Featured

ದೇಶ ವಿರೋಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ: ಪ್ರಧಾನಿ ಮೋದಿ ಖಡಕ್ ಸೂಚನೆ – Vishwanews24

ದೇಶ ವಿರೋಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ: ಪ್ರಧಾನಿ ಮೋದಿ ಖಡಕ್ ಸೂಚನೆ – Vishwanews24

ಕೇವಡಿಯಾ (ಗುಜರಾತ್): ಭಾರತಕ್ಕೆ ದ್ರೋಹ ಎಸಗುವವರಿಗೆ ವಿಶ್ವದ ಯಾವುದೇ ಜಾಗದಲ್ಲೂ ಸುರಕ್ಷಿತ ತಾಣ ಇಲ್ಲದಿರುವಂತೆ ಖಾತರಿಪಡಿಸಿಕೊಳ್ಳಬೇಕು ಎಂದು ಸಿಬಿಐ, ಕೇಂದ್ರ ಜಾಗೃತ ಆಯೋಗದ (ಸಿವಿಸಿ) ಅಧಿಕಾರಿಗಳಿಗೆ ಪ್ರಧಾನಿ ನರೇಂದ್ರ ಮೋದಿ ನಿರ್ದೇಶನ ನೀಡಿದ್ದಾರೆ.

ಗುಜರಾತ್‌ನ ಕೇವಡಿಯಾದಲ್ಲಿ ನಡೆದ ಸಿಬಿಐ ಮತ್ತು ಸಿವಿಸಿ ಜಂಟಿ ಸಮಾವೇಶ ಉದ್ದೇಶಿಸಿ ಆನ್‌ಲೈನ್ ಮೂಲಕ ಮಾತನಾಡಿದ ಅವರು, ‘ಎಷ್ಟೇ ಬಲಶಾಲಿಯಾಗಿದ್ದರೂ ದೇಶದ ಹಾಗೂ ಜನರ ಹಿತಾಸಕ್ತಿಗೆ ವಿರುದ್ಧವಾಗಿ ನಡೆದುಕೊಳ್ಳುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಹೇಳಿದ್ದಾರೆ.

ದೇಶದ ಬ್ಯಾಂಕ್‌ಗಳಿಗೆ ಸಾಲ ಮರುಪಾವತಿ ಮಾಡದೆ ವಿದೇಶಗಳಲ್ಲಿ ಆಶ್ರಯ ಪಡೆದಿರುವ ಉದ್ಯಮಿಗಳಾದ ವಿಜಯ್ ಮಲ್ಯ, ನೀರವ್ ಮೋದಿ, ಮೆಹುಲ್ ಚೋಕ್ಸಿ ವಿರುದ್ಧ ಸರ್ಕಾರವು ಕಾನೂನು ಕ್ರಮ ಕೈಗೊಳ್ಳುತ್ತಿರುವ ಸಂದರ್ಭದಲ್ಲೇ ಪ್ರಧಾನಿ ಅವರು ಈ ಹೇಳಿಕೆ ನೀಡಿದ್ದಾರೆ.

‘ನೀವು ಈ ಮಣ್ಣು ಹಾಗೂ ತಾಯಿ ಭಾರತಿಗಾಗಿ ಕೆಲಸ ಮಾಡುತ್ತಿದ್ದೀರಿ ಎಂಬುದು ನೆನಪಿರಲಿ. ನಮ್ಮ ದೇಶದ ವಿರುದ್ಧ ಕಾರ್ಯಾಚರಿಸುವವರಿಗೆ ವಿಶ್ವದ ಯಾವುದೇ ಮೂಲೆಯಲ್ಲಿಯೂ ಸುರಕ್ಷಿತ ನೆಲೆ ಇರದಂತೆ ನೋಡಿಕೊಳ್ಳಬೇಕಿದೆ. ದೇಶದ ಹಿತಾಸಕ್ತಿಗಾಗಿ ನಾವು ಕೆಲಸ ಮಾಡೋಣ’ ಎಂದು ಮೋದಿ ಹೇಳಿದ್ದಾರೆ.

Vishwa News 24

Recent Posts

ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ – vishwanews24

ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ ಹಳೆಯಂಗಡಿ: ಕಿನ್ನಿಗೋಳಿಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಸರ್ವಿಸ್ ಬಸ್ಸಿಗೆ…

3 minutes ago

ಉಡುಪಿ: ಸ್ಪೀಡ್‌ ರಾಡಾರ್‌ ಕೆಮರಾ ಕಣ್ಣು ; ಒಂದು ವಾರದಲ್ಲಿ 47,709 ವಾಹನಗಳು ಸಂಚಾರ ನಿಯಮ ಉಲ್ಲಂಘನೆ  – vishwanews24

ಉಡುಪಿ: ಸ್ಪೀಡ್‌ ರಾಡಾರ್‌ ಕೆಮರಾ ಕಣ್ಣು ; ಒಂದು ವಾರದಲ್ಲಿ 47,709 ವಾಹನಗಳು ಸಂಚಾರ ನಿಯಮ ಉಲ್ಲಂಘನೆ  ಉಡುಪಿ :…

20 minutes ago

CMRL ಅಕ್ರಮ ಹಣ ವರ್ಗಾವಣೆ ಪ್ರಕರಣ: ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ಈಡಿ ದಾಳಿ – vishwanews24

CMRL ಅಕ್ರಮ ಹಣ ವರ್ಗಾವಣೆ ಪ್ರಕರಣ: ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ಈಡಿ ದಾಳಿ ತಿರುವನಂತಪುರಂ: ಕೊಚ್ಚಿನ್…

28 minutes ago

ಮೇ 30-31 ರಂದು ದ.ಕ. ಜಿಲ್ಲೆಗೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಭೇಟಿ – vishwanews24

ಮೇ 30-31 ರಂದು ದ.ಕ. ಜಿಲ್ಲೆಗೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಭೇಟಿ ಮಂಗಳೂರು: ಭಾರತದ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು…

39 minutes ago

ಬೇಕರಿ ತಿನಿಸು, ಚಿಪ್ಸ್‌ಗಳಲ್ಲಿ ಕ್ಯಾನ್ಸರ್ ಕಾರಕ ರಾಸಾಯನಿಕ ಬಣ್ಣಗಳ ಬಳಕೆ: ಆಹಾರ ಸುರಕ್ಷತಾ ಇಲಾಖೆ ವರದಿ ಪ್ರಕಟ – vishwanews24

ಬೇಕರಿ ತಿನಿಸು, ಚಿಪ್ಸ್‌ಗಳಲ್ಲಿ ಕ್ಯಾನ್ಸರ್ ಕಾರಕ ರಾಸಾಯನಿಕ ಬಣ್ಣಗಳ ಬಳಕೆ: ಆಹಾರ ಸುರಕ್ಷತಾ ಇಲಾಖೆ ವರದಿ ಪ್ರಕಟ ಬೆಂಗಳೂರು: ಬೇಕರಿಯ…

48 minutes ago

ಮಂಗಳೂರು: ಬಕ್ರೀದ್ ಹಿನ್ನೆಲೆ ಅಕ್ರಮ ದನಕರುಗಳ ಹತ್ಯೆ ಸಾಗಾಟಕ್ಕೆ ಅವಕಾಶವಿಲ್ಲ : ದ.ಕ. ಡಿಸಿ ಸೂಚನೆ – vishwanews24

ಮಂಗಳೂರು: ಬಕ್ರೀದ್ ಹಿನ್ನೆಲೆ ಅಕ್ರಮ ದನಕರುಗಳ ಹತ್ಯೆ  ಸಾಗಾಟಕ್ಕೆ ಅವಕಾಶವಿಲ್ಲ : ದ.ಕ. ಡಿಸಿ ಸೂಚನೆ ಮಂಗಳೂರು: ಮುಂಬರುವ ಬಕ್ರೀದ್…

1 hour ago