ಕಾನ್ಪುರ, : ದೇಶ ಸೇವೆಯ ವಿಚಾರದಲ್ಲಿ ತನ್ನ ಅಜ್ಜಿ ಹಾಗೂ ಮಾಜಿ ಪ್ರಧಾನಿ ಇಂದಿರಾ ಗಾಂಧಿಯ ನಡೆಯನ್ನೇ ಅನುಸರಿಸುತ್ತೇನೆ ಎಂದು ಉತ್ತರ ಪ್ರದೇಶ ಪೂರ್ವ ವಿಭಾಗದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಭರವಸೆ ನೀಡಿದ್ದಾರೆ.
ಚುನಾವಣೆಯ ಪ್ರಚಾರ ಸಭೆಯೊಂದರಲ್ಲಿ ಮಾತನಾಡಿದ ಅವರು, ತನ್ನ ಅಜ್ಜಿ ಹಾಗೂ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಜತೆ ತಮ್ಮನ್ನು ತಾವು ಹೋಲಿಸಿಕೊಳ್ಳುವುದಿಲ್ಲ. ಇಂದಿರಾಜಿಯವರ ಮುಂದೆ ನಾನು ಏನೂ ಅಲ್ಲ. ಆದರೆ ಅವರ ಹೃದಯದಲ್ಲಿದ್ದ ಸೇವೆಯ ಆಸೆಯು ನನ್ನ ಮತ್ತು ಸೋದರನ ಹೃದಯದಲ್ಲಿಯೂ ಇದೆ. ಇದರಿಂದ ನಮ್ಮನ್ನು ಯಾರು ಪ್ರತ್ಯೇಕಿಸಲಾರರು ಎಂದು ಹೇಳಿದರು.
ಈ ಬಾರಿಯ ಚುನಾವಣೆಯಲ್ಲಿ ನೀವು ನಮಗೆ ಅವಕಾಶ ನೀಡುತ್ತೀರೋ, ಇಲ್ಲವೋ ಆದರೆ ನಿಮ್ಮ ಸೇವೆ ಮಾಡುವುದನ್ನು ನಾವು ಮುಂದುವರಿಸುತ್ತೇವೆ ಎಂದು ಹೇಳಿದರು.
ಬಿಜೆಪಿ ಸರ್ಕಾರ ದೇಶದ ಹಿತಕ್ಕಿಂತಲೂ ಕೇವಲ ಅವರ ಏಳಿಗೆ ಕುರಿತಷ್ಟೇ ಕಾಳಜಿ ಹೊಂದಿದ್ದಾರೆ. ಬಿಜೆಪಿ ಸರ್ಕಾರವು ಕೇವಲ ಪ್ರಚಾರ ಮತ್ತು ತೋರ್ಪಡಿಕೆಯ ಕೆಲಸವಸ್ಟೇ ಮಾಡುತ್ತಿದೆ ಎಂದು ತಿಳಿಸಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…