Featured

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ – vishwanews24

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌

ಬೀದರ್‌: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ’ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್‌ ಹೇಳಿದರು.

ಇಲ್ಲಿನ ವಿಮಾನ ನಿಲ್ದಾಣದಲ್ಲಿ ಶನಿವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಆರ್‌ಎಸ್‌ಎಸ್‌ನವರು ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡಿರಲಿಲ್ಲ.

ಸ್ವಾತಂತ್ರ್ಯ ಹೋರಾಟದ ವಿರುದ್ಧ ಇದ್ದವರು. ಇವರನ್ನು ತಲೆ ಮೇಲೆ ಇಟ್ಟುಕೊಂಡು ಸುತ್ತೋಕೆ ಆಗುತ್ತಾ ಎಂದು ಪ್ರಶ್ನಿಸಿದರು.

ಆರ್‌ಎಸ್‌ಎಸ್‌ನವರು ಸ್ವಾತಂತ್ರ್ಯ ಹೋರಾಟದ ಆಶಯಗಳನ್ನು ಬುಡಮೇಲು ಮಾಡಲು ಪ್ರಯತ್ನಿಸುತ್ತಿದ್ದಾರೆ. ಸಂವಿಧಾನ, ರಾಷ್ಟ್ರಗೀತೆ, ತ್ರಿವರ್ಣ ಧ್ವಜದ ವಿರೋಧಿಗಳನ್ನು ಪೂಜಿಸೋಕೆ ಆಗುತ್ತಾ ಎಂದು ಕೇಳಿದರು.

ರಾಜ್ಯದ 18 ಜಿಲ್ಲೆಗಳಲ್ಲಿ ಬರ ಪರಿಸ್ಥಿತಿ ಇದೆ. ಸ್ಥಿತಿ ಬಹಳ ಗಂಭೀರವಾಗಿದೆ. ₹10 ಸಾವಿರ ಕೋಟಿ ಪರಿಹಾರಕ್ಕೆ ರಾಜ್ಯ ಸರ್ಕಾರ ಬೇಡಿಕೆಯಿಟ್ಟಿದೆ. ಬರ ಅಧ್ಯಯನಕ್ಕೆ ಕೇಂದ್ರ ತಂಡ ಕಳಿಸಿಕೊಡಬೇಕೆಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಮನವಿ ಮಾಡಿದ್ದಾರೆ. ಆದರೆ, ಕೇಂದ್ರ ಸರ್ಕಾರ ಇವೆರಡೂ ಮಾಡುತ್ತಿಲ್ಲ.

ಅಧಿವೇಶನ ಸುಗಮವಾಗಿ ನಡೆದರೆ ಈ ವಿಷಯಗಳು ಚರ್ಚೆಗೆ ಬರುತ್ತವೆ ಎಂದು ಬಿಜೆಪಿಯವರು ಸಚಿವ ಬಿ. ನಾಗೇಂದ್ರ ಹೆಸರು ಮುಂದೆ ಮಾಡಿ ಧರಣಿ ಮಾಡುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹಸಚಿವ ಅಮಿತ್ ಶಾ ಅವರನ್ನು ರಕ್ಷಿಸುತ್ತಿದ್ದಾರೆ ಹೊರತು ಬೇರೇನೂ ಇಲ್ಲ. ಬಿಜೆಪಿಯವರು ಬೆಂಗಳೂರಿನಿಂದ ಬಳ್ಳಾರಿವರೆಗೆ ಪಾದಯಾತ್ರೆ ಮಾಡಲಿ ನಮಗೆ ತೊಂದರೆ ಇಲ್ಲ ಎಂದು ಹೇಳಿದರು.

Vishwa News 24

Recent Posts

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ – vishwanews24

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…

19 minutes ago

ಬಿಜೆಪಿಯಿಂದ ಅಧಿವೇಶನಕ್ಕೆ ಅಡ್ಡಿ ಹಿಂದೆ ಹಿಡನ್ ಅಜೆಂಡಾ: ಯು.ಟಿ.ಖಾದರ್ ಆರೋಪ – vishwanews24

ವಿಧಾನಸಭೆ ಅಧಿವೇಶನ ರಾಜಕೀಯ ಮಾಡುವ ಸಭಾಂಗಣ ಆಗಬಾರದು .. ಪರಿಹಾರ ಕಂಡುಕೊಳ್ಳಲು ಇರುವ ವೇದಿಕೆಗೆ ಅಡ್ಡಿ ಪಡಿಸಿರುವ ಬಿಜೆಪಿಯನ್ನು ಜನತೆ…

43 minutes ago

ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ – ನಾಲ್ವರು ಮೀನುಗಾರರ ರಕ್ಷಣೆ – vishwanews24

ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ - ನಾಲ್ವರು ಮೀನುಗಾರರ ರಕ್ಷಣೆ ಕುಂದಾಪುರ :ಮೀನುಗಾರಿಕಾ ದೋಣಿಯ ಎಂಜಿನ್ ದೋಷದಿಂದ ಸಮುದ್ರದ…

1 hour ago

ಮಂಗಳೂರು: ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ : ಸಚಿವ ಯು.ಟಿ.ಖಾದರ್ – vishwanews24

ಮಂಗಳೂರು: ಕೃತಕ ಪನ್ನೀರ್, ಫುಡ್ ಕಲರ್‌, ಅಜಿನಮೊಟೊ ವಿರುದ್ಧ ಕ್ರಮ ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ :…

4 hours ago

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  – vishwanews24

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  ಪುತ್ತೂರು: ಹಲವು…

4 hours ago

ಉಡುಪಿ: ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಹಲ್ಲೆ ಪ್ರಕರಣ: ಆರೋಪಿ ವೈದ್ಯನ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಎಸ್ಪಿ, ಡಿಎಚ್‌ಓಗೆ ಮನವಿ – vishwanews24

ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಹಲ್ಲೆ ಪ್ರಕರಣ: ಆರೋಪಿ ವೈದ್ಯನ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಎಸ್ಪಿ, ಡಿಎಚ್‌ಓಗೆ ಮನವಿ ಉಡುಪಿ: ಉಡುಪಿ…

5 hours ago