ಟಿಕೇಟ್‌ ಸಿಕ್ಕ ನಮ್ಮ ಅಭ್ಯರ್ಥಿಯ ಗೆಲುವಿಗೆ ಶ್ರಮಿಸಬೇಕು ಎಂದು ಮನವಿ ಮಾಡುತ್ತೇನೆ. ಭ್ರಷ್ಟ ಬಿಜೆಪಿ ಸರ್ಕಾರವನ್ನು ಕಿತ್ತೆಸೆಯುವುದು ನಮ್ಮ ನಿಮ್ಮಲ್ಲರ ಏಕಮಾತ್ರ ಗುರಿಯಾಗಿರಲಿ ಎಂದರು.

ದೇಶ ಮತ್ತು ರಾಜ್ಯ ಉಳಿಸಲು ಕಾಂಗ್ರೆಸ್‌ ನಿಂದ ಮಾತ್ರ, ಕಾಂಗ್ರೆಸ್‌ ಪಕ್ಷ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಪಕ್ಷ. ದೇಶದ ಸ್ವಾತಂತ್ರ್ಯಕ್ಕಾಗಿ ಸಾವಿರಾರು ಜನ ಕಾಂಗ್ರೆಸ್‌ ನವರು ಪ್ರಾಣತ್ಯಾಗ ಮಾಡಿದ್ದಾರೆ, ಲಕ್ಷಾಂತರ ಜನ ಜೈಲು ಸೇರಿದ್ದರು, ಆಸ್ತಿಪಾಸ್ತಿ ಕಳೆದುಕೊಂಡಿದ್ದರು. ಇಂಥಾ ಐತಿಹಾಸಿಕ ಹಿನ್ನೆಲೆಯಿರುವ ಕಾಂಗ್ರೆಸ್‌ ಪಕ್ಷವನ್ನು ಅಧಿಕಾರಕ್ಕೆ ತರಬೇಕಾಗಿರುವುದು ನಮ್ಮ ನಿಮ್ಮೆಲ್ಲರ ಕರ್ತವ್ಯ. ನಾನು ಇಲ್ಲಿನ ಯಾವುದೇ ಒಬ್ಬ ಅಭ್ಯರ್ಥಿಯ ಪರ ಇಲ್ಲ, ಪಕ್ಷ ನಡೆಸುವ ಸಮೀಕ್ಷೆ, ಸ್ಥಳೀಯ ನಾಯಕರ ಮತ್ತು ಕಾರ್ಯಕರ್ತರ ಅಭಿಪ್ರಾಯ, ಮತದಾರರ ಒಲವು ಮತ್ತು ಚುನಾವಣಾ ವೀಕ್ಷಕರ ಒಟ್ಟು ಅಭಿಪ್ರಾಯವನ್ನು ಸಂಗ್ರಹಿಸಿ ಹೈಕಮಾಂಡ್‌ ಒಬ್ಬ ಗೆಲ್ಲುವ ಅಭ್ಯರ್ಥಿಗೆ ಟಿಕೇಟ್‌ ನೀಡಲಿದೆ, ಈ ಟಿಕೇಟ್‌ ಸಿಕ್ಕ ಅಭ್ಯರ್ಥಿಯ ಗೆಲುವಿಗೆ ನಾವೆಲ್ಲರೂ ಒಂದಾಗಿ ಕೆಲಸ ಮಾಡೋಣ. ಈ ಚುನಾವಣೆಯಲ್ಲಿ ಬಿಜೆಪಿಯನ್ನು ಸಂಪೂರ್ಣವಾಗಿ ಸೋಲಿಸುವ ಅವಕಾಶ ಇದೆ, ಅದನ್ನು ನಾವು ಸದುಪಯೋಗ ಮಾಡಿಕೊಳ್ಳಬೇಕು ಎಂದು ಹೇಳಿದ್ದಾರೆ.

ಕೊರೊನಾ ಕಾಲದಲ್ಲಿ ಉಚಿತವಾಗಿ ಅಕ್ಕಿ ನೀಡುವ ನಮ್ಮ ಸರ್ಕಾರದ ಅನ್ನಭಾಗ್ಯ ಯೋಜನೆ ಇಲ್ಲದೆ ಹೋಗಿದ್ದರೆ ಸಾವಿರಾರು ಜನ ಹಸಿವಿನಿಂದ ಸಾಯುವಂತಾಗುತ್ತಿತ್ತು. ಇದರ ಜೊತೆಗೆ ಮನಮೋಹನ್‌ ಸಿಂಗ್‌ ಅವರ ಸರ್ಕಾರ ಜಾರಿ ಮಾಡಿದ್ದ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆ ಗ್ರಾಮೀಣ ಭಾಗದ ಜನರಿಗೆ ಕೊರೊನಾ ಕಾಲದಲ್ಲಿ ಕೂಡ ಉದ್ಯೋಗ ನೀಡಿತ್ತು. ಇವೆರೆಡು ಕಾರ್ಯಕ್ರಮಗಳು ಕೊರೊನಾ ಕಾಲದಲ್ಲಿ ಬಡಜನರ ನೆರವಿಗೆ ನಿಂತಿದ್ದವು ಎಂಬುದನ್ನು ನೀವೆಲ್ಲ ಮರೆಯಬಾರದು. ಮತ್ತೆ ನಾವು ಅಧಿಕಾರಕ್ಕೆ ಬಂದ ಕೂಡಲೇ 10 ಕೆ.ಜಿ ಅಕ್ಕಿಯನ್ನು ಉಚಿತವಾಗಿ ಪ್ರತಿ ಬಡಕುಟುಂಬದ ವ್ಯಕ್ತಿಗೆ ನೀಡುತ್ತೇವೆ. ಇದು ನಮ್ಮ ಗ್ಯಾರೆಂಟಿ, ನಾವು ಈಗ ಕೊಟ್ಟಿರುವ ಮಾತನ್ನು ಅಧಿಕಾರಕ್ಕೆ ಬಂದ ಮೊದಲ ದಿನವೇ ಈಡೇರಿಸುತ್ತೇವೆ ಎಂದು ಹೇಳಿದ್ದಾರೆ.

ನಾನು ಯಾದ ಬಗ್ಗೆಯೂ ವೈಯಕ್ತಿಕ ಟೀಕೆ ಮಾಡಲ್ಲ. ಸಿದ್ದು ಸವದಿ ಇಲ್ಲಿ ಬೇನಾಮಿ ಆಸ್ತಿ ಮಾಡಿದ್ದಾರೆ ಎಂದು ಪತ್ರಿಕೆಗಳಲ್ಲಿ ಬಂದಿದೆ, ಇವರೊಬ್ಬರೇ ಅಲ್ಲ ಇಡೀ ಸರ್ಕಾರವೇ 40% ಕಮಿಷನ್‌ ಹೊಡೆದು ಕೋಟ್ಯಂತರ ರೂಪಾಯಿ ಬೇನಾಮಿ ಆಸ್ತಿ ಮಾಡಿಕೊಂಡಿದ್ದಾರೆ. ಅವರ ಸುಳ್ಳು ಭರವಸೆಗಳು, ಬಣ್ಣದ ಮಾತುಗಳನ್ನು ನಂಬಿ ಮತ್ತೆ ಮತ ಹಾಕಿ ಮೋಸ ಹೋಗಬೇಡಿ ಎಂದರು.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

1 day ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

1 day ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

1 day ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

1 day ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

1 day ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

1 day ago